LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

`ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ನಿರ್ಧಾರ ವಾಪಸ್'

ರಾಮನಗರ: ಸ್ವಾತಂತ್ರ್ಯ ದಿನದಂದು ಕರಾಳದಿನವನ್ನು ಆಚರಿಸಲು ನಿರ್ಧರಿಸಿದ್ದ ರಾಜ್ಯದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು ತಮ್ಮ ನಿರ್ಧಾರವನ್ನು ತತ್ಕಾಲಿಕವಾಗಿ ಹಿಂಪಡೆದಿದ್ದಾರೆ.ಮಂಗಳವಾರ ಬೆಂಗಳೂರಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೀಡಿದ ಭರವಸೆಯ ಮೇರೆಗೆ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲೆಯ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ - ಉಸ್ಮಾರ್ಡ್ ಅಧ್ಯಕ್ಷ ಪ್ರದೀಪ್ ತಿಳಿಸಿದ್ದಾರೆ.

ಹೊಸ ಶಾಲೆಗಳಿಗೆಂದು ರಚನೆಯಾಗಿರುವ ಹಲವಾರು ನಿಯಮಗಳನ್ನು ಹಳೆಯ ಸಂಸ್ಥೆಗಳ ಮೇಲೂ ಅವೈಜ್ಞಾನಿಕವಾಗಿ ಹೇರಲು ಯತ್ನಿಸಿದ ಶಿಕ್ಷಣ ಇಲಾಖೆಯ ವಿರುದ್ದ ಕ್ಯಾಮ್ಸ್ ಸೇರಿದಂತೆ ರಾಜ್ಯದ ವಿವಿಧ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ವಿವಿಧ ವಿಚಾರಗಳಲ್ಲಿ ನ್ಯಾಯಾಲಯಗಳು ನೀಡಿರುವ ತೀರ್ಪುಗಳನ್ನು ಕಡೆಗಣಿಸಿ ಅಧಿಕಾರಿ ವರ್ಗ ದರ್ಪ ತೋರುತ್ತಿದ್ದಾರೆ ಎಂದು ಸಹ ಆರೋಪಿಸಲಾಗಿತ್ತು.

ಆದರೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳ ಮನವಿಗೆ ಕವಡೆ ಕಾಸಿನ ಕಿಮತ್ತು ನೀಡದಿದ್ದರಿಂದ ಕೆರಳಿದ್ದ ಆಡಳಿತ ಮಂಡಳಿಗಳು ಇದೇ ಆ.15ರಂದು ಸ್ವಾತಂತ್ರ್ಯ ದಿನದಂದು ಕರಾಳ ದಿನವನ್ನಾಗಿ ಆಚರಿಸಲು ನಿರ್ಧರಿಸಿದ್ದರು.ರಾಜ್ಯಾದ್ಯಂತ ಸ್ವಾತಂತ್ರ್ಯ ದಿನದಂದು ಕರಾಳ ದಿನ ಆಚರಣೆಗೆ ನಿರ್ಧರಿಸಿದ್ದ ಅನುದಾನ ರಹಿತ ಶಾಲೆಗೆಳ ಆಡಳಿತ ಮಂಡಳಿಗಳ ನಿರ್ಧಾರವನ್ನು ತಿಳಿದ ಶಿಕ್ಷಣ ಸಚಿವರು, ಮಂಗಳವಾರ ಬೆಂಗಳೂರಿನಲ್ಲಿ ಸಭೆಯನ್ನು ಆಯೋಜಿಸಿದ್ದರು.

ಸಭೆಯಲ್ಲಿ ಭಾಗವಹಿಸಿದ್ದ ಕ್ಯಾಮ್ಸ್ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಚಿವರಿಗೆ ತಮ್ಮ ಸಮಸ್ಯೆಗಳನ್ನು ಮನದಟ್ಟು ಮಾಡಿಕೊಟ್ಟರು.
ಖಾಸಗಿ ಅನುದಾನ ರಹಿತ ಶಾಲೆಗಳ ಸಮಸ್ಯೆಗಳನ್ನು ಆಲಿಸಿದ ಶಿಕ್ಷಣ ಸಚಿವರು ಒಂದು ತಿಂಗಳ ಕಾಲಾವಕಾಶವನ್ನು ಕೇಳಿದ್ದಾರೆ. ತಾವು ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಆಯಾ ಖಾತೆಯ ಸಚಿವರು ಮತ್ತು ಅಧಿಕಾರಿಗಳ ಜೊತೆ ಚರ್ಚಿಸಿ, ಸಮನ್ವಯ ಸಾಧಿಸುವುದಾಗಿ ಭರವಸೆ ನೀಡಿದ್ದಾರೆ, ಕರಾಳ ದಿನ ಆಚರಣೆಯನ್ನು ಕೈಬಿಡುವಂತೆ ತಿಳಿಸಿದ್ದಾರೆ. ಸಚಿವರ ಭರವಸೆಯ ಮೇರೆಗೆ ಸ್ವಾತಂತ್ರ್ಯ ದಿನದಂದು ಕರಾಳ ದಿನ ಆಚರಣೆಯನ್ನು ಕೈಬಿಡಲಾಗಿದೆ. ಆದರೆ ತಿಂಗಳ ನಂತರವೂ ಅವೈಜ್ಞಾನಿಕ ನಿಯಮಗಳನ್ನು ಹಿಂಪಡೆಯದಿದ್ದರೆ, ತಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಉಸ್ಮಾರ್ಡ್ ಅಧ್ಯಕ್ಷ ಪ್ರದೀಪ್ ಮಾಹಿತಿ ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು