LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಗಾಂಧಿ ಬಜಾರ್‌ ಮಾರುಕಟ್ಟೆ ಮರು ವಿನ್ಯಾಸದಿಂದ ಮಾರಾಟಗಾರರು, ಗ್ರಾಹಕರಿಗೆ ಅನುಕೂಲವಾಗಲಿದೆ: ಹೈಕೋರ್ಟ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಗಾಂಧಿ ಬಜಾರ್ ಮಾರುಕಟ್ಟೆ ಮರುವಿನ್ಯಾಸ ಯೋಜನೆಯು ಪ್ರದೇಶದ ನಿರ್ವಹಣೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದ್ದು, ಯೋಜನೆಯಿಂದ ಮಾರಾಟಗಾರರು ಹಾಗೂ ಗ್ರಾಹಕರಿಗೆ ಅನುಕೂಲವಾಗಲಿದೆ ಎಂದು ಹೈಕೋರ್ಟ್ ಹೇಳಿದೆ.

ಬೆಂಗಳೂರಿನ ಹೆರಿಟೇಜ್‌ ಬಸವನಗುಡಿ ರೆಸಿಡೆಂಟ್ಸ್‌ ವೆಲ್ಫೇರ್‌ ಫೋರಂ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ನೇತೃತ್ವದ ವಿಭಾಗೀಯ ಪೀಠ, ಈ ಕುರಿತಂತೆ ಆದೇಶಿಸಿದೆ.

ಉದ್ದೇಶಿತ ಯೋಜನೆಯಿಂದ 90 ಅಡಿ ಅಗಲದ ಗಾಂಧಿ ಬಜಾರ್‌ ಮುಖ್ಯ ರಸ್ತೆಯು 23 ಅಡಿಗೆ ಕುಂಠಿತಗೊಳ್ಳಲಿದೆ. ಪಾದಚಾರಿ ಮಾರ್ಗ ವಿಸ್ತೃತಗೊಂಡು, ವಾಹನ ಮತ್ತು ಜನರ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗಲಿದೆ. ರಸ್ತೆಯ ವೈಟ್‌ ಟಾಪಿಂಗ್‌ ಮತ್ತು ಆಧುನೀಕರಣವೂ ವೈಜ್ಞಾನಿಕವಾಗಿಲ್ಲ. ಆಧುನೀಕರಣದ ಹೆಸರಿನಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾದ ತಪ್ಪಾದ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ. ಆದ್ದರಿಂದ, ಈ ಯೋಜನೆಯನ್ನು ಅವೈಜ್ಞಾನಿಕ ಎಂದು ಘೋಷಿಸಬೇಕು. ಯೋಜನೆ ಜಾರಿ ಮಾಡದಂತೆ ರಾಜ್ಯ ಸರ್ಕಾರ ಮತ್ತು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಗಾಂಧಿ ಬಜಾರ್‌ ಜನಸಂದಣಿ ಪ್ರದೇಶವಾಗಿದೆ. ದೊಡ್ಡ ಸಂಖ್ಯೆಯಲ್ಲಿ ಬೀದಿ ವ್ಯಾಪಾರಿಗಳು ರಸ್ತೆಯಲ್ಲಿ ಕೂತು ವ್ಯಾಪಾರ ಮಾಡುತ್ತಿರುತ್ತಾರೆ. ಬೆಳಗ್ಗೆ ಮತ್ತು ಸಂಜೆ ವಾಹನ ಮತ್ತು ಜನ ದಟ್ಟಣೆ ಹೆಚ್ಚಿರುತ್ತದೆ. ಇದರಿಂದ ವಿವಿಧ ಜಂಕ್ಷನ್‌ಗಳಲ್ಲಿ ಪಾದಚಾರಿಗಳು ಸುರಕ್ಷತೆಯಿಂದ ರಸ್ತೆ ದಾಟಲು, ಬೀದಿ ವ್ಯಾಪಾರಿಗೆ ಸೂಕ್ತ ಸ್ಥಳಾವಕಾಶ ಒದಗಿಸಲು, ವಾಹನಗಳ ಸುಗಮ ಸಂಚಾರ ಹಾಗೂ ನಿಲುಗಡೆಗೆ, ತಂಗುದಾಣದೊಂದಿಗೆ ಬಸ್‌ ನಿಲ್ದಾಣ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ 'ಗಾಂಧಿ ಬಜಾರ್‌ ಮಾರುಕಟ್ಟೆ ಬೀದಿ ಮರು ವಿನ್ಯಾಸ ಯೋಜನೆ' ಜಾರಿ ಮಾಡಲಾಗುತ್ತಿದೆ. ಇಡೀ ಗಾಂಧಿ ಬಜಾರ್‌ ರಸ್ತೆಯ ಉತ್ತಮ ನಿರ್ವಹಣೆ ಪ್ರಸ್ತಾವನೆಯನ್ನು ಈ ಯೋಜನೆ ಒಳಗೊಂಡಿದೆ.

ಯೋಜನೆಯ ಅನುಷ್ಠಾನ 2022ರ ಡಿಸೆಂಬರ್‌ನಲ್ಲೇ ಆರಂಭವಾಗಿದೆ. ಈಗಾಗಲೇ ಶೇ 95ರಷ್ಟು ಪೂರ್ಣಗೊಂಡಿದೆ. ಇದಕ್ಕಾಗಿ 24.88 ಕೋಟಿ ರೂ.ವ್ಯಯಿಸಲಾಗಿದೆ. ಬಾಕಿ ಉಳಿದಿರುವ ಶೇ 5ರಷ್ಟು ಕಾಮಗಾರಿ 2025ರ ಜನವರಿಯಲ್ಲಿ ಪೂರ್ಣಗೊಳ್ಳಲಿದೆ. ಈ ಹಂತದಲ್ಲಿ ಯೋಜನೆಗೆ ಯಾವುದೇ ಮಾರ್ಪಾಡು ಮಾಡಲು ನಿರ್ದೇಶಿಸಿದರೆ ಅದರಿಂದ ತೊಂದರೆ ಉಂಟಾಗಲಿದೆ ಎಂದು ಪೀಠ ಅಭಿಪ್ರಾಯಪಟ್ಟಿತು.

ಅಲ್ಲದೆ, ಸಾರ್ವಜನಿಕರ ಹಿತಾಸಕ್ತಿ ಹಾಗೂ ಅನುಕೂಲಕ್ಕಾಗಿಯೇ ಈ ಯೋಜನೆ ಜಾರಿಗೊಳಿಸುತ್ತಿರುವ ಕಾರಣ ಯೋಜನೆ ಜಾರಿ ಮಾಡದಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂಬ ಅರ್ಜಿದಾರರ ಮನವಿಯನ್ನು ಪುರಸ್ಕರಿಸಲಾಗದು ಎಂದು ಪೀಠ ತಿಳಿಸಿತು

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು