LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕೋರ್ಟ್‍ಗೆ ವರದಿ ಸಲ್ಲಿಕೆ ಮುಡಾ ಹಗರಣದ ಸಿಎಂ ವಿರುದ್ಧದ ಲೋಕಾಯುಕ್ತ ತನಿಖೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣಕ್ಕೆ ಸಂಬಂಧಪಟ್ಟಂತೆ ದಾಖಲಾಗಿದ್ದ ದೂರಿನ ತನಿಖೆಯನ್ನು ನಡೆಸಿದ್ದ ಲೋಕಾಯುಕ್ತ ಇಂದು ತನಿಖಾ ವರದಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ಅವರಿದ್ದ ಪೀಠಕ್ಕೆ ಸಲ್ಲಿಕೆ ಮಾಡಲಾಗಿದೆ.

ಲೋಕಾಯುಕ್ತ ಎಸ್ಪಿ ಉದೇಶ್ ಅವರು ಸುಮಾರು 11 ಸಾವಿರ ಪುಟಗಳ ತನಿಖಾ ವರದಿಯನ್ನು ಇಂದು ಸಲ್ಲಿಕೆಯಾಗಿದೆ.ಅಂತಿಮ ವರದಿಯನ್ನು ಪಡೆದ ನ್ಯಾಯಾಲಯ ವಿಚಾರಣೆಯನ್ನು ಫೆ. 24ಕ್ಕೆ ಮುಂದೂಡಿದೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾವುದೇ ರೀತಿಯ ಸಾಕ್ಯಾಧಾರಗಳಿಲ್ಲವೆಂದು ವರದಿಯಲ್ಲಿ ಪ್ರಸ್ತಾಪಿಸಲಾಗಿದೆ ಎಂದು ದೂರು ದಾಖಲು ಮಾಡಿದ್ದ ಸ್ನೇಹಮಯಿ ಕೃಷ್ಣ ಎಂಬುವರಿಗೆ ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ಅವರು ನೋಟಿಸ್‍ನಲ್ಲಿ ತಿಳಿಸಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ನೀಡಿರುವ ಸಮನ್ಸ್ ಪ್ರಶ್ನಿಸಿ ಹೈಕೋರ್ಟ್‍ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸಹ ಇಂದೇ ನಡೆಯಲಿದೆ. ಸಮನ್ಸ್ ಪ್ರಶ್ನಿಸಿ ಇಬ್ಬರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಪಟ್ಟಂತೆ ಇಂದಿನವರೆಗೂ ಹೈಕೋರ್ಟ್ ತಡೆ ನೀಡಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು