LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಕ್ಯಾಪಿಟಲ್ ಸಿಟಿ' ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ

ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ "ಕ್ಯಾಪಿಟಲ್ ಸಿಟಿ" ಚಿತ್ರದ ಹಾಡುಗಳನ್ನು ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ, ಮಾಜಿ ಸಚಿವ ರೇಣುಕಾಚಾರ್ಯ ಅನಾವರಣ ಮಾಡಿದರು. ಶಿವಗಂಗೆಯ ಶ್ರೀಮಲಯ ಶಾಂತಮುನಿ ಸ್ವಾಮಿಗಳು ಹಾಗೂ ಶ್ರೀ ಆದಿತ್ಯ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು.ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳಾದ ಶಿಲ್ಪ ಶ್ರೀನಿವಾಸ್, ಡಿ.ಕೆ.ರಾಮಕೃಷ್ಣ, ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಇನಿಫಿನಿಟಿ ಕ್ರಿಯೇಷನ್ಸ್ ಲಾಂಛನದಲ್ಲಿ ಇಪ್ಪತ್ತು ನಿರ್ಮಾಪಕರು ಸೇರಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರ ಉತ್ತಮವಾಗಿ ಮೂಡಿಬರಲು ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದ. ಇದೊಂದು ಬೆಂಗಳೂರು ಭೂಗತ ಜಗತ್ತಿನ ಸುತ್ತ ನಡೆಯುವ ಕಥೆ. ತೊಂದರೆಗೀಡಾದ ನಾಯಕ ಹೇಗೆ ತನ್ನ ಕಷ್ಟವನ್ನು ನಿಭಾಯಿಸಿಕೊಂಡು ಬರುತ್ತಾನೆ ಎನ್ನುವುದೇ ಪ್ರಮುಖ ಕಥಾಹಂದರ. ಆಕ್ಷನ್ ಚಿತ್ರ ಎನಿಸಿದರೂ, ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ.

ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿದ್ದು, ಪ್ರೇರಣ ಈ ಚಿತ್ರದ ನಾಯಕಿ, ರವಿಶಂಕರ್, ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್ ಮುಂತಾದ ಹಿರಿಯ ನಟರು ಈ ಚಿತ್ರದಲ್ಲಿದ್ದಾರೆ. ಚಿತ್ರದ ಕೆಲವು ನಿರ್ಮಾಪಕರು ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, 2025 ರ ಜನವರಿ ಅಂತ್ಯಕ್ಕೆ ತೆರೆಗೆ ತರಲು ಸಿದ್ದತೆ ನಡೆಯುತ್ತಿದೆ ಎಂದು ನಿರ್ದೇಶಕ ಅನಂತರಾಜು ತಿಳಿಸಿದರು.

ಇದೊಂದು ರಿವೆಂಜ್ ಸ್ಟೋರಿ. ನಿಮಗೆ ತೊಂದರೆಯಾದಾಗ ನಿಮ್ಮನ್ನು ನೀವು ಹೇಗೆ ಕಾಪಾಡಿಕೊಳ್ಳುತ್ತೀರಾ ಎಂಬುದನ್ನು ಈ ಚಿತ್ರದಲ್ಲಿ ನಿರ್ದೇಶಕರು ನನ್ನ ಪಾತ್ರದ ಮೂಲಕ ತೋರಿಸಿದ್ದಾರೆ ಎಂದು ನಾಯಕ ರಾಜೀವ್ ರೆಡ್ಡಿ ಹೇಳಿದರು.ನಾಯಕಿ ಪ್ರೇರಣ, ನಿರ್ಮಾಪಕರಾದ ಮಂಜುನಾಥ್, ಕರ್ನಲ್ ರಾಜೇಂದ್ರ, ಶಿವಪ್ಪ ಕುಡ್ಲೂರು, ಆಂಟೋನಿ ರಾಜ್, ಕೃಷ್ಣಮೂರ್ತಿ ಹಾಗೂ ಸಂಗೀತ ನಿರ್ದೇಶಕ ನಾಗ್ ಮುಂತಾದವರು ಚಿತ್ರದ ಕುರಿತು ಮಾಹಿತಿ ನೀಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು