LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಗೌತಮ್ ಅದಾನಿ ವಿರುದ್ಧ ಯುಎಸ್ ಕೋರ್ಟ್ ಬಂಧನ ವಾರಂಟ್ ಜಾರಿ?

ನ್ಯೂಯಾರ್ಕ್: ಬಹು ಶತಕೋಟಿ ಡಾಲರ್ ವಂಚನೆಯ ಆರೋಪದ ಮೇಲೆ ಅಮೆರಿಕದಲ್ಲಿ ಪ್ರಮುಖ ಉದ್ಯಮಿ ಗೌತಮ್ ಅದಾನಿ ಅವರ ಮೇಲೆ ದೋಷಾರೋಪ ಹೊರಿಸಿದ್ದ ನ್ಯೂಯಾರ್ಕ್​ನ ಜಿಲ್ಲಾ ನ್ಯಾಯಾಲಯ ನ್ಯೂಯಾರ್ಕ್ ನ್ಯಾಯಾಧೀಶರು ಗೌತಮ್ ಅದಾನಿಯವರ ಬಂಧನಕ್ಕೆ ವಾರಂಟ್ ಹೊರಡಿಸಿದ್ದಾರೆ ಎಂದು ಮಾಧ್ಯಮ ವರದಿಗಳಿಂದ ತಿಳಿದುಬಂದಿದೆ.

ನ್ಯಾಯಾಲಯದ ದಾಖಲೆಗಳನ್ನು ಉಲ್ಲೇಖಿಸಿ, ಬಂಧನ ವಾರಂಟ್ ನ್ನು ವಿದೇಶಿ ಕಾನೂನು ಜಾರಿ ಅಧಿಕಾರಿಗಳಿಗೆ ನೀಡಲಾಗುತ್ತದೆ. ಈ ಹಿಂದೆ, ಯುಎಸ್ ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಕಮಿಷನ್ (SEC) ಅದಾನಿ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಬಿಲಿಯನೇರ್ ಗೌತಮ್ ಅದಾನಿ ವಿರುದ್ಧ ಅಮೆರಿಕದ ಹೂಡಿಕೆದಾರರಿಗೆ ವಂಚನೆ ಮತ್ತು ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಹೊರಿಸಿತ್ತು.

ಏನಿದು ಆರೋಪ: ಅದಾನಿ ಗ್ರೀನ್ ಎನರ್ಜಿ ಮತ್ತು ಅಜುರೆ ಪವರ್ ಸಂಸ್ಥೆಗಳು ಭಾರತದಲ್ಲಿ ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ದರದಲ್ಲಿ ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ 250 ಮಿಲಿಯನ್ ಡಾಲರ್​ಗೂ ಅಧಿಕ ಮೊತ್ತದಷ್ಟು ಲಂಚ ನೀಡಲಾಗಿದೆ ಎಂಬುದು ಆರೋಪ. 2020-24ರ ಅವಧಿಯಲ್ಲಿ ಲಂಚಗಳನ್ನು ನೀಡಿದ ಅಥವಾ ನೀಡಲು ಯೋಜಿಸಿದ ಘಟನೆಗಳು ನಡೆದಿವೆ ಎಂದು ಹೇಳಲಾಗಿದೆ.

ನವೀಕರಿಸಬಹುದಾದ ಇಂಧನ ಕಂಪನಿಗಳಾದ ಅದಾನಿ ಗ್ರೀನ್ ಮತ್ತು ಅಜುರೆ ಪವರ್‌ಗೆ ಭಾರತ ಸರ್ಕಾರವು ನೀಡಿದ ಬಹು ಶತಕೋಟಿ ಡಾಲರ್ ಸೌರ ಶಕ್ತಿ ಯೋಜನೆಯನ್ನು ಲಾಭ ಮಾಡಿಕೊಳ್ಳಲು ಲಂಚದ ಯೋಜನೆಯನ್ನು ರೂಪಿಸಲಾಗಿದೆ ಎಂದು ಎಸ್‌ಇಸಿ ಆರೋಪಿಸಿದೆ.

ಈ ಮೂಲಕ ಅದಾನಿ ಗ್ರೂಪ್​ಗೆ ಹಿಂಡನ್ಬರ್ಗ್ ಬಳಿಕ ಮತ್ತೊಂದು ಗಂಡಂತಾರ ಎದುರಾಗಿದೆ. ಗೌತಮ್ ಅದಾನಿ ಸೇರಿದಂತೆ ಎಂಟು ಮಂದಿ ವಿರುದ್ಧ ಅಮೆರಿಕದಲ್ಲಿ ವಂಚನೆಯ ಆರೋಪಗಳು ದಾಖಲಾಗಿವೆ. ಕೆನಡಾದ ಪೆನ್ಷನ್ ಫಂಡ್ ಆದ ಸಿಡಿಪಿಕ್ಯೂನ ಮಾಜಿ ಎಂಡಿ, ಹಾಗು ಅಜುರೆ ಪವರ್ ಸಂಸ್ಥೆಯ ಮಾಜಿ ಎಕ್ಸಿಕ್ಯೂಟಿವ್ ಆದ ಸೈರಿಲ್ ಕೆಬನೆಸ್ ಅವರೂ ಆರೋಪಿತರಲ್ಲಿ ಸೇರಿದ್ದಾರೆ. ಗೌತಮ್ ಅದಾನಿ, ಸೈರಿಲ್ ಕೆಬನೆಸ್ ಅವರಲ್ಲದೆ, ಸಾಗರ್ ಅದಾನಿ, ವಿನೀತ್ ಜೈನ್, ರಂಜಿತ್ ಗುಪ್ತ, ಸೌರಭ್ ಅಗರ್ವಾಲ್, ದೀಪಕ್ ಮಲ್ಹೋತ್ರಾ, ರೂಪೇಶ್ ಅಗರ್ವಾಲ್ ಅವರು ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ಅಮೆರಿಕದ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಎಸ್​ಇಸಿ ನ್ಯೂಯಾರ್ಕ್​ನ ಡಿಸ್ಟ್ರಿಕ್ಟ್ ಕೋರ್ಟ್​ನಲ್ಲಿ ಗೌತಮ್ ಅದಾನಿ, ಸಾಗರ್ ಅದಾನಿ ಮತ್ತು ಸಿರಿಲ್ ಕೆಬನೆಸ್ ವಿರುದ್ಧ ಸಿವಿಲ್ ಚಾರ್ಜ್ ಹಾಕಿದೆ.

ಬಾಂಡ್ ಯೋಜನೆ ಕೈಬಿಟ್ಟ ಅದಾನಿ

ಅಮೆರಿಕಲ್ಲಿ ಕೋರ್ಟ್​ನಲ್ಲಿ ಗೌತಮ್ ಅದಾನಿ ಮತ್ತಿತರರ ವಿರುದ್ಧ ಆರೋಪಗಳು ದಾಖಲಾದ ಬೆನ್ನಲ್ಲೇ ಅದಾನಿ ಗ್ರೀನ್ ಎನರ್ಜಿ ಸಂಸ್ಥೆ ತನ್ನ 600 ಮಿಲಿಯನ್ ಯುಎಸ್ ಡಾಲರ್ ಬಾಂಡ್​ಗಳ ವಿತರಣೆಯ ಯೋಜನೆಯನ್ನು ಕೈಬಿಟ್ಟಿದೆ. ಈ ಬಾಂಡ್​ಗಳಿಗೆ ಸಾಕಷ್ಟು ಹೂಡಿಕೆದಾರರು ಅರ್ಜಿ ಹಾಕಿದ್ದರು. ಕೋರ್ಟ್​ನಲ್ಲಿ ಪ್ರಕರಣ ಬರುತ್ತಲ್ಲೇ ಸಂಸ್ಥೆ ತನ್ನ ನಡೆಯನ್ನು ಹಿಂಪಡೆದುಕೊಂಡಿದೆ.

ಈ ಬೆಳವಣಿಗೆ ಬೆನ್ನಲ್ಲೇ ಅದಾನಿ ಗ್ರೂಪ್​ನ ಬಹುತೇಕ ಎಲ್ಲಾ ಷೇರುಗಳ ಬೆಲೆ ಕುಸಿದಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು