LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಗರಿಗೆದರಿದ ಚಟುವಟಿಕೆ ಕಾಂಗ್ರೆಸ್ ಪಾಳಯದಲ್ಲಿ ಸಂಪುಟ ಪುನಾರಚನೆ ಸಂಚಲನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಂಪುಟವನ್ನು ಪುನರ್ ರಚನೆ ಮಾಡಲಾಗುವುದು ಎಂಬ ಸುಳಿವು ದೊರೆತ ಬೆನ್ನಲ್ಲಿಯೇ ಸಚಿವಾಕಾಂಕ್ಷಿಗಳು ಸಂಪುಟದಲ್ಲಿ ಸ್ಥಾನ ಪಡೆಯಲು ಕಾರ್ಯತಂತ್ರ ರೂಪಿಸತೊಡಗಿದ್ದಾರೆ.

ಸಚಿವ ಆಕಾಂಕ್ಷಿಗಳಾಗಿರುವ ಬಹುತೇಕ ಹಿರಿಯ ಮತ್ತು ಕಿರಿಯ ಶಾಸಕರು ಸಚಿವರಾಗಲು ತಮ್ಮದೇ ಆದ ರೀತಿಯಲ್ಲಿ ತಮಗೆ ಬೇಕಾದ ರಾಜಕೀಯ ನಾಯಕರ ಮನವೊಲಿಕೆಯಲ್ಲಿ ನಿರತರಾಗಿದ್ದಾರೆ.ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಆರೋಪಿಯಂದು ಹೇಳಲಾಗಿದ್ದ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಈ ಬಾರಿ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಸ್ಥಾನ ಸಿಗಲಿದೆ ಎಂದು ಹೇಳಲಾಗುತ್ತಿದೆ.

ಎಐಸಿಸಿ ಮಾಜಿ ಪ್ರಧಾನಕಾರ್ಯದರ್ಶಿ, ಪಕ್ಷದ ಹಿರಿಯ ಮುಖಂಡರಾದ ಬಿ.ಕೆ. ಹರಿಪ್ರಸಾದ್ ಅವರು ಸಹ ತೀವ್ರ ಆಕಾಂಕ್ಷಿಯಾಗಿದ್ದಾರೆ.ಮಳವಳ್ಳಿಯ ನರೇಂದ್ರ ಸ್ವಾಮಿ, ಭದ್ರಾವತಿಯ ಸಂಗಮೇಶ್ವರ್, ಬಾಗೇಪಲ್ಲಿಯ ಸುಬ್ಬಾರೆಡ್ಡಿ, ವಿನಯ್‍ಕುಲಕರ್ಣಿ ವಿಜಯಾನಂದ ಕಾಶಪ್‍ನವರ್, ಎನ್‍ಎ ಹ್ಯಾರೀಸ್, ಸಾಗರದ ಗೋಪಾಲಕೃಷ್ಣ ಬೆಳೂರು ಸೇರಿದಂತೆ ಅನೇಕ ಶಾಸಕರು ಸಂಪುಟ ಸೇರಲು ಒಲವು ವ್ಯಕ್ತಪಡಿಸಿದ್ದು, ಬಹುತೇಕ ಡಿಸೆಂಬರ್9ರಿಂದ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಅಧಿವೇಶನದ ನಂತರ ಸಂಪುಟ ಪುನರ್ ರಚನೆಯಾಗಲಿದ್ದು, ಸುಮಾರು ಏಳೆಂಟು ಜನರನ್ನು ಸಂಪುಟದಿಂದ ಕೈಬಿಟ್ಟು ಅವರ ಸ್ಥಾನಕ್ಕೆ ಬೇರೆಯವರನ್ನು ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಹೇಳಲಾಗುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು