LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕೋಟ್ಯಂತರ ರೂ. ಮೌಲ್ಯದ ಗಾಂಜಾ, ಮಾದಕ ವಸ್ತು ವಶ

ಬೆಂಗಳೂರು: ಹೊಸ ವರ್ಷ ಆಚರಣೆ ಹಿನ್ನೆಲೆ ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹಲವರನ್ನು ಬಂಧಿಸಿ ಕೋಟ್ಯಂತರ ರೂ. ಮೌಲ್ಯದ ಗಾಂಜಾ ಹಾಗೂ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಕೇಕ್ ಪಾಕೆಟ್‍ಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ರಕ್ಷಿತ ರಮೇಶ್ ಮೇಲಪ್ಪನವರ್(23) ಎಂಬಾತನನ್ನು ಬಂಧಿಸಿ ಎರಡೂವರೆ ಕೋಟಿ ರೂ ಬೆಲೆ ಬಾಳುವ ಮಾದಕ ವಸ್ತುಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿರುತ್ತಾರೆ.

ಈತನಿಂದ ಹೈಡ್ರೋ ಗಾಂಜಾ, ಎಲ್‍ಎಸ್ ಡಿ ಸ್ಟ್ರಿಪ್ಸ್,, ಗಾಂಜಾ, ಚರಸ್, ಎಂ ಡಿ ಎಂ ಕ್ರಿಸ್ಟಿಲ್ಸ್, ತೂಕದ ಮಷೀನ್, ಎರಡು ಮೊಬೈಲ್ ಫೋನ್ ಮತ್ತು ಒಂದು ಲಕ್ಷ ಮೂವತ್ತು ರೂಪಾಯಿ ಕ್ಯಾಶ್ ವಶಪಡಿಸಿಕೊಂಡಿರುತ್ತಾರೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ಮತ್ತೊಂದು ಪ್ರಕರಣದಲ್ಲಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು 5 ಲಕ್ಷ ರೂ ಬೆಲೆ ಬಾಳುವ ಗಾಂಜಾ ವಶಪಡಿಸಿಕೊಂಡು ರಾಜೀವ್ ಎಂಬ ಆರೋಪಿಯನ್ನು ಬಂಧಿಸಿರುತ್ತಾರೆ.

ಗೋವಿಂದರಾಜನಗರ ಪೊಲೀಸರು ಸ್ವಾದಿನ್ ಮತ್ತು ಲಕ್ಷ್ಮೀನಾರಾಯಣ ಎಂಬ ಆರೋಪಿಗಳನ್ನು ಬಂಧಿಸಿ ಎರಡು ಕೆಜಿ ಗಾಂಜಾ, ರಾಜಗೋಪಾಲ್ ನಗರ ಪೊಲೀಸರು ರಾಜೀವ್ ಪ್ರಧಾನ್ ಎಂಬ ಆರೋಪಿಯನ್ನು ಬಂಧಿಸಿ 5:30ಕೆಜಿ ಗಾಂಜಾ, ಬಸವೇಶ್ವರನಗರ ಪೊಲೀಸರು ತಾಂಡವೀಶ್ವರ ಮತ್ತು ರಾಜಕುಮಾರ್ ಸಿಂಗ್ ಎಂಬ ಆರೋಪಿಗಳನ್ನು ಬಂಧಿಸಿ ಒಂದೂವರೆ ಕೆಜಿ ಗಾಂಜಾ, ವಿಜಯನಗರ ಪೊಲೀಸರು ಪ್ರೇಮ್ ಜಿತ್ ಸಿಂಗ್ ಎಂಬ ಆರೋಪಿಯನ್ನು ಬಂಧಿಸಿ ಒಂದೂವರೆಕೆಜಿ ಗಾಂಜಾ, ಜೆಜೆ ನಗರ ಪೊಲೀಸರುಆದಿಲ್ ಮತ್ತು ಅಫ್ತಾಬ್ ಎಂಬ ಆರೋಪಿಗಳನ್ನು ಬಂಧಿಸಿ 20 ಗ್ರಾಂ ಎಂಡಿಎಂಎ ಮಾದಕ ವಸ್ತು ಮತ್ತು ಎರಡು ಮೊಬೈಲ್ ಫೋನ್ 1,700 ನಗದು, ಕಾಮಾಕ್ಷಿಪಾಳ್ಯ ಪೊಲೀಸರು ಸದ್ದಾಮ್ ಹುಸೇನ್ ಎಂಬ ಆರೋಪಿಯನ್ನು ಬಂಧಿಸಿ ಒಂದೂವರೆ ಕೆಜಿ ಗಾಂಜಾ,

ಯಲಹಂಕ ಉಪನಗರ ಪೊಲೀಸರು ಸುಭೀರ್, ರೋಷನ್ ಮತ್ತು ಜಯಂತ್ ಎಂಬ ಆರೋಪಿಗಳನ್ನು ಬಂಧಿಸಿ 15 ಕೆಜಿ ಗಾಂಜಾ, ಅಮೃತಳ್ಳಿ ಪೊಲೀಸರು ಕೇರಳದ ಶಾನ್ವಿನ್ ಎಂಬ ಆರೋಪಿಯನ್ನು ಬಂಧಿಸಿ 85 ಗ್ರಾಂ ಎಂಡಿಎಂಎ ಕ್ರಿಸ್ಟಿಲ್ಸ್, ಕೊಡಿಗೆಹಳ್ಳಿ ಪೊಲೀಸರು ಸಮೀಲ್ ಅಹಮದ್ ಮೈಸೂರ್ ನಿವಾಸಿ ಎಂಬಾತನನ್ನು ಬಂಧಿಸಿ 34 ಗ್ರಾಂ ಎಂಡಿಎಂ ಕ್ರಿಷ್ಟಲ್ಸ್, ಬಾಗಲೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ 14 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿರುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು