LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಖಾಸಗಿ ಕಂಪನಿಗಳು ನೆಲ-ಜಲ ವಿದ್ಯುತ್ ಪಡೆದು ಕನ್ನಡಿಗರಿಗೆ ದ್ರೋಹ ಬಗೆಯುತ್ತಿವೆ: ಡಿ.ಪಿ.ಆಂಜನೇಯ

ದೊಡ್ಡಬಳ್ಳಾಪುರ: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ವಿಚಾರ ನಿನ್ನೆ ಮೊನ್ನೆಯದಲ್ಲ ೬೦ರ ದಶಕದಿಂದಲೂ ಕನ್ನಡಿಗರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಉದ್ದಿಮೆಗಳಲ್ಲಿ ಮತ್ತು ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿಗಾಗಿ ಹೋರಾಟಗಳು ನಡೆಯುತ್ತಿವೆ ಎಂದು ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯಕ್ ಹೇಳಿದರು.

ನಗರದ ತಾಲೂಕು ಕಚೇರಿ ಮುಂಭಾಗ ಕನ್ನಡ ಪಕ್ಷದ ವತಿಯಿಂದ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಸುಮಾರು ಮಾತನಾಡಿದರು. ಕಳೆದ ೫೦ ವರ್ಷಗಳಿಂದ ಆಡಳಿತ ನಡೆಸಿದ ಎಲ್ಲ ಪಕ್ಷಗಳು ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಅನ್ಯಾಯ ಮಾಡುತ್ತಿವೆ ಎಂದು ಆರೋಪಿಸಿದರು.

ಕನ್ನಡಿಗರ ಪರ ಧ್ವನಿ ಆಗಬೇಕಿದ್ದ ಸರ್ಕಾರ ಗಳು ಹೊರ ರಾಜ್ಯದಿಂದ ವ್ಯಾಪಾರಕ್ಕಾಗಿ ಬಂದವರಆಮಿಷಗಳಿಗೆ ಒಳಗಾಗಿವುದನ್ನು ಕಾಣಬಹುದಾಗಿದೆ. ಡಾಕ್ಟರ್ ಸರೋಜಿನಿ ಮಹಿಷಿ ವರದಿ ಅನ್ವಯ ಯತಾವತ್ತಾಗಿ ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲೂ ಸಹ ಮೀಸಲಾತಿ ನೀಡಬೇಕೆಂದು ಕನ್ನಡ ಪಕ್ಷ ಒತ್ತಾಯಿಸುತ್ತದೆ ಎಂದರು.

ಕನ್ನಡ ಪಕ್ಷದ ರಾಜ್ಯ ಕಾರ್ಯದರ್ಶಿ ಡಿ.ಪಿ. ಆಂಜನೇಯ ಮಾತನಾಡಿ ಇತ್ತೀಚೆಗೆ ಮುಖ್ಯ ಮಂತ್ರಿಸಿದ್ದರಾಮಯ್ಯ ಅವರು ವಿಧಾನ ಪರಿಷತ್ ಸಭೆಯಲ್ಲಿ ಪ್ರಸ್ತಾಪವಾದ ಉದ್ಯೋಗ ಮೀಸಲಾತಿ ವಿಚಾರದಲ್ಲಿ ಕರ್ನಾಟಕದಲ್ಲಿನ ಖಾಸಗಿ ಕಂಪನಿಗಳುಸರ್ಕಾರದ ಮೇಲೆ ಒತ್ತಡ ಹಾಕುತ್ತಿವೆ ಎಂದು ಹೇಳಲಾಗುತ್ತಿದೆ, ಆದರೆ ಐಟಿ ಬಿಟಿ ಕಂಪನಿಗಳನ್ನು ಪ್ರಾರಂಭಿಸಲು ಕನ್ನಡದ ನೆಲ-ಜಲ ಬೇಕು, ನಮ್ಮ ಬೆವರಿನ ತೆರಿಗೆ ಹಣದಲ್ಲಿ ಸಬ್ಸಿಡಿ ದರದಲ್ಲಿ ವಿದ್ಯುತ್ ಬೇಕು ಆದರೆ ಕನ್ನಡಿಗರಿಗೆ ಉದ್ಯೋಗ ನೀಡಲು ಮಾತ್ರ ಮೀನ ಮೇಷ ಎಣಿಸುತ್ತಿವೆ ಎಂದು ತಮ್ಮ ಆಕ್ರೋಶ ಹೊರಹಾಕಿದ ಅವರು, ಕನ್ನಡಿಗರಿಗೆ ಉದ್ಯೋಗ ನೀಡದಿದ್ದರೆ ಈ ಐಟಿ-ಬಿಟಿ ಕಂಪನಿಗಳು ಕರ್ನಾಟಕದಿಂದ ತೊಲಗಬೇಕು ಎಂದು ಕನ್ನಡಪಕ್ಷ ಒತ್ತಾಯಿಸುತ್ತದೆ ಎಂದರು.

ನುಡಿದಂತೆ ನಡೆಯುತ್ತೇವೆ ಎಂದು ಹೇಳುವ ಮಾನ್ಯ ಮುಖ್ಯಮಂತ್ರಿಗಳು ಕನ್ನಡಿಗರಿಗೆ ಉದ್ಯೋಗ ದಲ್ಲಿ ಮೀಸಲಾತಿ ವಿಚಾರದಲ್ಲಿ ಸ್ಪಷ್ಟವಾದ ನಿಲುವನ್ನ ಪ್ರಕಟಿಸಬೇಕು ಮತ್ತು ಅದು ಶಾಸನವಾಗ ಬೇಕು ಪ್ರಸ್ತುತ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನದಲ್ಲಿ ಈ ವಿಚಾರವನ್ನು ತಾವು ಮಂಡಿಸಿ ಕನ್ನಡಿ
ಗರಿಗೆ ಇದುವರೆಗೂ ಆಗಿರುವ ಅನ್ಯಾಯವನ್ನು ಸರಿಪಡಿಸಿ ಕನ್ನಡಿಗರ ಬಹುದಿನದ ಬೇಡಿಕೆಯಾದ ಉದ್ಯೋಗದಲ್ಲಿ ಮೀಸಲಾತಿಯನ್ನ ಈಡೇರಿಸಲು ಕನ್ನಡ ಪಕ್ಷ ಒತ್ತಾಯಿಸುತ್ತದೆ ಎಂದರು.

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ ೭೫ರಷ್ಟು ಉದ್ಯೋಗದಲ್ಲಿ ಮೀಸಲಾತಿ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ಕನ್ನಡಿಗರಿಗೆ ಮೀಸಲಾತಿ ನೀಡಲೇಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕನ್ನಡ ಮಾಜಿ ನಗರಸಭಾ ಸದಸ್ಯ ಮೋಹನ್ ಕುಮಾರ್, ಜಿಲ್ಲಾಧ್ಯಕ್ಷ ಮುನಿಪಾಪಯ್ಯ, ತಾಲೂಕು ಘಟಕದ ಅಧ್ಯಕ್ಷ ಡಿ. ವೆಂಕಟೇಶ್, ಶಿವರಾಜ್ ಕುಮಾರ್ ಕನ್ನಡ ಸೇನಾ ಸಮಿತಿಯ ರಮೇಶ್, ಮುಖಂಡರಾದ ಉಮಾಶಂಕರ್, ಸಿದ್ದರಾಜು, ಮಂಜುನಾಥ, ನರಸಿಂಹಮೂರ್ತಿ, ಗೋವಿಂದರಾಜು, ಗಂಗಾಧರ ಆರ್, ರಂಗನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು