LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಕೋಲ್ಕತ್ತ ವೈದ್ಯರ ಹತ್ಯೆ ಖಂಡಿಸಿ ಹೊರ ರೋಗಿಗಳ ಚಿಕಿತ್ಸೆ ಬಂದ್ ರಕ್ಷಣೆ ಕೋರಿ ತಹಶೀಲ್ದಾರ್, ಡಿವೈಎಸ್‍ಪಿಗೆ ವೈದ್ಯರ ಮನವಿ

ಹೊಸಕೋಟೆ: ಆಗಸ್ಟ್ 9ರಂದು ಕೋಲ್ಕತ್ತದ ಆರ್‍ಜಿ ಕರ್ ಆಸ್ಪತ್ರೆಯಲ್ಲಿ ತರಬೇತಿ ನಿರತ ಮಹಿಳಾ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆ, ಆಸ್ಪತ್ರೆ ಧ್ವಂಸ ಮಾಡಿರುವುದನ್ನು ಖಂಡಿಸಿ ತಾಲೂಕು ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.

ನಗರದ ಕೆಇಬಿ ವೃತ್ತದಿಂದ ಶಾಂತಿಯುತ ಮೆರವಣಿಗೆಯಲ್ಲಿ ಹೊರಟ ವೈದ್ಯರು ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ನರೇಂದ್ರಬಾಬುರವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶ್ರೀನಿವಾಸ ಆಸ್ಪತ್ರೆಯ ಡಾ: ನಾಗರಾಜ್, ಅಖಿಲ ಭಾರತ ವೈದ್ಯಕೀಯ ಸಂಘದ ಸೂಚನೆಯಂತೆ ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆಯವರೆವಿಗೂ ತುರ್ತು ಚಿಕಿತ್ಸಾ ವಿಭಾಗ ಮತ್ತು ಅಪಘಾತ ವಿಭಾಗಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ವಿಭಾಗಗಳಲ್ಲಿ 24 ಗಂಟೆಗಳ ಕಾಲ ವೈದ್ಯಕೀಯ ಸೇವೆ ಲಭ್ಯವಿರುವುದಿಲ್ಲ ಕಾರ್ಯನಿರತ ವೈದ್ಯರಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕು, ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.

ಇಂತಹ ಕೃತ್ಯಗಳು ಮರುಕಳಿಸದಂತೆ ಸರಕಾರ ಸೂಕ್ತ ಎಚ್ಚರಿಕೆ ಕ್ರಮ ವಹಿಸಬೇಕು. ವೈದ್ಯರ ಸೇವೆಗೆ ಅಡ್ಡಿಪಡಿಸುವ ಹಾಗೂ ಆಸ್ಪತ್ರೆಗೆ ಹಾನಿಯುಂಟು ಮಾಡುವವರ ವಿರುದ್ಧ ರಾಜ್ಯದಲ್ಲಿ 2009ರಲ್ಲಿ ಜಾರಿಗೊಳಿಸಿರುವ ವೈದ್ಯಕೀಯ ಸೇವಾ ಸಿಬ್ಬಂದಿಯ ವಿರುದ್ಧ ಹಿಂಸಾಚಾರದ ನಿಷೇಧ ಮತ್ತು ವೈದ್ಯಕೀಯ ಸೇವಾ ಸಂಸ್ಥೆಗಳಲ್ಲಿನ ಆಸ್ತಿ ಹಾನಿ ಕಾಯಿದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ವೈದ್ಯರಿಗೆ, ಆಸ್ಪತ್ರೆಗಳಿಗೆ ರಕ್ಷಣೆ ನೀಡಿ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದರು

ಇದೇ ರೀತಿ ಪೊಲೀಸ್ ಠಾಣೆಗೆ ತೆರಳಿದ ವೈದ್ಯರು ಡಿವೈಎಸ್‍ಪಿ ಶಂಕರಪ್ಪ ಅಣ್ಣಪ್ಪ ಸಾಹೇಬ್ ಪಾಟೀಲ್‍ರವರು ಸಹ ಮನವಿ ಪತ್ರ ಸಲ್ಲಿಸಿದರು.ಮನವಿ ಸ್ವೀಕರಿಸಿದ ತಹಶೀಲ್ದಾರ್ ಹಾಗೂ ಡಿವೈಎಸ್‍ಪಿ ಮನವಿಯನ್ನು ರಾಜ್ಯ ಸರಕಾರಕ್ಕೆ ರವಾನಿಸಲಾಗುವುದು ಎಂದು ಭರವಸೆ ನೀಡಿದರು.ಪ್ರತಿಭಟನೆಯಲ್ಲಿ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ: ಜಿ.ರಾಮಚಂದ್ರ, ಕಾರ್ಯದರ್ಶಿ ಡಾ: ಅರುಣ್‍ಕುಮಾರ್, ಸದಸ್ಯರುಗಳಾದ ಡಾ: ಗೀತಾ, ಶ್ರೇಯಸ್ ಮೆಟರ್ನಿಟಿ ಹೋಂನ ಡಾ: ಅನಿತಾ, ಶಿವಪ್ರಿಯ ನರ್ಸಿಂಗ್ ಹೋಂನ ಡಾ: ಗಿರಿಜಾ, ಡಾ: ಸಂಜಯ್ ಕುಮಾರ್, ಧ್ರುವ ಆಸ್ಪತ್ರೆಯ ಡಾ: ನಂದಿನಿ, ಡಾ: ಸುನಿಲ್, ಎಂವಿಜೆ ಆಸ್ಪತ್ರೆಯ ಡಾ: ಪ್ರಮೋದ್, ಖಾಸಗಿ ಆಸ್ಪತ್ರೆಗಳ ಶುಶ್ರೂಷಕಿಯರು, ವೈದ್ಯಕೀಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು