LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೇಂದ್ರ ಸರ್ಕಾರ ಪ್ರತಿಭಟನಾ ನಿರತ ರೈತರೊಂದಿಗೆ ಮಾತನಾಡಲಿ: ಪಂಜಾಬ್ ಸಿಎಂ

ಚಂಡೀಗಢ: ಕೇಂದ್ರ ಸರ್ಕಾರ ಮೊಂಡುತನ ಬಿಟ್ಟು ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ)ಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಮಾತುಕತೆ ನಡೆಸಬೇಕು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮಂಗಳವಾರ ಆಗ್ರಹಿಸಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನೇತೃತ್ವದಲ್ಲಿ ರೈತರು ಕಳೆದ ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ.

ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಪಂಜಾಬ್‌ನ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ನವೆಂಬರ್ 26 ರಿಂದ ಖಾನೌರಿ ಗಡಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಅವರ ಉಪವಾಸವು ಭಾನುವಾರ 27ನೇ ದಿನಕ್ಕೆ ಕಾಲಿಟ್ಟಿದ್ದು, ವೈದ್ಯರು ಅವರ ಆರೋಗ್ಯ ಸ್ಥಿತಿ "ಚಿಂತಾಜನಕ"ವಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ತನ್ನ ಮೊಂಡುತನವನ್ನು ಬಿಟ್ಟು ರೈತ ಸಂಘಟನೆಗಳೊಂದಿಗೆ ಮಾತುಕತೆ ನಡೆಸಬೇಕು ಎಂದು ಎಕ್ಸ್‌ನಲ್ಲಿ ಪಂಜಾಬ್ ಸಿಎಂ ಪೋಸ್ಟ್ ಮಾಡಿದ್ದಾರೆ.

"ಮೋದಿ ಜಿಯಿಂದ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ನಿಲ್ಲಿಸಲು ಸಾಧ್ಯವಾಗುವುದಾದರೆ ದೆಹಲಿಯಿಂದ 200 ಕಿಲೋಮೀಟರ್ ದೂರದಲ್ಲಿ ಕುಳಿತಿರುವ ರೈತರೊಂದಿಗೆ ಮಾತನಾಡಲು ಸಾಧ್ಯವಾಗುತ್ತಿಲ್ಲವೇ? ನೀವು ಯಾವ ಸಮಯಕ್ಕಾಗಿ ಕಾಯುತ್ತಿದ್ದೀರಿ?" ಎಂದು ಮಾನ್ ಪ್ರಶ್ನಿಸಿದ್ದಾರೆ.

ಇದು ಕೇಂದ್ರ ಸರ್ಕಾರದ ಕರ್ತವ್ಯವಾಗಿದ್ದು, ಯಾವುದೇ ಸಮಸ್ಯೆ ಇದ್ದರೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ಪಂಜಾಬ್ ಸಿಎಂ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು