LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಗುಡ್ಡ ಕುಸಿತ: 9 ಮಂದಿ ನಾಪತ್ತೆ ಭಾರಿ ಮಳೆಗೆ ಅಂಕೋಲಾ ತಾಲ್ಲೂಕಿನ ಶಿರೂರು ಬಳಿ ನಡೆದ ಘಟನೆ

ಅಂಕೋಲಾ: ಉತ್ತರ ಕನ್ನಡದಲ್ಲಿ ಭಾರಿ ಮಳೆಯ ಪರಿಣಾಮ ಅಂಕೋಲಾ ತಾಲ್ಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿ ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಭೀಕರ ಮಳೆಯಿಂದ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಮಣ್ಣಿನಡಿಯಲ್ಲಿ ಒಂದೇ ಕುಟುಂಬದ ಐವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹೆದ್ದಾರಿ ಪಕ್ಕದಲ್ಲಿದ್ದ ಮನೆಯಲ್ಲಿನ ಕುಟುಂಬದ ಸದಸ್ಯರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಎರಡು ಕುಟುಂಬದ ಒಟ್ಟು ಒಂಬತ್ತು ಮಂದಿ ಮಣ್ಣಿನಡಿ ಸಿಲುಕಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಒಂದು ಕುಟುಂಬದ ಲಕ್ಷ್ಮಣ ನಾಯ್ಕ (47), ಶಾಂತಿ ನಾಯ್ಕ (36), ರೋಶನ್ (11), ಅವಂತಿಕಾ (6) ಹಾಗೂ ಜಗನ್ನಾಥ(55)ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮತ್ತೊಂದು ಕುಟುಂಬದ ನಾಲ್ವರ ಹೆಸರು ತಿಳಿದುಬಂದಿಲ್ಲ.

ಗುಡ್ಡ ಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಕಾರವಾರ ಗೋವಾ ಅಂಕೋಲಾದಿಂದ ಕೇರಳ ಮಂಗಳೂರು ಕುಮಟಾ ಮತ್ತಿತರ ಭಾಗಗಳಿಗೆ ತೆರಳುವವರು ಹೆದ್ದಾರಿಯಲ್ಲಿ ಕಾಲ ಕಳೆಯುವಂತಾಗಿದೆ.ಚತುಷ್ಪತ ಹೆದ್ದಾರಿಗಾಗಿ ಗುಡ್ಡವನ್ನ ಕೊರೆಯಲಾಗಿತ್ತು, ಈ ಗುಡ್ಡವು ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಭಾರಿ ಪ್ರಮಾಣದಲ್ಲಿ ಕುಸಿತವಾಗಿರುವುದರಿಂದ ಹೆದ್ದಾರಿಯ ತುಂಬಾ ಮಣ್ಣು ಕಲ್ಲುಗಳು ತುಂಬಿ ಸಂಚರಿಸಲು ಆಗದ ಹಾಗೆ ಮಾರ್ಪಾಡಾಗಿದೆ.

ಹೆದ್ದಾರಿಯಲ್ಲಿ ನಿಂತಿರುವ ಅನೇಕ ವಾಹನಗಳಿಗೂ ಹಾನಿ ಉಂಟಾಗಿದ್ದು ಅಲ್ಲಿ ನಿಂತಿರುವ ಒಂದು ಗ್ಯಾಸ್ ಟ್ಯಾಂಕರ್ ಪಕ್ಕದಲ್ಲಿರುವ ಗಂಗಾವಳಿ ನದಿಗೆ ಉರುಳಿ ಹೋಗಿರುವ ಘಟನೆ ನಡೆದಿದೆ. ಅದರಲ್ಲಿದ್ದ ಚಾಲಕ ಕ್ಲೀನರ್ ಕೂಡ ನೀರಿನಲ್ಲಿ ಹೋಗಿರುವುದಾಗಿ ತಿಳಿದು ಬಂದಿದೆ.ಈಗಾಗಲೇ ಅಂಕೋಲಾ ತಾಲೂಕು ಆಡಳಿತ ಅಗ್ನಿಶಾಮಕದಳ ಪೊಲೀಸ್ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು ಮಣ್ಣಿನ ಅಡಿಯಲ್ಲಿ ಎಷ್ಟು ಜನರು ಇರುವುದನ್ನ ಖಚಿತಪಡಿಸಿಕೊಳ್ಳುತ್ತಿದ್ದಾರೆ. ರಸ್ತೆಯ ಮೇಲೆ ಬಿದ್ದಿರುವ ಮಣ್ಣಿನ ತೆರವು ಮಾಡಲು 24 ಗಂಟೆಗಳು ಅಧಿಕಕಾಲ ಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಎನ್‍ಡಿಆರ್‍ಎಫ್ ನಿಂದಲೂ ಕಾರ್ಯಾಚರಣೆ ನಡೆಸಲಾಗುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು