LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೇರಳದ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ; ಡಿಸೆಂಬರ್ 2 ರಂದು ಭಾರೀ ಮಳೆ ಸಾಧ್ಯತೆ: IMD

ತಿರುವನಂತಪುರಂ: ಒಂದು ಕಡೆ ತಮಿಳುನಾಡಿ ಹಾಗೂ ಪುದುಚೇರಿಯಲ್ಲಿ ಫೆಂಗಲ್ ಚಂಡಮಾರುತ ಅಬ್ಬರಿಸುತ್ತಿದ್ದು, ಮತ್ತೊಂದು ಕಡೆ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಭಾನುವಾರ ಕೇರಳದ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಡಿಸೆಂಬರ್ 2 ರಂದು ಈ ನಾಲ್ಕು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.

IMD ಯ ಇತ್ತೀಚಿನ ಅಪ್‌ಡೇಟ್ ಪ್ರಕಾರ, ಉತ್ತರದ ಜಿಲ್ಲೆಗಳಾದ ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್ ಮತ್ತು ಕಣ್ಣೂರಿನಲ್ಲಿ ಸೋಮವಾರ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.

ಹವಾಮಾನ ಇಲಾಖೆ ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶ್ಶೂರ್ ಜಿಲ್ಲೆಗಳಿಗೆ "ಆರೆಂಜ್ ಅಲರ್ಟ್" ಘೋಷಿಸಿದ್ದು, ಪತ್ತನಂತಿಟ್ಟ, ಅಲಪ್ಪುಳ, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ.

ರೆಡ್ಡ್ ಅಲರ್ಟ್ ಎಂದರೆ 24 ಗಂಟೆಗಳಲ್ಲಿ 20 ಸೆಂ.ಮೀ ಗಿಂತ ಹೆಚ್ಚು ಮಳೆಯಾಗುವುದನ್ನು ಸೂಚಿಸುತ್ತದೆ. ಆರೆಂಜ್ ಅಲರ್ಟ್ ಎಂದರೆ 11 ಸೆಂ.ಮೀ ನಿಂದ 20 ಸೆಂ.ಮೀ ವರೆಗಿನ ಅತಿ ಭಾರೀ ಮಳೆಯನ್ನು ಸೂಚಿಸುತ್ತದೆ ಮತ್ತು ಹಳದಿ ಅಲರ್ಟ್ 6 ಸೆಂ.ಮೀ ರಿಂದ 11 ಸೆಂ.ಮೀ ನಡುವೆ ಭಾರೀ ಮಳೆಯ ಬಗ್ಗೆ ಎಚ್ಚರಿಕೆ ನೀಡುತ್ತದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು