LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಗೋಪಿನಾಥ ಬೆಟ್ಟದಲ್ಲಿ ಧರ್ಮ ಕೀರ್ತಿರಾಜ್ ಅಭಿನಯದ ನೂತನ ಚಿತ್ರದ ಮುಹೂರ್ತ

ಲಿತನ್ಯ ಗೋಲ್ಡ್ ಲೀಫ್ ಮೀಡಿಯಾ ವೆಂಚರ್ಸ್ ಪ್ರೈ ಲಿ ಹಾಗೂ ಸಾರ್ಥಕ್ ಕ್ರಿಯೇಟರ್ಸ್ ಲಾಂಛನದಲ್ಲಿ ಜಿ.ಹೆಚ್.ಜನಾರ್ದನ್ ಹಾಗೂ ಸಿ.ಎಲ್ ಹರ್ಷವರ್ಧನ್ ನಿರ್ಮಿಸುತ್ತಿರುವ, ರಮೇಶ್ ರಾಜ್ ಅವರ ನಿರ್ದೇಶನದಲ್ಲಿ ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸುತ್ತಿರುವ "ಪ್ರೊಡಕ್ಷನ್ ನಂ 1" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಚಿಕ್ಕಬಳ್ಳಾಪುರದ ಗೋಪಿನಾಥ ಬೆಟ್ಟದಲ್ಲಿರುವ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.

ಮಾಜಿ ಶಾಸಕರಾದ ಕೆ.ಪಿ.ಬಚ್ಚೇಗೌಡ ಅವರು ಆರಂಭ ಫಲಕ ತೋರಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಎಂ.ಮುನೇಗೌಡ ಕ್ಯಾಮೆರಾ ಚಾಲನೆ ಮಾಡಿದರು.ಆಕ್ಷನ್ ಡ್ರಾಮ ಜಾನರ್ ನ ಈ ಚಿತ್ರಕ್ಕೆ ನಿರ್ದೇಶಕ ರಮೇಶ್ ರಾಜ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. "ಗ್ಯಾಂಗ್ ಲೀಡರ್", " ತವರಿನ ಋಣ" ಚಿತ್ರಗಳನ್ನು ನಿರ್ದೇಶಿಸಿರುವ ರಮೇಶ್ ರಾಜ್ ಅವರಿಗೆ ಇದು ಮೂರನೇ ಚಿತ್ರ. ಈಶ್ವರಿ ಸುರೇಶ್ ಛಾಯಾಗ್ರಹಣ, ಶಶಿ ಸಂಕಲನ, ಬಿ.ವಿ.ರೆಡ್ಡಿ ಸಹ ನಿರ್ದೇಶನ ಹಾಗೂ ಮಂಜುನಾಥ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ.

ವಂಟೂರು ಶ್ರೀನಿವಾಸ್ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಧರ್ಮ ಕೀರ್ತಿರಾಜ್ ಅವರಿಗೆ ಪ್ರಿಯಾ ಹೆಗ್ಡೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗುತ್ತಿದೆ. ಚಿಕ್ಕಬಳ್ಳಾಪುರ, ಬೆಂಗಳೂರು, ಮಡಿಕೇರಿ ಹಾಗೂ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು