LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಕೊಹ್ಲಿ 30ನೇ ಶತಕ! ಆಸೀಸ್‍ಗೆ 534 ರನ್ ಬೃಹತ್ ಗುರಿ!

ಪರ್ತ್‍ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾಪತ ತಂಡ ಅಭೂತಪೂರ್ವ ಪ್ರದರ್ಶನ ನೀಡುತ್ತಿದೆ. ಪಂದ್ಯದ 2 ದಿನ ವಿಕೆಟ್ ನಷ್ಟವಿಲ್ಲದೆ 172 ರನ್ ಗಳಿಸಿದ್ದ ಭಾರತ ತಂಡ 3 ದಿನವಾದ ಭಾನುವಾರ ದಿನವಿಡೀ ಆಸೀಸ್ ಬೌಲರ್ ಗಳನ್ನು ಗೋಳು ಹೊಯ್ದುಕೊಂಡಿತು. ಯಶಸ್ವಿ ಜೈಸ್ವಾಲ್ ಬಳಿಕ ಭಾರತದ ರನ್ ಮಷಿನ್ ವಿರಾಟ್ ಕೊಹ್ಲಿ ಅವರು ಸಹ ಶತಕ ಬಾರಿಸಿದ್ದಾರೆ. ಅವರು ಶತಕ ಪೂರೈಸುತ್ತಿದ್ದಂತೆ ಭಾರತ 6 ವಿಕೆಟ್ ಗೆ 487 ರನ್ ಗಳಿಸಿದ್ದ ಭಾರತ ತಂಡ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ.

ಕೊಹ್ಲಿ 30ನೇ ಶತಕ: ವಿರಾಟ್ ಕೊಹ್ಲಿ(100) ಮತ್ತು ನಿತೇಶ್ ಕುಮಾರ್ ರೆಡ್ಡಿ (38) ಅವರು ಆಸ್ಟ್ರೇಲಿಯಾ ವಿರುದ್ಧ ಪ್ರಹಾಲ ಮುಂದುವರಿಸಿದರು. ಪ್ರಥಮ ಇನ್ನಿಂಗ್ಸ್ ನಲ್ಲಿ ಸರ್ವಾಧಿಕ 41 ರನ್ ಗಳಿಸಿದ್ದ ನಿತೇಶ್ ದ್ವಿತೀಯ ಇನ್ನಿಂಗ್ಸ್ ನಲ್ಲೂ 27 ಎಸೆತಗಳಿಂದ ಎರಡು ಸಿಕ್ಸರ್ , 3 ಬೌಂಡರಿಗಳಿದ್ 38 ರನ್ ಗಳಿಸಿ ನಾಟೌಟ್ ಆಗಿ ಉಳಿದರು. ಮತ್ತೊಂದು ಕಡೆ ವಿರಾಟ್ ಕೊಹ್ಲಿ ಅವರು 148 ಎಸೆತಗಳಿಂದ 8 ಬೌಂಡರಿ ಮತ್ತು 2 ಸಿಕ್ಸರ್ ಗಳಿದ್ದ 100 ರನ್ ಗಳಿಸಿದರು. ವಿರಾಟ್ ಅವರು 30ನೇ ಶತಕ ಪೂರೈಸುತ್ತಿದ್ದಂತೆ ಭಾರತ ತಂಡ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು.

ಈ ಶತಕದ ಮೂಲಕ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಮೀರಿ ನಿಂತರು. ಇದು ಆಸ್ತ್ರೇಲಿಯಾ ನೆಲದಲ್ಲಿ ಅವರ 7ನೇ ಶತಕವಾಗಿದೆ. ಈವರೆಗೆ ಆಸ್ಟ್ರೇಲಿಯಾ ನೆಲದಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಸಚಿನ್ ತೆಂಡೂಲ್ಕರ್ (6) ಅವರ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿ
ಕೊಂಡರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು