LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಗೋವಾ ಮಾದರಿ ಗುಡ್ಡ ಕಡಿತ ನಿಷೇಧ ಆಗಲಿ: ಜಗದೀಶ್ ವಿ. ಸದಂ ಆಗ್ರಹ

ಬೆಂಗಳೂರು: ಅಭಿವೃದ್ಧಿ ಹೆಸರಿನಲ್ಲಿ ಹೆದ್ದಾರಿಗಳ ನಿರ್ಮಾಣಕ್ಕಾಗಿ ಗುಡ್ಡಗಳನ್ನು ಅವ್ಯಾಹತವಾಗಿ ಕಡಿಯುವುದನ್ನು ನಿಷೇಧಿಸಿ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಒತ್ತಾಯಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ದುರಂತಕ್ಕೆ ಸಂಬಂಧಿಸಿ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಜಗದೀಶ್ ವಿ. ಸದಂ, ಅವೈಜ್ಞಾನಿಕವಾಗಿ ಗುಡ್ಡಗಳನ್ನು ಕಡಿದು ಹೆದ್ದಾರಿ ನಿರ್ಮಿಸಿರುವುದೇ ಅನಾಹುತಕ್ಕೆ ಕಾರಣವಾಗಿದೆ. ಇದಕ್ಕೆ ಐಆರ್‍ಬಿ ಗುತ್ತಿಗೆದಾರ ಕಂಪನಿ ನೇರ ಹೊಣೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಗುತ್ತಿಗೆದಾರ ಕಂಪನಿಯು ದುರ್ಮರಣಕ್ಕೀಡಾದವರ ಕುಟುಂಬಕ್ಕೆ ಕೂಡಲೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಗುತ್ತಿ ಗೆದಾರ ಕಂಪನಿಯಲ್ಲಿ ಕೇಂದ್ರದ ಪ್ರಭಾವಿ ಸಚಿವರೊಬ್ಬರ ಪಾಲುದಾರಿಕೆ ಇದೆ ಎನ್ನಲಾಗಿದೆ. ಸಂಸದ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರ ಮೌನ ಇದನ್ನು ಪುಷ್ಠೀಕರಿಸುತ್ತಿದೆ. ಉತ್ತರ ಕನ್ನಡ ಜಿಲ್ಲೆಯು ಪರಿಸರ ಸೂಕ್ಷ್ಮ ಪ್ರದೇಶವಾಗಿದೆ. ಪರಿಸರ ಸಂವೇದಿ ಪ್ರದೇಶದಲ್ಲಿ ಯಾವುದೇ ಯೋಜನೆಗಳನ್ನು ಕೈಗೊಳ್ಳುವ ಮೊದಲು ಪರಿಸರಕ್ಕೆ ಹಾನಿಯಾಗದಂತೆ ಮುಂಜಾಗ್ರತೆ ವಹಿಸಿ ಕೆಲಸ ಮಾಡಬೇಕು.

ಮುಂದಾಗುವ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಗೋವಾ ರಾಜ್ಯದಲ್ಲಿ ಈಗಾಗಲೇ ಗುಡ್ಡ ಕಡಿಯುವುದನ್ನು ನಿರ್ಬಂದಿಸಲಾಗಿದೆ. ಅದೇ ಮಾದಿಯಲ್ಲಿ ನಮ್ಮ ರಾಜ್ಯದಲ್ಲೂ ಗುಡ್ಡ ಕಡಿಯುವುದನ್ನು ನಿರ್ಬಂಧಿಸಬೇಕು. ಬಾಂಬೆ-ಪುಣೆ ಮಾದರಿಯಲ್ಲಿ ಕಾಮಗಾರಿ ಕೈಗೊಳ್ಳಬೇಕು ಎಂದು ಜಗದೀಶ್ ಸದಂ ಮನವಿ ಮಾಡಿದರು.

ಗುಡ್ಡದ ಮಧ್ಯೆ ರಸ್ತೆಗಳನ್ನು ನಿರ್ಮಿಸುವಾಗ ಬ್ರಿಟಿಷರ ಮಾದರಿಯ ತಡೆಗೋಡೆಗಳನ್ನು ಕಟ್ಟಬೇಕು. ದೇಶದಾದ್ಯಂತ ಬೆಟ್ಟಗುಡ್ಡಗಳ ನಡುವೆ ಬ್ರಿಟಿಷರು ನೂರಾರು ರೈಲ್ವೆ ಹಳಿಗಳನ್ನು ನಿರ್ಮಿಸಿದ್ದಾರೆ. ಬೃಹತ್ ಬೆಟ್ಟಗಳನ್ನು ಕೊರೆದಿದ್ದಾರೆ, ಸುರಂಗಗಳನ್ನು ನಿರ್ಮಿಸಿದ್ದಾರೆ. ಆದರೆ ಅವುಗಳಿಂದ ಗುಡ್ಡ ಕುಸಿತದಂತಹ ಅವಘಡಗಳು ಸಂಭವಿಸಿರುವ ಉದಾಹರಣೆಗಳು ಬಹಳ ಕಡಿಮೆ.

ಆದರೆ ಈಗೀಗ ನಿರ್ಮಾಣಗೊಳ್ಳುತ್ತಿರುವ ಪ್ರತಿ ಕಾಮಗಾರಿಗಳಲ್ಲೂ ಏನಾದರೊಂದು ಅನಾಹುತಗಳು ಸಂಭವಿಸುತ್ತಿವೆ. ಜನರ ತೆರಿಗೆ ಹಣದಲ್ಲಿ ಕೋಟ್ಯಂತರ ವ್ಯಯಿಸಿ ನಿರ್ಮಾಣಗೊಳ್ಳುತ್ತಿರುವ ಇಂತಹ ಯೋಜನೆಗಳು ದುರಂತಗಳಿಗೆ ದಾರಿಯಾಗುತ್ತಿರುವುದು ಬೇಸರದ ಸಂಗತಿ. ಭ್ರಷ್ಟಾಚಾರ ನಿರ್ಮೂಲನೆಯಾಗದ ಹೊರತು ಸದೃಢ ಕಾಮಗಾರಿ ಅಸಾಧ್ಯ ಎಂದು ಬೇಸರ ವ್ಯಕ್ತಪಡಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು