LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಗಾಂಜಾ ವಿಚಾರಕ್ಕೆ ಸಹೋದರರಿಬ್ಬರ ಮಧ್ಯೆ ಜಗಳ: ತಮ್ಮ ಸಾವು, ಅಣ್ಣನಿಗೆ ಗಾಯ

ಬೆಳಗಾವಿ: ಗಾಂಜಾ ಸೇವಿಸುವ ವಿಚಾರಕ್ಕೆ ಇಬ್ಬರು ಸಹೋದರರ ನಡುವೆ ನಡೆದ ಗಲಾಟೆ ತಮ್ಮನ ಸಾವಿನಲ್ಲಿ ಅಂತ್ಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ‌ನಿಲಜಿ ಗ್ರಾಮದಲ್ಲಿ ಶುಕ್ರವಾರ (ಜ.10) ತಡರಾತ್ರಿ ನಡೆದಿದೆ.

ಸುಶಾಂತ ಸುಭಾಷ್ ಪಾಟೀಲ (20) ಮೃತಪಟ್ಟ ಯುವಕ. ಘಟನೆಯಲ್ಲಿ ಓಂಕಾರ ಸುಭಾಷ ಪಾಟೀಲ (23) ಎಂಬಾತನಿಗೆ ಗಂಭೀರ ‌ಗಾಯವಾಗಿದ್ದು, ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ನೀಡಲಾಗಿದೆ.

ಸಹೋದರರಿಬ್ಬರೂ ಕೆಲ ವರ್ಷಗಳಿಂದ ಗಾಂಜಾ ಸೇವನೆ ಚಟ ಬೆಳೆಸಿಕೊಂಡಿದ್ದು, ಮತ್ತಿತನಲ್ಲಿ ಪೋಷಕರೊಂದಿಗೆ ಹಾಗೂ ಪರಸ್ಪರ ಜಗಳವಾಡುತ್ತಿದ್ದರು, ಶುಕ್ರವಾರ ಮನೆಕೆಲಸದ ವಿಚಾರಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದೆ. ಈ ವೇಳೆ ನೂಕಾಟ– ತಳ್ಳಾಟದಲ್ಲಿ ಮನೆಯ ಎರಡನೇ ಮಹಡಿಯಿಂದ ಇಬ್ಬರೂ ಕೆಳಕ್ಕೆ ಬಿದ್ದಿದ್ದು, ಸುಶಾಂತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆಯಲ್ಲಿ ಓಂಕಾರ್ ಪಾಟೀಲ್ ಅವರ ಕಾಲುಗಳು ಮತ್ತು ಒಂದು ಕೈ ಮುರಿದಿದ್ದು, ತೀವ್ರ ಗಾಯಗೊಂಡಿದ್ದಾರೆ. ಇದೀಗ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಬೆನ್ನಲ್ಲೇ ಗ್ರಾಮೀಣ ಪ್ರದೇಶದ ಯುವಕರಲ್ಲಿ ಮಾದಕ ವ್ಯಸನ ಹೆಚ್ಚುತ್ತಿರುವ ಬಗ್ಗೆ ಸ್ಥಳೀಯ ನಿವಾಸಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಮಾದಕವಸ್ತು ಪೂರೈಕೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಘಟನೆ ಬಳಿಕ ಮಾರಿಹಾಳ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು