LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಗೆಳತಿಯನ್ನು ಪಾರ್ಟಿಗೆ ಕರೆದು ಅತ್ಯಾಚಾರ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು : ಗೆಳತಿಯನ್ನು ಪಾರ್ಟಿಗೆಎಂದು ಕರೆದು ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರ ನಡೆಸಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಹರೀಶ್ ಹಾಗೂ ಹೇಮಂತ್ ಬಂಧಿತ ಆರೋಪಿಗಳು. ಇವರಿಬ್ಬರೂ ಪರಸ್ಪರ ಗರ್ಲ್ ಫ್ರೆಂಡ್ಸ್ ಅದಲು ಬದಲು ಮಾಡಿಕೊಂಡು ಸಹಕರಿಸುವಂತೆ ಒತ್ತಾಯಿಸಿದ್ದು, ಸಹಕರಿಸದಿದ್ದಾಗ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿಯೊಬ್ಬಳು ನೀಡಿದ್ದ ದೂರಿನ ಅನ್ವಯ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ ಹರೀಶ್, ಆಕೆಯನ್ನು ಪ್ರೀತಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದ. ಬೆಂಗಳೂರು ಹೊರವಲಯದಲ್ಲಿ ಪಾರ್ಟಿಗೆಂದು ಕರೆದೊಯ್ದು ಸ್ನೇಹಿತನೊಂದಿಗೆ ಸಹಕರಿಸುವಂತೆ ಒತ್ತಾಯಿಸಿದ್ದ. ಆಕೆ ಒಪ್ಪದಿದ್ದಾಗ ಆರೋಪಿಗಳು ಅತ್ಯಾಚಾರವೆಸಗಿದ್ದಾರೆಂದು ದೂರು ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

'ಸ್ವಿಂಗರ್ಸ್' ಎನ್ನುವ ಹೆಸರಿನ ವಾಟ್ಸ್‍ಆಪ್ ಗ್ರೂಪ್ ಮಾಡಿಕೊಂಡಿದ್ದ ಆರೋಪಿಗಳು, 'ಪಾರ್ಟಿ ಆಯೋಜಿಸಿ ಗೆಳತಿಯರೊಂದಿಗೆ ತೆರಳುತ್ತಿದ್ದರು. ಬಳಿಕ ಪಾರ್ಟಿಯಲ್ಲಿ ಪರಸ್ಪರ ಗೆಳತಿಯರನ್ನು ಬದಲಿಸಿಕೊಂಡು, ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸುತ್ತಿದ್ದರು.ಆರೋಪಿಗಳ ಮೊಬೈಲ್ ಪೋನ್‍ನಲ್ಲಿ ಹತ್ತಾರು ಯುವತಿಯರ ಬೆತ್ತಲೆ ಪೋಟೋಗಳು, ಏಕಾಂತದ ವಿಡಿಯೋಗಳು ಪತ್ತೆಯಾಗಿವೆ.

ಅದೇ ವಿಡಿಯೋ,ಪೋಟೋಗಳನ್ನ ತೋರಿಸಿ ಆರೋಪಿಗಳು ಯುವತಿಯರಿಗೆ ಬೆದರಿಸುತ್ತಿದ್ದರು ಎಂಬುದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದರು.ಘಟನೆಯಿಂದ ಬೇಸತ್ತ ಯುವತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಸಿಸಿಬಿ ಪೊಲೀಸರು, ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು