LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಗ್ರಾಪಂಗಳಲ್ಲಿ ಮಕ್ಕಳು ತಮ್ಮ ಹಕ್ಕು ಕೇಳಿ ಪಡೆಯುವಂತಹ ವಾತಾವರಣ ನಿರ್ಮಾಣವಾಗಬೇಕು ಕೃಷಿ ಇಲಾಖೆ ಸಹಾಯಕ ನಿದೇರ್ಶಕ ಪ್ರಮೋದ್‍ಕುಮಾರ್ ಅಭಿಪ್ರಾಯ

ರಾಮನಗರ: ಸ್ಥಳೀಯ ಸರ್ಕಾರವಾಗಿರುವ ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಕೇಳಿ ಪಡೆಯುವಂತಹ ವಾತಾವರಣ ನಿರ್ಮಾಣವಾಗಬೇಕೆಂದು ಮಾರ್ಗದರ್ಶಿ ಅಧಿಕಾರಿಯಾಗಿ ಕೃಷಿ ಇಲಾಖೆ ಸಹಾಯಕ ನಿದೇರ್ಶಕ ಪ್ರಮೋದ್‍ಕುಮಾರ್ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಶ್ಯಾನುಭೋಗನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 2024-25ನೇ ಸಾಲಿನ ಮಕ್ಕಳ ಹಾಗೂ ವಿಶೇಷಚೇತನರ ವಿಶೇಷ ಗ್ರಾಮಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಕ್ಕಳ ಅಧ್ಯಕ್ಷತೆಯ ಲ್ಲಿಯೇ ಮಕ್ಕಳಿಗಾಗಿಯೇ ನಡೆಸುತ್ತಿರುವ ಗ್ರಾಮ ಸಭೆಯಲ್ಲಿ ಮಕ್ಕಳು ತಮಗಿರುವ ಸಮಸ್ಯೆಗಳ ಬಗ್ಗೆ ನಿರ್ಬಿತಿಯಿಂದ ಮುಕ್ತವಾಗಿ ತಿಳಿಸುವಂತೆ ಮಕ್ಕಳಲ್ಲಿ ಮನವಿ ಮಾಡಿದ ಅವರು ಮಕ್ಕಳ ಹಕ್ಕುಗಳ ರಕ್ಷಣೆ-ಸುರಕ್ಷತೆಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದೆ ಎಂದರು.

ಮಕ್ಕಳ ಮತ್ತು ವಿಕಲಚೇತನರ ಹಕ್ಕುಗಳ ಬಗ್ಗೆ ಮಾಹಿತಿ ಮತ್ತು ಅನುಷ್ಠಾನದ ಬಗ್ಗೆ ತಿಳಿಸಿದ ಅವರು ಸಮಗ್ರ ಅಭಿವೃದ್ದಿಗಾಗಿ ಗ್ರಾಪಂ ನಲ್ಲಿ ಸಿಗುವ ಸೌಲಭ್ಯಗಳನ್ನು ಬಳಕೆ ಮಾಡಿಕೊಳ್ಳಿ, ಉಚಿತ ಮತ್ತು ಕಡ್ಡಾಯ ಶಿಕ್ಷಣ 2009 ರ ಹಕ್ಕು ಕಾಯ್ದೆ ಮತ್ತು 2013 ರ ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆಗಳ ಮಹತ್ವದ ಬಗ್ಗೆ ತಿಳಿಸಿದ ಅವರು ಇದೇ ವೇಳೆ ಅಹವಾಲುಗಳನ್ನು ಸ್ವೀಕರಿಸಿದರು.

ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ ಎಂ.ರಾಜೇಗೌಡ ಮಾತನಾಡಿ ಸರ್ಕಾರದ ಸುತ್ತೋಲೆ ಯಂತೆ ಪ್ರತಿವರ್ಷ ಗ್ರಾಪಂ ವತಿಯಿಂದ ವಿಶೇಷ ಗ್ರಾಮ ಸಭೆಗಳನ್ನು ನಡೆಸುತ್ತಿದ್ದು, ಮಕ್ಕಳು ಬಾಲ್ಯದಿಂದಲೇ ಸಾಮಾಜಿಕ ವಿಷಯಗಳು ಮತ್ತು ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲು ಸಹಕಾರಿಯಾಗಲಿದೆ. ಅಷ್ಟೆ ಅಲ್ಲದೆ ಮಕ್ಕಳಲ್ಲಿ ಆತ್ಮಸ್ಥೈರ್ಯ ವೃದ್ದಿಯಾಗಲು ಗ್ರಾಮಸಭೆಗಳು ಪೂರಕವಾಗಿವೆ.

ಇದರ ಜೊತೆಗೆ ವಿಶೇಷಚೇತನರಿಗೆ ಸರ್ಕಾರದಿಂದ ಬರುವ ಅನುದಾನದಲ್ಲಿ ಶೇ 5% ರಷ್ಟು ಮೀಸಲಿರಿಸಿದ್ದು, ಅವರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗವಾಗುತ್ತಿದೆ. ಎಲ್ಲರೂ ಸಹ ಇಂತಹ ಸಭೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಹಕ್ಕುಗಳು ಹಾಗೂ ಸೌಲಭ್ಯಗಳನ್ನು ಪಡೆಯಿರಿ ಎಂದು ಮನವಿ ಮಾಡಿದರು.

ಕು.ಪುಣ್ಯಶ್ರೀ ಮತ್ತು ಚೇತನ್‍ಗೌಡ ಅವರುಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂದಿನಿ ಕೆ.ಎನ್, ಉಪಾದ್ಯಕೆ ಜಯಮ್ಮ, ಸದಸ್ಯರಾದ ನರಸಿಂಹಮೂರ್ತಿ, ಕೃಷ್ಣೇಗೌಡ, ಮಂಜುನಾಥ್, ಸತ್ಯನಾರಾಯಣ್, ನಂದಕುಮಾರ್, ಶೋಭಾ, ಗೌರಮ್ಮ, ನಾಗರತ್ನಮ್ಮ, ಗೋವಿಂದರಾಜು ಸೇರಿದಂತೆ ಶಾಲಾ ಮಕ್ಕಳು, ಮಹಿಳೆಯರು ಸಭೆಯಲ್ಲಿ ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು