LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕೇಂದ್ರ ಸಚಿವ ವಿ.ಸೋಮಣ್ಣರವರ ಪರಮ ಅಪ್ತ ಸಿ.ಎಂ.ರಾಜಪ್ಪರವರ ಹುಟ್ಟುಹಬ್ಬದ ಸಂಭ್ರಮಾಚರಣೆ

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾದ ಸಿ.ಎಂ.ರಾಜಪ್ಪರವರ ಹುಟ್ಟುಹಬ್ಬದ ಶುಭಾ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಯುವ ಮುಖಂಡರಾದ ಡಾ||ಅರುಣ್ ಸೋಮಣ್ಣರವರು ಮತ್ತು ಮಂಡಲ ಬಿಜೆಪಿ ಅಧ್ಯಕ್ಷರಾದ ವಿಶ್ವನಾಥಗೌಡರವರು ಮತ್ತು ಮಾಜಿ ಬಿಬಿಎಂಪಿ ಸದಸ್ಯ ಮೋಹನ್ ಕುಮಾರ್ ರವರು ಹುಟ್ಟುಹಬ್ಬದ ಶುಭಾ ಕೋರಿ ಆತ್ಮೀಯವಾಗಿ ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಿ.ಎಂ.ರಾಜಪ್ಪ ನನ್ನ ರಾಜಕೀಯ ಗುರುಗಳಾದ ಕೇಂದ್ರ ಸಚಿವರಾದ ವಿ.ಸೋಮಣ್ಣರವರ ಮಾರ್ಗದರ್ಶನದಲ್ಲಿ ರಾಜಕೀಯ ಸೇವೆ ಮತ್ತು ಸಮಾಜಸೇವೆ ಮಾಡುತ್ತಿದ್ದೇನೆ.ಜನರ ನೋವು ನಲಿವುಗಳಿಗೆ ಸ್ಪಂದಿಸಬೇಕು, ನಮ್ಮ ಕೈಯಲ್ಲಿ ಅದಷ್ಟು ಹೆಚ್ಚಿನ ಸಹಾಯ ಮಾಡಿ ಆರ್ಥಿಕವಾಗಿ ಹಿಂದುಳಿದ ಸಮಾಜದ ಜನರನ್ನು ಸಮಾಜ ಮುಖ್ಯವಾಹಿನಿಗೆ ತರಬೇಕು ಎಂದು ಕೇಂದ್ರ ಸಚಿವ ವಿ.ಸೋಮಣ್ಣರವರು ನಮಗೆ ಮಾರ್ಗದರ್ಶನ ನೀಡಿದರು. ಅದರಂತೆ ನಾನು ರಾಜಕೀಯ ಕ್ಷೇತ್ರದಲ್ಲಿ ಕಳೆದ 20ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ.

ಪ್ರಧಾನಿ ನರೇಂದ್ರಮೋದಿ ರವರ ನೇತೃತ್ವ ಮತ್ತು ಕೇಂದ್ರ ಸಚಿವ ವಿ.ಸೋಮಣ್ಣರವರ ಮಾರ್ಗದರ್ಶನದಲ್ಲಿ ಕೇಂದ್ರ ಸರ್ಕಾರದ ಅಭಿವೃದ್ದಿ ಯೋಜನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ಕಾರ್ಯವನ್ನು ಬಿಜೆಪಿ ಯುವ ಮುಖಂಡ ಡಾ||ಅರುಣ್ ಸೋಮಣ್ಣರವರ ನೇತೃತ್ವದಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿಯಾನ ಮಾಡಲಾಗುತ್ತಿದೆ. ಜನರ ನಡುವೆ, ಜನರ ಜೊತೆಯಲ್ಲಿ ಜನಸ್ನೇಹಿಯಾಗಿ ಸಂಘಟನೆ ಮಾಡುವುದು ನಮ್ಮ ಆಶಯ ಎಂದು ಹೇಳಿದರು. ಹುಟ್ಟುಹಬ್ಬದ ಶುಭಾ ಸಂದರ್ಭದಲ್ಲಿ ಮಹೇಶ್ ಪಿ. ಯು. ಕಾಲೇಜು ನಲ್ಲಿ ರಕ್ತದಾನ ಮಹತ್ವ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸಲು ಉಚಿತ ರಕ್ತದಾನ ಶಿಬಿರ ಅಯೋಜಿಸಲಾಗಿತ್ತು. ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು