LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಗೋವಿಂದರಾಜನಗರ ವಿ.ಕ್ಷೇತ್ರ ಪ್ರಥಮ ಕನ್ನಡ ಜಾನಪದ ಸಮ್ಮೇಳನಕ್ಕೆ ಡಾ.ಸಿ.ಸೋಮಶೇಖರ್ ಸರ್ವಾಧ್ಯಕ್ಷ

ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕನ್ನಡ ಜಾನಪದ ಪರಿಷತ್ತಿನ ವತಿಯಿಂದ ೨೦೨೫ರ ಜನವರಿ ೧೮ರಂದು ಶನಿವಾರ ಬೆಳಿಗ್ಗೆಯಿಂದ ಸಂಜೆ ವರೆಗೆ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಪ್ರಥಮ ಕನ್ನಡ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿಗಳು, ಮಾಜಿ ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್ ಅವರನ್ನು ಆಯ್ಕೆ ಮಾಡಲಾಗಿದೆ.
ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ಜಾನಪದ ಎಸ್ ಬಾಲಾಜಿ ಮತ್ತು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷರಾದ ರ. ನರಸಿಂಹಮೂರ್ತಿ ಮಾಹಿತಿ ನೀಡಿ, ಡಾ. ಸಿ. ಸೋಮಶೇಖರ್ ಅವರಿಗೆ ಕನ್ನಡ ಜಾನಪದ ಸಮ್ಮೇಳನಕ್ಕೆ ಅಧಿಕೃತವಾಗಿ ಆಮಂತ್ರಣ ನೀಡಲಾಯಿತು ಎಂದರು.
ಈ ಹಿಂದೆ ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಕನ್ನಡ ಮತ್ತು  ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹಾಗೂ ನಿರ್ದೇಶಕರಾಗಿಯೂ ಡಾ. ಸಿ. ಸೋಮಶೇಖರ್ ರವರು ಕಾರ್ಯ ನಿರ್ವಹಿಸಿದ್ದರು. ಜೊತೆಗೆ 'ಮನೆಯಂಗಳದಲ್ಲಿ ಮಾತುಕತೆ' ಕಾರ್ಯಕ್ರಮದ ರೂವಾರಿಯೂ ಆಗಿ ನಾಡು, ನುಡಿ, ಸಂಸ್ಕೃತಿ  ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಾಧನೆಯ ಶಿಖರವೇರಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಇಂತಹ ಮಹನೀಯರು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಪ್ರಪ್ರಥಮ ಕನ್ನಡ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಒಪ್ಪಿಗೆ ಸೂಚಿಸಿರುವ ನಮ್ಮ ಕನ್ನಡ ಜಾನಪದ ಪರಿಷತ್ತಿನ ಮತ್ತು ನಮ್ಮ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಹೆಮ್ಮೆಯ ಸಂಗತಿ. ಕನ್ನಡ ಜಾನಪದ ಸಮ್ಮೇಳನವನ್ನು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಿಯಕಷ್ಣರವರ ಅಧ್ಯಕ್ಷತೆಯಲ್ಲಿ ಅತ್ಯಂತ ವೈಭವವಾಗಿ ಸಮ್ಮೇಳನವನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಘಟಕ ಅಧ್ಯಕ್ಷ ರ. ನರಸಿಂಹಮೂರ್ತಿ ತಿಳಿಸಿದರು.
ಈ ವೇಳೆ ಕನ್ನಡ ಜಾನಪದ ಪರಿಷತ್ ರಾಜ್ಯ ಸಂಚಾಲಕರಾದ ಪ್ರೊ ಕೆಎಸ್ ಕೌಜಲಗಿ, ಕನ್ನಡ ರಾಜ್ಯ ಯುವ ಸಂಘಗಳ ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ರವಿಕಾಂತ್, ಕನ್ನಡ ಜಾನಪದ ಪರಿಷತ್ತಿನ ಪದಾಧಿಕಾರಿಗಳಾದ ಅಶ್ವಥ್ ನಾರಾಯಣ್, ಕೇಶವ ರಾಜ್, ಸಿ. ಶಿವಶಂಕರ್, ಸವಿತಾ, ರಾಮಾಂಜನೇಯ ಮತ್ತಿತರರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು