LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

‘ಗೋಪಿಲೋಲ’ನಾಗಿ ಬಂದ ಯುವ ಪ್ರತಿಭೆ

ಕನ್ನಡದಲ್ಲಿ ಛಲಗಾರ, ಸರ್ಕಾರಿ ಕೆಲಸ ದೇವರ ಕೆಲಸ, ಮನಸ್ಸಿನಾಟ, ಬಂಗಾರದ ಮಕ್ಕಳು, ಮರಾಠಿಯಲ್ಲಿ ಫೆಬ್ರವರಿ ೧೪, ಮಿಷನ್ ಅಂಬ್ಯುಲೆನ್ಸ್ ಸಿನಿಮಾ ನಿರ್ದೇಶಿಸಿರುವ ಆರ್.ರವೀಂದ್ರ ಸದ್ದಿಲ್ಲದೇ ಹೊಸ ಸಿನಿಮಾ ಮುಗಿಸಿದ್ದಾರೆ. ಈ ಚಿತ್ರದ ಟೈಟಲ್ ರಿಲೀಸ್ ಆಗಿದೆ. ರವೀಂದ್ರ ಅವರ ಹೊಸ ಪ್ರಯತ್ನಕ್ಕೆ ಗೋಪಿಲೋಲ ಎಂಬ ಶೀರ್ಷಕೆ ಇಡಲಾಗಿದೆ.

ಈ ಸಿನಿಮಾದಲ್ಲಿ ಯುವ ಪ್ರತಿಭೆ ಮಂಜುನಾಥ್ ಅರಸು ನಾಯಕನಾಗಿ ನಟಿಸಿದ್ದು, ನಿಮಿಷಾ ಕೆ ಚಂದ್ರ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಉಳಿದಂತೆ ಆಂಕರ್ ಕಂ ನಟಿ ಜಾಹ್ನವಿ, ಎಸ್.ನಾರಾಯಣ್, ಪದ್ಮಾ ವಸಂತಿ, ನಾಗೇಶ್ ಯಾದವ್, ಸ್ವಾತಿ, ಹಿರಿಯ ನಿರ್ದೇಶಕ ನಿರ್ದೇಶಕ ಜೋಸೈಮನ್ ಸೇರಿದಂತೆ ತೆಲುಗು ನಟ ಸಪ್ತಗಿರಿ ಈ ಚಿತ್ರದ ಮೂಲಕ ಕನ್ನಡ ಇಂಡಸ್ಟ್ರೀಗೆ ಎಂಟ್ರಿ ಕೊಡುತ್ತಿದ್ದಾರೆ.

ಛಲಗಾರ, ನೀವು ಕರೆ ಮಾಡಿದ ಚಂದದಾರರು, ರಾಂಧವ ಸಿನಿಮಾ ನಿರ್ಮಿಸಿದ್ದ ಎಸ್.ಆರ್.ಸನತ್ ಕುಮಾರ್ ಚಿತ್ರಕ್ಕೆ ಹಣ ಹಾಕಿದ್ದಾರೆ. ನಾಯಕನಾಗಿ ನಟಿಸುತ್ತಿರುವ ಮಂಜುನಾಥ್ ಗೋಪಿಲೋಲ ಈ ಚಿತ್ರಕ್ಕೆ ಸಹ ನಿರ್ಮಾಪಕರಾಗಿ ಜೊತೆಯಾಗಿದ್ದಾರೆ. ಸಹಜ ಕೃಷಿ ಜೊತೆಗೆ ಪ್ರೇಮಕಥೆ ಎಳೆಯನ್ನು ಹೊಂದಿರುವ ಈ ಸಿನಿಮಾಗೆ ಕೇಶವಚಂದ್ರ ಚಿತ್ರಕಥೆ ಸಂಭಾಷಣೆ ಬರೆದಿದ್ದು, ಕೆಎಂ ಪ್ರಕಾಶ್ ಸಂಕಲನ, ಮಿದುನ್ ಅಸೋಕನ್ ಚೆನ್ನೈ ಸಂಗೀತ, . ರಾಕೇಶ್ ಆಚಾರ್ಯ ಹಿನ್ನೆಲೆ ಸಂಗೀತ, ಸೂರ್ಯಕಾಂತ್ ಎಚ್ ಕ್ಯಾಮೆರಾ ವರ್ಕ್, ಥ್ರಿಲ್ಲರ್ ಮಂಜು, ಜಾನಿ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಗೋಪಿಲೋಲ ಸಿನಿಮಾಗೆ ಜಯಂತ್ ಕಾಯ್ಕಿಣಿ, ಕವಿರಾಜ್, ಕೇಶವಚಂದ್ರ ಸಾಹಿತ್ಯ ಬರೆದಿದ್ದು, ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್, ಹೇಮಂತ್, ಅನುರಾಧಾ ಭಟ್, ವಾರಿಜ ಶ್ರೀ, ಶಶಾಂಕ್ ಹಾಗೂ ಗೀತಾ ಭಟ್ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಸದಾಚಾರ್ಯ, ಧನಂಜಯ್ ಹಾಗೂ ಹರಿಕೃಷ್ಣ ನೃತ್ಯ ಸಂಯೋಜನೆ ಹಾಡುಗಳಿಗಿದೆ. ಗೋವಾ,ಕೊಡಚಾದ್ರಿ, ಹೊನ್ನಾವರ, ಮಂಗಳೂರು, ಮುರುಡೇಶ್ವರ, ಚಿಕ್ಕಮಗಳೂರು ಹಾಗೂ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ.

ಶೂಟಿಂಗ್ ಮುಗಿಸಿರುವ ಗೋಪಿಲೋಲ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸದ್ಯ ಶೀರ್ಷಿಕೆ ಅನಾವರಣ ಮಾಡಿರುವ ಚಿತ್ರತಂಡ ಮುಂದಿನ ದಿನಗಳಲ್ಲಿ ಟೀಸರ್, ಹಾಡುಗಳನ್ನು ಪ್ರೇಕ್ಷಕರ ಎದುರು ಪ್ರಸ್ತುತಪಡಿಸಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು