LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಗಂಗಾರತಿ ಅಧ್ಯಯನಕ್ಕೆ ಮತ್ತೆ ಅಧಿಕಾರಿಗಳ ತಂಡ

ಬೆಂಗಳೂರು: ಸಚಿವ ಎನ್. ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಕಾವೇರಿ ಆರತಿ ಅಧ್ಯಯನ ಸಮಿತಿ ಈಗಾಗಲೆ ಹರಿದ್ವಾರಕ್ಕೆ ತೆರಳಿ ಗಂಗಾರತಿ ಪ್ರಕ್ರಿಯೆ ಬಗ್ಗೆ ಅಧ್ಯಯನ ಮಾಡಿಕೊಂಡು ಬಂದಿದೆ. ಇದೀಗ ಅಧಿಕಾರಿಗಳ ನಿಯೋಗ ಅಧ್ಯಯನಕ್ಕೆಂದು ಹರಿದ್ವಾರಕ್ಕೆ ತೆರಳಲು ಸಜ್ಜಾಗಿದೆ ಎಂದು ವರದಿಗಳು ಪ್ರಕಟವಾಗಿವೆ. ಈ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

``ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸುವ ಸಲುವಾಗಿ ಮಂಡ್ಯ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಂಡ್ಯ, ಮೈಸೂರು ಭಾಗದ ಶಾಸಕರು, ವಿಧಾನಪರಿಷತ್ ಸದಸ್ಯರು, ಕಾವೇರಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳು ಈಗಾಗಲೇ ಮೂರು ದಿನಗಳ ಕಾಲ ಹರಿದ್ವಾರ ಹಾಗೂ ಕಾಶಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ಬಂದಿರುವಾಗ ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಕಳುಹಿಸುತ್ತಿರುವುದು ಯಾತಕ್ಕೆ?'' ಎಂದು ಸಾಮಾಜಿಕ ಮಾಧ್ಯಮ ಎಕ್ಸ್? ಮುಖಾಂತರ ಪ್ರಶ್ನಿಸಿದ್ದಾರೆ.

ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಹೋಗಬೇಕು ಎನ್ನುವುದಾದರೆ ಸಚಿವರು ತಮ್ಮ ತಂಡದೊಂದಿಗೆ ಅಲ್ಲಿ ಹೋಗಿ ಮಾಡಿದ್ದಾದರೂ ಏನು? ಸರ್ಕಾರಿ ಹಣದಲ್ಲಿ ಮೋಜು-ಮಸ್ತಿ ಮಾಡಲು ಹೋಗಿದ್ದಾ? ಎಂದು ವಾಗ್ದಾಳಿ ಮಾಡಿದ್ದಾರೆ.``ಅಯೋಧ್ಯೆ ರಾಮಮಂದಿರದ ಉದ್ಘಾಟನೆ ವೇಳೆ 30 ವರ್ಷ ಹಳೆ ಕೇಸುಗಳನ್ನು ರೀ ಓಪನ್ ಮಾಡಿ ಕರಸೇವಕರನ್ನ ಜೈಲಿಗೆ ಹಾಕಿದ್ದ ಈ ಕಾಂಗ್ರೆಸ್ ಸರ್ಕಾರ, ಗಣೇಶನ ಮೂರ್ತಿಯನ್ನು ಪೊಲೀಸ್ ವ್ಯಾನ್ ಹತ್ತಿಸಿದ ಈ ಕಾಂಗ್ರೆಸ್ ಸರ್ಕಾರ, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುದಳ್ಳುರಿಯನ್ನ ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದು ತಿಪ್ಪೆ ಸಾರಿಸಿದ ಕಾಂಗ್ರೆಸ್ ಸರ್ಕಾರ ಈಗ ದಿಢೀರನೆ ಹಿಂದೂ ಧರ್ಮದ ಬಗ್ಗೆ, ಹಿಂದೂಗಳ ಆಚಾರ-ವಿಚಾರದ ಬಗ್ಗೆ, ಸಂಪ್ರದಾಯ-ಪರಂಪರೆ ಬಗ್ಗೆ ಎಲ್ಲಿಲ್ಲದ ಆಸಕ್ತಿ ತೋರುವ ನಾಟಕ ಮಾಡುತ್ತಿದೆ'' ಎಂದು ಆರೋಪಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು