LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕ್ವಿಜ್ ಸ್ಪರ್ಧೆಯ ವಿಜೇತರಿಗೆ ಬಹುಮಾನ

ಬೆಂಗಳೂರು: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ವತಿಯಿಂದ ಆಗಸ್ಟ್‍ನಲ್ಲಿ ನಡೆದ ಸ್ವಾತಂತ್ರ್ಯ ಚಳುವಳಿ ಕುರಿತು ರಸಪ್ರಶ್ನೆ ಸ್ಪರ್ಧೆಯಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರ, ಬೆಂಗಳೂರು ಇಲ್ಲಿ ದಿನಾಂಕ 27 11 2024 ರಂದು ಬಹುಮಾನ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಕಳೆದ ತಿಂಗಳು ಬೆಂಗಳೂರಿನಲ್ಲಿ ನೆಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ಬಹುಮಾನ ವಿತರಣಾ ಸಮಾರಂಭದ ಆತಿಥ್ಯವನ್ನುಗೌರವದಿಂದ ಬೆಂಗಳೂರು ನಗರ ಜಿಲ್ಲಾ ಸಮಿತಿಯು ವಹಿಸಿಕೊಂಡಿತ್ತು.ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಅಶ್ವತ್ಥನಾರಾಯಣ್ ಅವರು ಉಪನ್ಯಾಸ ನೀಡಿದರು. ಪ್ರಾಣಿ ಶಾಸ್ತ್ರದ ಪ್ರಾಧ್ಯಾಪಕ ಡಾ.ಟಿ ಎಂ.ದೇವರಾಜು ಅವರುಅಧ್ಯಕ್ಷತೆವಹಿಸಿದ್ಧರು. ಜ್ಞಾನೇಶ್ವರ ಅವರು ಎಲ್ಲರನ್ನು ಸ್ವಾಗತಿಸಿದರು. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಕಾರ್ಯದರ್ಶಿ ಈ ಬಸವರಾಜು ಅವರು ಪ್ರಾಸ್ತಾವಿಕ ನುಡಿಗಳನ್ನು ಮಾತನಾಡಿದರು.

ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷರು ಪ್ರಸ್ತುತ ವಿಜ್ಞಾನದ ಸಾಧನೆ ಕುರಿತು ಬೆಂಗಳೂರಿನ ಹಲವು ವಿಧದ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರುಗಳು ನೆಡೆಸುತ್ತಿರವ ಚಟುವಟಿಗೆಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.ರಾಜ್ಯಖಜಾಂಚಿ ಎಚ್ ಸಿ ಮಹದೇವಪ್ಪ ಕನ್ನಡ ಕನ್ನಡ ವಿಭಾಗದ ಸಹಪ್ರಾಧ್ಯಾಪಕ ಆರ್ ಪದ್ಮನಾಭ ಇಂಗ್ಲೀಷ್ ಭಾಗದ ಸಹಾಯಕ ಪ್ರಾಧ್ಯಾಪಕ ಡಾಕ್ಟರ್ ರಾಜಶೇಖರಯ್ಯ ಜಿ.ಮಠಪತಿ ಡಾ. ವಿಜಯ ವೆಂಕಟರಮಣ ಶಾನುಭಾಗ್ ಅವರುಗಳು ಉಪಸ್ಥಿತರಿದ್ದರು. ವೇದಿಕೆಯ ಕಾರ್ಯಕ್ರಮದ ನಿರೂಪಣೆಯನ್ನು ಕಾರ್ಯದರ್ಶಿ ಎಂ ಲಕ್ಷ್ಮಿ ನರಸಿಂಹ ಅಚ್ಚುಕಟ್ಟಾಗಿ ನಿರ್ವಹಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು