LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಮೈಸೂರು, ಮಂಡ್ಯ ಬಂದ್: ಮಿಶ್ರ ಪ್ರತಿಕ್ರಿಯೆ

ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆ ಖಂಡಿಸಿ ಮೈಸೂರು ಹಾಗೂ ಮಂಡ್ಯದಲ್ಲಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ನೇತೃತ್ವದಲ್ಲಿ ಪ್ರತಿಭಟನೆ ನಡೆದವು.

ಇಂದು ಮಂಗಳವಾರ ಬೆಳಗ್ಗೆಯಿಂದಲೇ ವ್ಯಾಪಾರ ವಹಿವಾಟು ಎಂದಿನಂತೆ ಆರಂಭವಾಗಿದ್ದು, ಬಂದ್ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆರಂಭದಲ್ಲಿ ಬಸ್ ಸಂಚಾರ, ವಾಹನ ಸಂಚಾರ, ವ್ಯಾಪಾರ ವಹಿವಾಟುಗಳು ನಡೆದರೂ ನಂತರ ಅಡ್ಡಿಪಡಿಸಲಾಯಿತು. ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ವಾಹನಗಳಿಲ್ಲದೆ ಪರದಾಡಿದರು.

ಮುಂಜಾಗ್ರತಾ ಕ್ರಮವಾಗಿ ಮೈಸೂರು ಬಸ್ ನಿಲ್ದಾಣದ ಬಳಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಸಿಆರ್ ವ್ಯಾನ್, ಗಸ್ತು ವಾಹನ, ಕಮಾಂಡೋ ವಾಹನ ನಿಯೋಜನೆ ಮಾಡಲಾಗಿದೆ.ದಲಿತ ಕಾರ್ಯಕರ್ತರು ಅಮಿತ್ ಶಾ ಪ್ರತಿಕೃತಿಗೆ ಚಪ್ಪಲಿಯಿಂದ ತುಳಿದರು.

ಕೇಂದ್ರ ಬಸ್ ನಿಲ್ದಾಣದ ಬಳಿ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಬಸ್ ನಿಲ್ದಾಣದ ಪ್ರವೇಶ ದ್ವಾರದ ಬಳಿ ಧರಣಿ ಕುಳಿತ ಪ್ರತಿಭಟನಾನಿರತರು ಬಸ್ ಸಂಚಾರ ತಡೆದರು. ಬಸ್‌ಗಳ ಓಡಾಟ ನಿಲ್ಲಿಸಿ ಆಕ್ರೋಶ ಹೊರಹಾಕಿದರು. ಬಸ್ ನಿಲ್ದಾಣದ ಹೊರ ಭಾಗದಲ್ಲಿ ಅಮಿತ್ ಶಾ ಪ್ರತಿಕೃತಿಯ ಅಣಕು ಶವಯಾತ್ರೆ ನಡೆಸಿದರು. ಅಮಿತ್ ಶಾ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಆಕ್ರೋಶ ಹೊರಹಾಕಿದರು.

ಪ್ರತಿಕೃತಿಗೆ ಬೆಂಕಿ ಹಚ್ಚಲು ಪೊಲೀಸರು ಬಿಡದಿದ್ದಾಗ, ಪೊಲೀಸರು ಹಾಗೂ ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಕೊನೆಗೂ ಅಮಿತ್ ಶಾ ಪ್ರತಿಕೃತಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು. ಬೆಂಕಿ ಹಚ್ಚಿದ ತಕ್ಷಣ ಪೊಲೀಸರು ನೀರು ಹಾಕಿ ಬೆಂಕಿಯನ್ನು ನಂದಿಸಿದರು. ಸತ್ತೋದ ಅಮಿತ್ ಶಾ ಎಂದು ಪ್ರತಿಭಟನಾಕಾರರು ಕೂಗಿದರು.

ಪ್ರತಿಭಟನೆ ಹಿನ್ನೆಲೆ ಅರ್ ಎಸ್ ಎಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು, ರಸ್ತೆ ಮಧ್ಯದಲ್ಲೇ ತಡೆದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನಕಾರರು ಆರ್ ಎಸ್ಎಸ್ ಕಚೇರಿಯತ್ತ ತೆರಳದಂತೆ ಪೊಲೀಸರಿಂದ ಬ್ಯಾರಿಕೇಡ್ ಅಳವಡಿಸಿದರು.

ಇಂದು ಬೆಳಗ್ಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿಯು ಕರೆ ನೀಡಿರುವ ಮೈಸೂರು ಬಂದ್ ಬೆಂಬಲಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಸದಸ್ಯರು ಗ್ರಾಮಾಂತರ ಬಸ್ ನಿಲ್ದಾಣ(ಸಬ್ ಅರ್ಬನ್) ಮುಂಭಾಗ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಖಾಸಗಿ ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಮೈಸೂರು ಬಂದ್ ನಲ್ಲಿ ವಿವಿಧ ಧಾರ್ಮಿಕ ಸಂಸ್ಥೆಗಳ ಮುಖಂಡರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಟೌನ್ ಹಾಲ್ ಬಳಿಯ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು