LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಗಜ ಪಯಣ ಆರಂಭ ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ವಿಶೇಷ ಪೂಜೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಈ ಬಾರಿ ಪಾಲ್ಗೊಳ್ಳಲಿರುವ ಆನೆಗಳು ಇಂದು ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಿವೆ.ಹುಣಸೂರು ತಾಲೂಕಿನ ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಾದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಗಜಪಡೆಗೆ ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು.

ಮೊದಲ ಹಂತದಲ್ಲಿ ಒಟ್ಟು ಒಂಭತ್ತು ಆನೆಗಳು ಗಜಪಯಣದ ಮೂಲಕ ಮೈಸೂರಿಗೆ ತೆರಳುತ್ತಿದ್ದು, ವಿಶ್ವ ವಿಖ್ಯಾತ 414 ನೇ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ.ಈ ಬಾರಿ ನಾಡ ಹಬ್ಬ ದಸರಾದಲ್ಲಿ ಒಟ್ಟು 14 ಆನೆಗಳು ಭಾಗವಹಿಸಲಿವೆ. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ.

ಅಲ್ಲದೆ ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಆಯ್ಕೆ ಮಾಡಲಾಗಿದ್ದು, ಅಗತ್ಯವಿದ್ದರೆ ಮೀಸಲು ಆನೆಗಳನ್ನ ಬಳಸಿಕೊಳ್ಳಲು ಇಲಾಖೆ ತೀರ್ಮಾನಿಸಿದೆ. ಆಗಸ್ಟ್ 23 ರಂದು ಈ 9 ಆನೆಗಳನ್ನು ಅರಮನೆಗೆ ಬರಮಾಡಿಕೊಳ್ಳಲಾಗುವುದು. ಇಂದಿನಿಂದ 2 ದಿನಗಳ ಕಾಲ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ವಾಸ್ತವ್ಯ ಹೊಡಲಿವೆ.

ದಸರಾ ಮಹೋತ್ಸವವದಲ್ಲಿ ಪಾಲ್ಗೊಳ್ಳುತ್ತಿರುವ ಆನೆಗಳಿಗೆ ವಿಮೆ ಮಾಡಿಸಲಾಗಿದ್ದು, ಇವುಗಳ ಜತೆ ಇರುವ ಅರಣ್ಯಸಿಬ್ಬಂದಿ, ಕಾವಾಡಿಗರು ಹಾಗೂ ಮಾವುತರಿಗೂ ಸಹ ವಿಮೆ ಮಾಡಿಸಲಾಗಿದೆ ಎಂದು ಹೇಳಲಾಗಿದೆ. ದಸರಾದಲ್ಲಿ ಪಾಲ್ಗೊಳ್ಳಲಿರುವ ಕ್ಯಾಪ್ಟನ್ ಅಭಿಮನ್ಯು (58), ಭೀಮ (24), ಗೋಪಿ (41), ಧನಂಜಯ (43), ಕಂಜನ್ (25), ರೋಹಿಣಿ (22), ಲಕ್ಷ್ಮೀ (53), ವರಲಕ್ಷ್ಮಿ (67), ಏಕಲವ್ಯ (38) ಆನೆಗಳು ಮೊದಲ ಗಜಪಯಣದಲ್ಲಿ ಮೈಸೂರಿಗೆ ಬರುತ್ತಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು