LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಗುಂಡಿನ ದಾಳಿಗೆ ನಕ್ಸಲ್ ನಾಯಕ ಬಲಿ ಮುಖ್ಯವಾಹಿನಿಗೆ ಕರೆತರುವ ಯತ್ನ ಮುಂದುವರಿಕೆ: ಪರಂ

ಬೆಂಗಳೂರು: ನಕ್ಸಲ್ ನಾಯಕ ಹೆಬ್ರಿ ಸಮೀಪದ ಕಬ್ಬಿನಾಲೆ ಮೂಲದ ವಿಕ್ರಂ ಗೌಡನನ್ನು ನಕ್ಸಲ್ ನಿಗ್ರಹ ದಳ (ಎಎನ್‍ಎಫ್) ಪೊಲೀಸರು ಸೋಮವಾರ ರಾತ್ರಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.ಕಳೆದ ಕೆಲವು ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಕಂಡುಬಂದ ಹಿನ್ನೆಲೆಯಲ್ಲಿ ಎಎನ್‍ಎಫ್ ತಂಡ ಕೂಂಬಿಂಗ್ ತೀವ್ರಗೊಳಿಸಿತ್ತು.

ಹೆಬ್ರಿ ಪರಿಸರ ಕಬ್ಬಿನಾಲೆ, ಪೀತೆಬೈಲು ಪರಿಸರದಲ್ಲಿ ನಾಲ್ವರು ನಕ್ಸಲರು ಓಡಾಡುತ್ತಿದ್ದ ಮಾಹಿತಿ ಹಿನ್ನೆಲೆಯಲ್ಲಿ ಎಎನ್‍ಎಫ್ ಕಾರ್ಯಾಚರಣೆ ನಡೆಸಿದ್ದು, ಈನಡುವೆ ಎಎನ್‍ಎಫ್ ಮತ್ತು ನಕ್ಸಲರ ನಡುವೆ ನಿನ್ನೆ ರಾತ್ರಿ ಮುಖಾಮುಖಿಯಾಗಿದ್ದು, ಗುಂಡಿನ ಚಕಮಕಿ ನಡೆದುನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಗುಂಡು ತಗುಲಿ ಮೃತಪಟ್ಟಿದ್ದಾನೆ. ಇನ್ನೂ ಮೂವರು ಕಾಡಿನಲ್ಲಿ ತಲೆಮರೆಸಿಕೊಂಡಿದ್ದಾರೆ.

ಕಾರ್ಕಳ, ಹೆಬ್ರಿ ಸಹಿತ ವಿವಿಧ ಪಶ್ಚಿಮಘಟ್ಟದ ಕಾಡಿನಲ್ಲಿ ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಂಡಿದೆ.ಘಟನೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.ಮೃತ ವಿಕ್ರಂ ಗೌಡ ನೇತ್ರಾವತಿ ದಳದ ಮುಖ್ಯಸ್ಥನಾಗಿದ್ದ. ಕಸ್ತೂರಿ ರಂಗನ್ ವರದಿ ಅನುಷ್ಠಾನ ಹಿನ್ನೆಲೆಯಲ್ಲಿ ಗುಪ್ತ ಸಭೆ ನಡೆಸಿದ್ದ ವರದಿಯಾಗಿತ್ತು.
ವಿಕ್ರಮ್ ಗೌಡ ಹತ್ಯೆ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಗ್ರೇಡೆಡ್ ನಕ್ಸಲ್‍ನನ್ನು ನಕ್ಸಲ್ ನಿಗ್ರಹ ಪಡೆ ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ.

ಕಳೆದ 20 ವರ್ಷಗಳಿಂದ ಆತನನ್ನು ಪೊಲೀಸರು ಹುಡುಕುತ್ತಿದ್ದರು. ಆತ ತಪ್ಪಿಸಿಕೊಂಡು ಓಡಾಡುತ್ತಿದ್ದ. ಈ ಹಿಂದೆ ನಡೆದ ಅನೇಕ ಎನ್‍ಕೌಂಟರ್‍ಗಳಲ್ಲಿ ವಿಕ್ರಂ ಗೌಡ ತಪ್ಪಿಸಿಕೊಂಡಿದ್ದ ಎಂದಿದ್ದಾರೆ.ನಿನ್ನೆ ಸಂಜೆ ವಿಕ್ರಂ ಗೌಡ ಎನ್‍ಕೌಂಟರ್ ಆಗಿದೆ. ಆತನ ಚಲನವಲನಗಳನ್ನು ಪೊಲೀಸರು ಗಮನಿಸುತ್ತಿದ್ದರು. ಆತನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದರು. ಸೋಮವಾರ ರಾತ್ರಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಮಾಡಿದ್ದಾರೆ.

ಆತ ಆತ ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿದ್ದ. ಪೊಲೀಸರು ಪ್ರತಿ ದಾಳಿ ನಡೆಸಿದ್ದಾರೆ. ಆತನ ಜತೆಯಲ್ಲಿದ್ದ ಇಬ್ಬರು ಮೂವರು ಓಡಿ ಹೋಗಿದ್ದಾರೆ. ಆ ಭಾಗದಲ್ಲಿ ಕೂಂಬಿಂಗ್ ಮುಂದುವರೆದಿದೆ ಎಂದು ಪರಮೇಶ್ವರ್ ಮಾಹಿತಿ ನೀಡಿದ್ದಾರೆ.ನಾವು ರಾಜ್ಯದಲ್ಲಿ ನಕ್ಸಲ್ ಕಾಲ ಮುಗಿಯಿತು ಅಂದುಕೊಂಡಿದ್ದೆವು. ಆದರೆ, ಕಳೆದ ವಾರ ರಾಜು ಮತ್ತು ಲತಾ ಎಂಬ ನಕ್ಸಲರು ಪತ್ತೆ ಆದರು.

ನಂತರ ಅವರಿಬ್ಬರೂ ತಪ್ಪಿಸಿಕೊಂಡು ಹೋದರೆಂದು ಕೂಂಬಿಂಗ್ ಆಪರೇಷನ್ ನಡೆಸಲಾಯ್ತು. ಕಳೆದ ಒಂದು ವಾರದಿಂದ ಕೂಂಬಿಂಗ್ ನಡೆಯುತ್ತಿತ್ತು. ಆಗ ಇದ್ದಕಿದ್ದ ಹಾಗೆ ವಿಕ್ರಂ ಗೌಡ ಬರುವ ಮಾಹಿತಿ ಸಿಕ್ಕಿತ್ತು. ಆತನ ಎನ್‍ಕೌಂಟರ್ ಮಾಡುವುದು ಆ ಸಂದರ್ಭದಲ್ಲಿ ಪೊಲೀಸರಿಗೆ ಅನಿವಾರ್ಯವಾಯಿತು ಎಂದು ಅವರು ತಿಳಿಸಿದ್ದಾರೆ.

ನಕ್ಸಲರನ್ನು ಮುಖ್ಯ ವೇದಿಕೆಗೆ ಕರೆತರುವಪ್ರಯತ್ನಗಳು ನಡೆಯುತ್ತಿವೆ. ಹಿಂದೆ ಪಾವಗಡಭಾಗದಲ್ಲಿ ನಕ್ಸಲರನ್ನು ಮಾತನಾಡಿ ಮುಖ್ಯ ವೇದಿಕೆಗೆ ಕರೆತರಲಾಗಿತ್ತು. ಈಗಲೂ ಈ ಪ್ರಯತ್ನ ನಡೆಯುತ್ತಿದೆ. ಶರಣಾಗಲು ಬಯಸುವ ನಕ್ಸಲರಿಗೆ ಸಾಮಾನ್ಯ ಬದುಕು ನಡೆಸಲು ಸರ್ಕಾರ ಅವಕಾಶ ಮಾಡಿಕೊಡಲಿದೆ, ಅದು ಇದ್ದಿದ್ದೇ. ಆದರೆ ಅರಣ್ಯ ಭಾಗದಲ್ಲಿದ್ದು, ಪೊಲೀಸರ ಮೇಲೆ ತಪ್ಪಿಸಿಕೊಂಡು ಹೋಗಲು ಪ್ರಯತ್ನ ಮಾಡಿದರೆ ಈ ಥರ ಘಟನೆ ಸಹಜ ಎಂದು ಪರಮೇಶ್ವರ್ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು