LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಗಡಿಯಲ್ಲಿ ಶಾಂತಿ ಇಲ್ಲದೆ ಇದ್ದರೆ ಭಾರತ-ಚೀನಾ ಸಂಬಂಧ ಸಹಜವಾಗಿರಲು ಸಾಧ್ಯವಿಲ್ಲ: ಲೋಕಸಭೆಯಲ್ಲಿ ಜೈಶಂಕರ್

ನವದೆಹಲಿ: ಗಡಿ ವಿವಾದವನ್ನು ಅಂತ್ಯಗೊಳಿಸಲು ನ್ಯಾಯಯುತ ಮತ್ತು ಪರಸ್ಪರ ಸ್ವೀಕಾರಾರ್ಹ ಒಪ್ಪಂದಕ್ಕೆಬರಲು ಚೀನಾದೊಂದಿಗೆ ಮಾತುಕತೆ ನಡೆಸಲು ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು ಲೋಕಸಭೆಯಲ್ಲಿ ಭಾರತ-ಚೀನಾ ಗಡಿ ಪರಿಸ್ಥಿತಿ ಕುರಿತು ಮಾತನಾಡಿದ ಜೈಶಂಕರ್ ಅವರು, ಚೀನಾದ ಕ್ರಮಗಳಿಂದಾಗಿ ಗಡಿಯಲ್ಲಿ ಶಾಂತಿ ಸ್ಥಾಪನೆ ಸಾಧ್ಯವಾಗುತ್ತಿಲ್ಲ ಮತ್ತು ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದ್ದು, 2020 ರಿಂದ ಭಾರತ-ಚೀನಾ ಸಂಬಂಧ ಸಹಜವಾಗಿಲ್ಲ ಎಂದು ಹೇಳಿದರು.

“2020 ರ ಏಪ್ರಿಲ್-ಮೇನಲ್ಲಿ ಪೂರ್ವ ಲಡಾಖ್‌ನಲ್ಲಿ ಚೀನಾ ಹೆಚ್ಚಿನ ಸಂಖ್ಯೆಯ ಸೈನಿಕರನ್ನು ನಿಯೋಜಿಸಿತ್ತು. ಇದರಿಂದ ನಮಗೆ ಗಸ್ತು ತಿರುಗಲು ತೊಂದರೆಯಾಗಿತ್ತು ಮತ್ತು ಹಲವಾರು ಬಾರಿ ಉಭಯ ದೇಶಗಳ ಸೇನೆ ಮುಖಾಮುಖಿಯಾದವು ಎಂದರು.

ಜೂನ್ 2020 ರಲ್ಲಿ ಗಲ್ವಾನ್ ಕಣಿವೆಯಲ್ಲಿ ಉದ್ವಿಗ್ನತೆಯ ನಂತರ ಚೀನಾ ಮತ್ತು ಭಾರತದ ನಡುವೆ ಸಾಕಷ್ಟು ಉದ್ವಿಗ್ನತೆ ಉಂಟಾಗಿತ್ತು. 1991 ರಲ್ಲಿ, ಎರಡೂ ದೇಶಗಳು ಎಲ್‌ಎಸಿಯಲ್ಲಿ ಶಾಂತಿಗೆ ಒಪ್ಪಿಕೊಂಡಿದ್ದವು. 1993 ರಲ್ಲಿ LAC ಯಲ್ಲಿ ಶಾಂತಿಯನ್ನು ಮರುಸ್ಥಾಪಿಸುವ ಕುರಿತು ಒಪ್ಪಂದ ಮುಂದುವರೆದಿತ್ತು.

ನಿರಂತರ ರಾಜತಾಂತ್ರಿಕ ಮಾತುಕತೆಗಳ ನಂತರ ಇತ್ತೀಚಿಗೆ ಭಾರತ-ಚೀನಾ ಬಾಂಧವ್ಯದಲ್ಲಿ "ಸ್ವಲ್ಪ ಸುಧಾರಣೆ" ಕಾಣುತ್ತಿದೆ ಎಂದು ಅವರು ಹೇಳಿದರು.

ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿ ಇಲ್ಲದಿರುವಾಗ ಭಾರತ-ಚೀನಾ ಸಂಬಂಧ ಸಹಜವಾಗಿರಲು ಸಾಧ್ಯವಿಲ್ಲ. ನಮ್ಮ ಪರಸ್ಪರ ಸಂಬಂಧಗಳು ಶಾಂತಿ ಮತ್ತು ರಾಜಿ ಆಧಾರದ ಮೇಲೆ ಮಾತ್ರ ಸುಧಾರಿಸುವ ಭರವಸೆ ಇದೆ. ರಾಜತಾಂತ್ರಿಕ ಮಟ್ಟದಲ್ಲಿ ಮಾತುಕತೆಗಳು ನಡೆಯುತ್ತಿವೆ ಮತ್ತು ಮಿಲಿಟರಿ ಮಟ್ಟದಲ್ಲಿಯೂ ಇದೇ ರೀತಿಯ ಕೆಲಸ ನಡೆಯುತ್ತಿದೆ ಎಂದು ಜೈಶಂಕರ್ ಲೋಕಸಭೆಗೆ ತಿಳಿಸಿದರು.

"ಶಾಂತಿ ಮತ್ತು ನೆಮ್ಮದಿಯ ಮರುಸ್ಥಾಪನೆಯು ಇತರ ವಿಚಾರಗಳಲ್ಲಿ ಉಭಯ ದೇಶಗಳ ಸಂಬಂಧ ಮುಂದುವರಿಯಲು ಆಧಾರವಾಗಿದೆ ಎಂದು ನಾವು ಸ್ಪಷ್ಟವಾಗಿ ಹೇಳಿದ್ದೇವೆ" ಎಂದು ಅವರು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು