LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mandya

ಗೊ.ರು.ಚನ್ನಬಸಪ್ಪ ಅವರದು ತ್ರಿಕರಣ ಶುದ್ಧಿ ಕಾಯಕ

ಮಂಡ್ಯ: ನಾಡೊಜಾ ಗೊ.ರು.ಚನ್ನಬಸಪ್ಪ ಅವರು ತ್ರಿಕರಣ ಶುದ್ಧಿ ಕೆಲಸ ಮಾಡಿದವರು. ಜನಪದ ಸಾರಸ್ವತ ಲೋಕದ ದಿಗ್ಗಜರು ಎಂದು ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷರಾದ ಮನು ಬಳಿಗಾರ ಅಭಿಪ್ರಾಯಪಟ್ಟರು.ಅವರು ಶ್ರೀರಂಗಪಟ್ಟಣದ ಹೊಟೇಲ್ ಮಯೂರ ವ್ಯೂವ್‍ನಲ್ಲಿ ಸಂಪಾದಕರೊಂದಿಗೆ ಮಾತನಾಡಿದರು.

ಗೊ.ರು.ಚನ್ನಬಸಪ್ಪ ಅವರು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿರುವುದು ಸಮ್ಮೇಳನಕ್ಕೆ ಶೋಭೆ ತಂದಿದೆ. ಅವರಲ್ಲಿನ ಅಗಾಧವಾದ ವಿದ್ವತ್, ಜನಪದದ ಬಗ್ಗೆ ಇರುವ ಕಳಕಳಿ ಮಹತ್ವವಾದದ್ದು. ಜಾನಪದ ವಿಶ್ವ ವಿದ್ಯಾಲಯ ಆಗಬೇಕು ಎಂದು ಪ್ರತಿಪಾದಿಸಿದವರಲ್ಲಿ ಗೊ.ರು.ಚ. ಮೊದಲಿಗರಾಗಿದ್ದಾರೆ. ಜನಪದವು ಎಲ್ಲಾ ಸಾಹಿತ್ಯದ ತಾಯಿ ಬೇರಾಗಿದೆ. ಅವರು ಪ್ರತಿಪಾದಿಸಿರುವುದರಲ್ಲಿ ವಾಸ್ತವವಿದೆ ಎಂದು ನಾನೂ ಕೂಡ ಅವರ ಮಾತಿಗೆ ಬೆಂಬಲ ವ್ಯಕ್ತಪಡಿಸಿದ್ದೆ.

ಜಾನಪದಕ್ಕೆ ತಮ್ಮನ್ನು ತಾವು ಅರ್ಪಿಸಿಕೊಂಡ ದಿಗ್ಗಜರಲ್ಲಿ ಮೊದಲಿಗರು. ಜಾನಪದ ಅಕಾಡೆಮಿಯ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರು ಒಳ್ಳೆಯ ಕೆಲಸವನ್ನು ಮಾಡಿದ್ದಾರೆ.ಶರಣ ಸಾಹಿತ್ಯ ಪರಿಷತ್‍ನಲ್ಲೂ ಅವರು ತ್ರಿಕರಣ ಶುದ್ಧಿಯಿಂದ ಕೆಲಸ ಮಾಡಿದ್ದಾರೆ. ಶರಣ ಸಾಹಿತ್ಯ ಪರಿಷತ್‍ನ ಗೌರವ ಧನವನ್ನು ಕೂಡ ಅವರು ಪಡೆದುಕೊಂಡಿಲ್ಲ.

ಇಂತಹ ಗುಣವು ಬಹಳ ಜನರಿಗೆ ಪ್ರೇರಣೆಯಾಗಿದೆ. ಅವರ ಪ್ರೇರಣೆಯಿಂದಾಗಿ ನಾನೂ ಕೂಡ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷನಾಗಿದ್ದಾಗ ಗೌರವ ಧನವನ್ನು ಪಡೆದುಕೊಂಡಿಲ್ಲ. ಹೀಗೆ ಗೊ.ರು.ಚನ್ನಬಸಪ್ಪ ಅವರ ಕಾರ್ಯ ಎಲ್ಲರಿಗೂ ಮಾದರಿಯಾಗಿದೆ. ಅವರ ಮಾರ್ಗದರ್ಶನ ಜನಪದ ಲೋಕಕ್ಕೆ ಅಗತ್ಯವಿದೆ. ಅವರು ಇನ್ನೂ ಹೆಚ್ಚು ಕಾಲ ನಮ್ಮೊಂದಿಗೆ ಇದ್ದು ಜನಪದ ಸಾಹಿತ್ಯದ ಉಜ್ವಲಕ್ಕೆ ಬೆನ್ನೆಲುಬಾಗಿ ನಿಲ್ಲಬೇಕು ಎಂದು ಮನು ಬಳಿಗಾರ ನುಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ದಿನಪತ್ರಿಕೆಗಳ ಸಂಘದ ರಾಜ್ಯಾಧ್ಯಕ್ಷರಾದ ಡಾ. ಜಿ.ವೈ.ಪದ್ಮಾ ನಾಗರಾಜ, ಪ್ರಧಾನ ಕಾರ್ಯದರ್ಶಿ ಚನ್ನಬಸವ ಬಾಗಲವಾಡ, ಖಜಾಂಚಿ ಖಾನ್ ಸಾಬ್ ಮೋಮಿನ್, ಉಪಾಧ್ಯಕ್ಷ ವಿ.ಅನೂಪಕುಮಾರ, ಗೋವಿಂದನಹಳ್ಳಿ ಕೃಷ್ಣೇಗೌಡ, ಡಾ.ಗುಣವಂತ ಮಂಜುನಾಥ ಸೇರಿದಂತೆ ಇನ್ನಿತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು