LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bidar

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಇಬ್ಬರು ಪೊಲೀಸರ ತಲೆದಂಡ

ಬೀದರ್: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀದರ್ ಗಾಂಧಿಗಂಜ್‌ನ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಪ್ರಕರಣದಲ್ಲಿ ಕರ್ತವ್ಯಲೋಪ ಆರೋಪದ ಮೇಲೆ ಓರ್ವ‌ ಮಹಿಳಾ ಹೆಡ್​ ಕಾನ್ಸ್​ಟೇಬಲ್​ ಹಾಗೂ ಮತ್ತೋರ್ವ ಪುರುಷ ಹೆಡ್‌ ಕಾನ್‌ಸ್ಟೇಬಲ್‌ನ ಸಸ್ಪೆಂಡ್ ಮಾಡಿ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಆದೇಶ ಹೊರಡಿಸಿದ್ದಾರೆ. ರಾಜೇಶ್ ಹಾಗೂ ಶಾಮಲಾ ಎಂಬ ಇಬ್ಬರು ಹೆಡ್​ ಕಾನ್‌ಸ್ಟೇಬಲ್‌ಗಳೇ ಅಮಾನತುಗೊಂಡವರು.

ಸಚಿನ್ ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ. ಇದನ್ನು ಗಮನಿಸಿದ ಕುಟುಂಬಸ್ಥರು ಆತಂಕಗೊಂಡು ಕೂಡಲೇ ಬೀದರ್‌ನ ಗಾಂಧಿಗಂಜ್ ಠಾಣೆಗೆ ತೆರಳಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಹೀಗೆ ಡೆತ್​ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದಾನೆ. ಕೂಡಲೇ ಹುಡುಕಿ‌ ಕೊಡುವಂತೆ ಸಚಿನ್ ಸಹೋದರ ಹಾಗೂ ಸಹೋದರಿ ಮನವಿ ಮಾಡಿದ್ದರು. ಆದ್ರೆ, ದೂರು ದಾಖಲಿಸಲು ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಮಾಹಿತಿ ನೀಡಿದ್ದಾರೆ.

ಒಂದು ವೇಳೆ ಕುಟುಂಬಸ್ಥರ ದೂರು ಸ್ವೀಕರಿಸಿ ಕಾರ್ಯಪ್ರವೃತ್ತರಾಗಿದ್ದರೆ ಸಚಿನ್​ನ ರಕ್ಷಣೆ ಮಾಡಬಹುದಿತ್ತೆನೋ. ಆತನ ಮೊಬೈಲ್​ ಲೋಕೇಷನ್ ಟ್ರ್ಯಾಕ್ ಮಾಡಿ ಆತನನ್ನು ಪತ್ತೆ ಮಾಡಬಹುದಿತ್ತು. ಆದ್ರೆ, ಪೊಲೀಸರು ಯಾವುದೇ ತಲೆ ಕಡೆಸಿಕೊಳ್ಳದೇ ನಿರ್ಲಕ್ಷ್ಯ ತೋರಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST