LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಕೋಲಾರದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಕೋಲಾರ: ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಪ್ರತೀ ವರ್ಷವು ಸೆ. 27 ರಂದು ಜಿಲ್ಲೆಯ ಯಾವುದಾದರೂ ಪ್ರವಾಸಿ ಸ್ಥಳದಲ್ಲಿ ಆಚರಿಸಲಾಗುತ್ತದೆ. ಈ ವರ್ಷದಸಂದೇಶ “ಪ್ರವಾಸೋದ್ಯಮ ಮತ್ತು ಶಾಂತಿ” “TOURISM AND PEACE” ಆಗಿರುತ್ತದೆ. ಆದ್ದರಿಂದ ಕೋಲಾರ ನಗರದ ಸೋಮೇಶ್ವರ ದೇವಾಲಯದ ಆವರಣದಲ್ಲಿ ಸಂದೇಶಕ್ಕನುಗುಣವಾಗಿ ಆಚರಣೆ ಮಾಡುವ ಹಿನ್ನೆಲೆಯಲ್ಲಿ ಶಾಂತಿಗಾಗಿ ಯೋಗಾಕಾರ್ಯಕ್ರವನ್ನು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಆಯುಷ್ ಇಲಾಖೆ ಹಾಗೂ ಸರ್ಕಾರಿ ಪದವಿಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ‌‌

ಕಾರ್ಯಕ್ರಮಕ್ಕೆ ಬೆಳಿಗ್ಗೆ 8.00 ಗಂಟೆಗೆ ಸರಿಯಾಗಿ ಮಾನ್ಯ ಅಪರಜಿಲ್ಲಾಧಿಕಾರಿಗಳು ಚಾಲನೆ ನೀಡಿದರು.ಆಯುಷ್ ಇಲಾಖೆಯ ಯೋಗಾತರ ಬೇತುದಾರರರು ಅಚ್ಚುಕಟ್ಟಾಗಿ ಯೋಗಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದ ಅಂಗವಾಗಿ ನಗರದ ಪದವಿ ಕಾಲೇಜಿನ ಪ್ರವಾಸೋದ್ಯಮ ಮತ್ತು ಇತಿಹಾಸ ವಿದ್ಯಾರ್ಥಿಗಳಿಗೆ ನಡೆಸಿದ ಭಾಷಣ, ರಸಪ್ರಶ್ನೆ ಮುಂತಾದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ಐತಿಹಾಸಿಕ ಸ್ಥಳ ಸೋಮೇಶ್ವರ ದೇವಾಲಯದಿಂದ ಕೋಲಾರಮ್ಮ ದೇವಾಲಯದವರೆಗೆ ಹೆರಿಟೇಜ್ ವಾಕ್ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಮಾನ್ಯ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಮಂಗಳ ಎಸ್.ಎಂ. ರವರು, ಆಯುಷ್ ಅಧಿಕಾರಿಗಳಾದ ಡಾ.ರಾಘವೇಂದ್ರ ರವರು ಹಾಗೂ ಸಿಬ್ಬಂದಿಗಳು, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಗೀತಾ ರವರು ಹಾಗೂ ವಿದ್ಯಾರ್ಥಿಗಳು, ಕೋಲಾರ ನಗರದ ಪದವಿ ಕಾಲೇಜಿನ ಪ್ರಾದ್ಯಾಪಕರುಗಳು ಹಾಗೂ ವಿದ್ಯಾರ್ಥಿಗಳು, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಗೌರಿಭಟ್ ಹಾಗೂ ಸಿಬ್ಬಂದಿಗಳು, ಪ್ರವಾಸಿ ಮಿತ್ರ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು