LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಕೇರಳ ನೆರೆ ಸಂತ್ರಸ್ತರಿಗೆ ಮನೆ ವಿಚಾರದಲ್ಲಿ; ಸಿಎಂ ನಡೆಯಲ್ಲಿ ಮಾನವೀಯ ನೆಲೆಯಿಲ್ಲ, ಗುಲಾಮಗಿರಿಯ ಸಂಕೇತ: ಸಿಟಿ ರವಿ 

ಬೆಂಗಳೂರು: ನೆರೆ ರಾಜ್ಯ ಕೇರಳ ಪ್ರವಾಹ ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದ ಬಗ್ಗೆ ಬಿಜೆಪಿ ನಾಯಕ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತವೆಂದು ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ‌ಕೇರಳದಲ್ಲಿ ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಕೊಡುವ ಭರವಸೆ ನೀಡಿದೆ. ಮಾನವೀಯ ನೆಲೆಯಲ್ಲಿ ಮಾಡುವುದೇನೋ ಸರಿ. ಆದರೆ, ಸಿದ್ದರಾಮಯ್ಯ ಅವರ ಈ ನಡೆ ಮಾನವೀಯ ನೆಲೆಯಿಂದ ಕಾಣುತ್ತಿಲ್ಲ. ಇದು ಗುಲಾಮಗಿರಿಯ ಸಂಕೇತ. ಹಿಂದೆ ರಾಹುಲ್ ಗಾಂಧಿ, ಈಗ ಪ್ರಿಯಾಂಕಾ ಗಾಂಧಿ ಅಲ್ಲಿ ಸಂಸದರಾಗಿದ್ದಾರೆ. ನಮ್ಮ ರಾಜ್ಯದಲ್ಲಿ ಇಲ್ಲಿ ಬಾಣಂತಿಯರ ಸಾವು, ಎತ್ತಿನಹೊಳೆ ಯೋಜನೆ ಸಂಬಂಧ ಅಧಿಕಾರಿ ಜೊತೆ ಜಗಳ ಮಾಡಿ ರೈತರೊಬ್ಬರು ಹೊಳೆಗೆ ಹಾರಿ ಸಾವನ್ನಪ್ಪಿದ್ದಾರೆ. ಇದರ ಕುರಿತು ರಾಜ್ಯ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಸಿಟಿ ರವಿ ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯರನ್ನು ಉದ್ದೇಶಿಸಿ ವಾಗ್ದಾಳಿ ನಡೆಸಿದ ಸಿಟಿ ರವಿ, ರಾಜ್ಯದಲ್ಲಿನ ಸಮಸ್ಯೆಗಳ ಬಗ್ಗೆ ನಿಮಗೆ ಕಾಳಜಿ ಇಲ್ಲ. ನಿಮ್ಮ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತ. ಈ ಪ್ರಶ್ನೆಯನ್ನು ವಿಧಾನಸಭೆಯಲ್ಲೂ ಮಾಡುತ್ತೇವೆ. ಬಾಣಂತಿಯರ ಸಾವು, ಹಸುಗೂಸುಗಳ ಸಾವು ಪ್ರಕರಣ ಸಂಬಂಧ ಎಸ್​ಐಟಿ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಮೇಲೆ ಕೇಳಿಬರುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಉತ್ತರ ನೀಡುವಲ್ಲೇ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕರು ವ್ಯಸ್ತರಾಗಿದ್ದಾರೆ. ನಿಮ್ಮ ರಕ್ಷಣೆ ಮಾಡಿಕೊಳ್ಳಲು ನೀವು ಮಾಡುವ ಕೆಲಸವನ್ನು ರಾಜ್ಯದ ವಿಷಯಗಳಿಗೆ ಮಾಡುತ್ತಾ ಇಲ್ಲ ಎಂದು ರವಿ ಟೀಕಿಸಿದ್ದಾರೆ.

ಮುರುಡೇಶ್ವರದಲ್ಲಿ ಶಾಲಾ ಮಕ್ಕಳು ನೀರು ಪಾಲಾದ ಬಗ್ಗೆ ಪ್ರತಿಕ್ರಿಯಿಸಿ, ಈ ವಿಚಾರದ ಬಗ್ಗೆ ನನಗೆ ಹೆಚ್ಚು ಮಾಹಿತಿ ಇಲ್ಲ. ಆದರೆ, ಈ ಘಟನೆ ಆಗಬಾರದಿತ್ತು. ಮಕ್ಕಳನ್ನು ನೀರಿಗೆ ಬಿಟ್ಟವರು ಯಾರು? ಶಾಲಾ ಮಕ್ಕಳು ಎಂದು ಹೇಳಲಾಗುತ್ತಿದೆ. ತಪ್ಪಿತಸ್ಥರ ವಿರುದ್ದ ಕ್ರಮ ಆಗಬೇಕು ಎಂದು ರವಿ ಆಗ್ರಹಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು