LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕೋವಿಡ್-19ರ ನಿರ್ವಹಣೆಯಲ್ಲಿ ಹಗರಣದ ಆರೋಪ ಹಲವರು ವಿರುದ್ಧ ಎಫ್‍ಐಆರ್ ದಾಖಲು

ಬೆಂಗಳೂರು: ಕೋವಿಡ್ ನಿರ್ವಹಣೆಯಲ್ಲಿ ಅವ್ಯವಹಾರ ನಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಮುಖ್ಯ ಲೆಕ್ಕಾಧಿಕಾರಿಯಿಂದ ದೂರು ನೀಡಿದ ಹಿನ್ನೆಲೆಯಲ್ಲಿ ಹಲವರ ವಿರುದ್ಧ ಎಫ್‍ಐಆರ್ ದಾಖಲು ಮಾಡಲಾಗಿದೆ.ಚೀಫ್ ಅಕೌಂಟೆಂಟ್ ಡಾ. ವಿಷ್ಣುಪ್ರಸಾದ್ ಎಂ ಅವರು ದೂರು ನೀಡಿದ್ದು, ದೂರಿನ ಆಧಾರದ ಮೇಲೆ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋವಿಡ್ ಸಮಯದ ಹಗರಣ ತನಿಖೆಗಾಗಿ ಎಸ್‍ಐಟಿ ರಚನೆಗೆ ಸರ್ಕಾರ ತೀರ್ಮಾನ ಕೈಗೊಂಡಿದೆ.ಎನ್-95 ಮಾಸ್ಕ್, ಪಿ ಪಿ ಇ ಕಿಟ್ ಮತ್ತು ಇತರೆ ಸಾಮಾಗ್ರಿಗಳನ್ನು ಖರೀದಿಯಲ್ಲಿ ಷಡ್ಯಂತ್ರ ರೂಪಿಸಿ ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸರ್ಕಾರಿ ಆಸ್ತಿ ಮತ್ತು ಸರ್ಕಾರಿ ಹಣ ನಷ್ಟವಾಗಿದೆ, ನೂರಾರು ಕೋಟಿಯಂತೆ ನಷ್ಟ ಮಾಡಿ ಸ್ವಂತ ಲಾಭವನ್ನು ಪಡೆದುಕೊಳ್ಳಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಡಾ.ಗಿರೀಶ್, ರಘು ಜಿ.ಪಿ, ಮುನಿರಾಜ್ ಲಾಜ್ ಎಕ್ಸ್ಪೋಟ್ರ್ಸ್, ಪ್ರೂಡೆಂಟ್ ಮ್ಯಾನೆಜ್‍ಮೆಂಟ್ ಸಲೂಷನ್ಸ್ ಸೇರಿದಂತೆ ಕೆಲ ಜನಪ್ರತಿನಿಧಿಗಳು ಹಾಗೂ ಸರಕಾರಿ ಅಧಿಕಾರಿಗಳ ವಿರುದ್ಧ ಎಫ್‍ಐಆರ್ ದಾಖಲು ಮಾಡಲಾಗಿದೆ.ಒಟ್ಟು 18 ಸರ್ಕಾರಿ ಆಸ್ಪತ್ರೆಗೆ ಪಿಪಿಇ ಕಿಟ್ ಮತ್ತು ಎನ್ 95 ಮಾಸ್ಕ್ ನೀಡುವುದಾಗಿ ವಂಚನೆ ಸೇರಿದಂತೆ ಸರ್ಕಾರದ ಯಾವುದೇ ಅನುಮೋದನೆ ಮತ್ತು ಅನುಮತಿ ನೀಡದೆ ಬಿಲ್, 167 ಕೋಟಿ ಆಕ್ರಮ, ಮುಂಬೈ ಮೂಲದ ಎರಡು ಕಂಪನಿಗೆ ಕಾನೂನುಬಾಹಿರ ಟೆಂಡರ್ ನೀಡಿರುವುದು, ಈ ಎರಡು ಕಂಪನಿಗಳು ಟೆಂಡರ್ ಪಡೆದು ಯಾವುದೇ ಪಿಪಿಇ ಕಿಟ್ ಎನ್ 95 ಮಾಸ್ಕ್ ಸರಬರಾಜು ಮಾಡಿಲ್ಲವೆಂಬ ಆರೋಪ ಮಾಡಲಾಗಿದೆ. ಈ ಸಂಬಂಧ ವಿಧಾನಸೌದ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು