LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕ್ಯಾಲಿಫೋರ್ನಿಯಾದಲ್ಲಿ ಪ್ರಬಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 7.0ರಷ್ಟು ತೀವ್ರತೆ ದಾಖಲು

ನವದೆಹಲಿ: ಅಮೆರಿಕದ ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಶುಕ್ರವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 7.0ರಷ್ಟು ದಾಖಲಾಗಿದೆ.

ಅಮೆರಿಕ ಭೂಕಂಪನ ಮಾಪನ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು, 7.0 ತೀವ್ರತೆಯ ಭೂಕಂಪನದ ಕೇಂದ್ರ ಬಿಂದುವು ಕ್ಯಾಲಿಪೋರ್ನಿಯಾದ ಫರ್ಂಡೇಲ್‌ನ ಪಶ್ಚಿಮ-ನೈಋತ್ಯಕ್ಕೆ ಸುಮಾರು 100 ಕಿಲೋಮೀಟರ್ (ಆರು ಮೈಲುಗಳು) ಆಳದಲ್ಲಿ ದಾಖಲಾಗಿದೆ.

ಭೂಕಂಪದ ಬೆನ್ನಲ್ಲೇ ಕ್ಯಾಲಿಫೋರ್ನಿಯಾದ ಕರಾವಳಿ ಪ್ರದೇಶದಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿತ್ತು. ಬಳಿಕ ಸುನಾಮಿಯ ಯಾವುದೇ ಮುನ್ಸೂಚನೆ ದೊರೆಯದ ಹಿನ್ನಲೆಯಲ್ಲಿ ಎಚ್ಚರಿಕೆಯನ್ನು ಹಿಂಪಡೆಯಲಾಗಿದೆ.

ಭೂಕಂಪದ ಬೆನ್ನಲ್ಲೇ ಪ್ರಬಲ ಅಲೆಗಳು ಅಪ್ಪಳಿಸುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ಹವಾಮಾನ ಸೇವೆಯು ಎಚ್ಚರಿಕೆ ನೀಡಿತು. ಬಳಿಕ ಸುನಾಮಿ ಎಚ್ಚರಿಕೆ ಹಿಂಪಡೆಯಲಾಗಿದೆ. ಅಮೆರಿಕದ ಉತ್ತರ ಕ್ಯಾಲಿಫೋರ್ನಿಯಾದಲ್ಲಿ ನಡೆದ ಭೂಕಂಪದ ಕುರಿತು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಸಹ ಮಾಹಿತಿ ಹಂಚಿಕೊಂಡಿದೆ.

ಯಾವುದೇ ಪ್ರದೇಶಗಳು ಇನ್ನೂ ಯಾವುದೇ ಅಲೆಗಳನ್ನು ಅನುಭವಿಸಿರಲಿಲ್ಲ. ಹೀಗಾಗಿ ಸುನಾಮಿ ಎಚ್ಚರಿಕೆ ವಾಪಸ್ ಪಡೆಯಲಾಯಿತು ಎಂದು ಹೊನೊಲುಲುವಿನಲ್ಲಿರುವ ರಾಷ್ಟ್ರೀಯ ಹವಾಮಾನ ಸೇವೆಯ ಸುನಾಮಿ ಎಚ್ಚರಿಕೆ ಕೇಂದ್ರವು ಹೇಳಿದೆ.

ಗುರುವಾರ ಬೆಳಿಗ್ಗೆ ಕಂಪನ ಅನುಭವ ಆಗಿದ್ದು, ತಕ್ಷಣಕ್ಕೆ ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ. ಈ ಪ್ರದೇಶದ ಜನರಲ್ಲಿ ಭೂಮಿ ನಡುಗಿದ ಅನುಭವ ಉಂಟಾಗಿದೆ. ಇನ್ನು ಕರಾವಳಿ ನಗರವಾದ ಫೆರ್ನ್‌ಡೇಲ್‌ನಿಂದ ಪಶ್ಚಿಮಕ್ಕೆ 68 ಕಿ.ಮೀ. ದೂರದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು