LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಕೇಂದ್ರದಿಂದ ನೆರವು ಪಡೆದಿಲ್ಲ: ಅಶ್ವಿನಿ

ನವದೆಹಲಿ: ಕ್ರೀಡಾ ಸಚಿವಾಲಯದಿಂದ ವೈಯಕ್ತಿಕ ಹಣಕಾಸಿನ ನೆರವು ಪಡೆದಿಲ್ಲ: ಅಶ್ವಿನ: ‘ಪ್ಯಾರಿಸ್ ಒಲಿಂಪಿಕ್ಸ್‍ಗೆ ಸಿದ್ಧತೆ ನಡೆಸಲು ಕ್ರೀಡಾ ಸಚಿವಾಲಯದಿಂದ ಯಾವುದೇ ವೈಯಕ್ತಿಕ ಹಣಕಾಸಿನ ನೆರವು ಪಡೆದಿಲ್ಲ. ಜೊತೆಗೆ ವೈಯಕ್ತಿಕ ತರಬೇತುದಾರನನ್ನು ನಿಯೋಜಿಸುವಂತೆ ಸಲ್ಲಿಸಿದ ಕೋರಿಕೆಯನ್ನು ತಿರಸ್ಕರಿಸಲಾಗಿತ್ತು’ ಎಂದು ಬ್ಯಾಡ್ಮಿಂಟನ್ ಡಬಲ್ಸ್ ಆಟಗಾರ್ತಿ ಅಶ್ವಿನಿ ಪೊನ್ನಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ಯಾರಿಸ್‍ಗೆ ತೆರಳಿದ ಭಾರತದ ಅಥ್ಲೀಟ್‍ಗಳಿಗೆ ಆರ್ಥಿಕ ನೆರವು ನೀಡಿದ ಕುರಿತು ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‍ಎಐ) ವಿವರವಾದ ದಾಖಲೆಗಳನ್ನು ಬಿಡುಗಡೆ ಮಾಡಿತ್ತು. ಅದರಂತೆ ಅಶ್ವಿನಿ ಅವರಿಗೆ ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಯೋಜನೆಯಡಿ (ಟಿಒಪಿಎಸ್) ರೂ.4.50 ಲಕ್ಷವನ್ನು ನೀಡಲಾಗಿತ್ತು. ವಾರ್ಷಿಕ ಕ್ಯಾಲೆಂಡರ್ ಅಡಿಯಲ್ಲಿ ರೂ.1.48 ಕೋಟಿ ಒದಗಿಸಲಾಗಿದೆ.

ಅದರಲ್ಲಿ ಆಟಕ್ಕೆ ಅಗತ್ಯವಿರುವ ಸಲಕರಣೆ, ಅಂತರರಾಷ್ಟ್ರೀಯ ಸ್ಪರ್ಧೆ ಹಾಗೂ ಸಹ ಆಟಗಾರರ ಖರ್ಚು ಸೇರಿದೆ ಎಂದು ಹೇಳಲಾಗಿತ್ತು. ‘ಈ ಮಾಹಿತಿ ನಿಜಕ್ಕೂ ಆಘಾತಕಾರಿ. ನಮಗೆ ಇಷ್ಟೊಂದು ಹಣ ಕೊಟ್ಟಿರುವುದಾಗಿ ದೇಶಕ್ಕೆ ಸಾರಿರುವುದು ಹಾಸ್ಯಾಸ್ಪದ. ನನಗೆ ಯಾವುದೇ ಹಣ ನೀಡಿಲ್ಲ. ರಾಷ್ಟ್ರೀಯ ಶಿಬಿರದ ಕುರಿತು ಮಾತನಾಡಲಾಗಿದೆ. ಆಗ ನೀಡಿದ ರೂ.1.5 ಕೋಟಿ ಎಲ್ಲಾ ಆಟಗಾರರ ಮೇಲೂ ಖರ್ಚು ಮಾಡಲಾಗಿತ್ತು’ ಎಂದು ಕರ್ನಾಟಕದ ಅಶ್ವಿನಿ ಅವರು ಪಿಟಿಐಗೆ ಪ್ರÀತಿಕ್ರಿಯಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು