LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಖಾಸಗಿ ಲೇವಾದೇವಿ ನಿಯಂತ್ರಣ ಕಾಯ್ದೆ ಏನಾಯ್ತು.. ಎಚ್ಡಿಕೆ ಪ್ರಶ್ನೆ

ರಾಮನಗರ: ಮಧ್ಯಮ ವರ್ಗ ಮತ್ತು ಬಡ ಜನರ ಮೇಲೆ ದೌರ್ಜನ್ಯವೆಸಗುವ ಖಾಸಗಿ ಲೇವಾದೇವಿ ಬಡ್ಡಿಕೋರರು ಹಾಗೂ ಮೈಕ್ರೋ ಫೈನಾನ್ಸ್‍ಗಳ ಹಾವಳಿ ನಿಯಂತ್ರಣಕ್ಕೆ ಖಾಸಗಿ ಲೇವಾದೇವಿ ನಿಯಂತ್ರಣ ಕಾಯ್ದೆ ಜಾರಿಗೆ ತಂದಿದ್ದೆ. ಆ ಕಾಯ್ದೆ ಏನಾಯಿತು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ತಾಲೂಕಿನ ದಾಸೇಗೌಡನದೊಡ್ಡಿ ಗ್ರಾಮದಲ್ಲಿ ಆಂಜನೇಯಸ್ವಾಮಿ ದೇವಾಲಯದ ಮುಖ್ಯದ್ವಾರ ಉದ್ಘಾಟಿಸಿದ ತರುವಾಯ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕೇವಲ ರಾಮನಗರ ಅಲ್ಲ, ರಾಜ್ಯದ ಹಲವೆಡೆ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗಿದೆ. ಈಗ ಕಾಂಗ್ರೆಸ್ ಸರ್ಕಾರ 2ಸಾವಿರ ಗ್ಯಾರಂಟಿ ಹಣ ಕೊಟ್ಟಿದ್ದಾರಲ್ಲ, ಮತ್ಯಾಕೆ ಜನ ಮೈಕ್ರೋ ಫೈನಾನ್ಸ್ ನಲ್ಲಿ ಸಾಲ ಮಾಡುತ್ತಿದ್ದಾರೆ ಎಂದರು.

ನಾನು ಸಿಎಂ ಆಗಿದ್ದಾಗ ಬಿಲ್ ಪಾಸ್ ಮಾಡಿ ಖಾಸಗಿ ಲೇವಾದೇವಿ ನಿಯಂತ್ರಣ ಕಾಯ್ದೆ ಜಾರಿಗೆ ತಂದಿದ್ದೆ.ಆ ಬಿಲ್ ಏನಾಯಿತು.ಅಂದಿನ ಸಹಕಾರ ಸಚಿವರನ್ನು ಕೇರಳಕ್ಕೆ ಕಳುಹಿಸಿ ಈ ಬಗ್ಗೆ ಅಧ್ಯಯನ ಮಾಡಿಸಿದ್ದೆ. ಕೇರಳದಲ್ಲಿ ಈ ವಿಚಾರಕ್ಕೆ ಒಂದು ಕಮಿಷನ್ ಇದೆ.ಅಂತಹ ಒಂದು ಕಮಿಷನ್ ಇಲ್ಲೂ ಕೂಡಾ ತೆರೆದು ಸಾಲ ತೆಗೆದುಕೊಂಡು ಕಟ್ಟಲು ಆಗದವರಿಗೆ ಅನುಕೂಲ ಮಾಡಬೇಕು ಅಂತ ಮಾಡಿದ್ದೆ. ಆದರೆ, ನಮ್ಮ ಸರ್ಕಾರ ತೆಗೆದುಹಾಕಿದರು.ಇವತ್ತು ಅವರದೇ ಸರ್ಕಾರ ಇದೆಯಲ್ಲ ಏಕೆ ಮಾಡುತ್ತಿಲ್ಲ ಎಂದು ಕೇಳಿದರು.

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರಾಮನಗರದಲ್ಲಿ ಓರ್ವ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮನಗರ ಉದ್ದಾರ ಮಾಡುತ್ತೇವೆ ಅಂತ ಹೇಳಿದವರು ಯಾರಾದರು ಹೋಗಿ ಅವರ ಸಮಸ್ಯೆ ಕೇಳಿದ್ದಾರ.ಯಾವ ಸಚಿವರಾದರು ಬಂದಿದ್ದಾರಾ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು. ಬಡವರ ಮೇಲೆ ಕಾಳಜಿ ಇರುವವರು ಯಾರು ಅಂತ ಅರ್ಥ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಹೇಳಿದರು.ರಾಮನಗರ ಶಾಸಕರ ವಿರುದ್ಧ ಭೂಕಬಳಿಕೆ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಮನಗರ ಶಾಸಕರಾದ ಅವರ ಬಗ್ಗೆ ಏಕೆ ಚರ್ಚೆ ಮಾಡೋಣ ಎಂದು ಲೇವಡಿ ಮಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು