LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ

ಗುಂಡ್ಲುಪೇಟೆ: ಕಂದಾಯ ಇಲಾಖೆಗೆ ಅಗತ್ಯ ಮೂಲಸೌಕರ್ಯ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ತಾಲ್ಲೂಕು ಕಚೇರಿ ಆವರಣದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿ  ಪ್ರತಿಭಟನೆ ನಡೆಸಿದರು.

ನಂತರ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಪಿ ಮಹದೇವಪ್ಪ ಮಾತನಾಡಿ ಬೇರೆ ಇಲಾಖೆಗಳಲ್ಲಿ ಇರುವಂತೆ ಕಂದಾಯ ಇಲಾಖೆಯಲ್ಲೂ ವರ್ಗಾವಣೆ ನೀತಿ ಜಾರಿಗೆ ತರಲು ಮಾರ್ಗಸೂಚಿ ರೂಪಿಸಬೇಕು. ಸುಸಜ್ಜಿತ ಕಚೇರಿ ಸೇರಿ ಮೂಲಸೌಕರ್ಯ ಒದಗಿಸಬೇಕು. ಜೀವ ಹಾನಿಯಾಗುವ ಗ್ರಾಮ ಆಡಳಿತ ಅಧಿಕಾರಿಗಳ ಕುಟುಂಬಕ್ಕೆ ಪರಿಹಾರ ಒದಗಿಸಬೇಕು. ಪ್ರಯಾಣ ಭತ್ಯೆ ಹೆಚ್ಚಿಸಬೇಕು. ಗ್ರಾಮಾಡಳಿತ ಅಧಿಕಾರಿಗಳ ಹುದ್ದೆಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಬೇಕು ಎಂದು ಗ್ರಾಮ ಆಡಳಿತಾಧಿಕಾರಿಗಳು ಆಗ್ರಹಿಸಿದ್ದಾರೆ.

ಇಲಾಖೆಗೆ ಅಗತ್ಯ ಇರುವ ಕಂಪ್ಯೂಟರ್, ಸ್ಕ್ಯಾನರ್, ಪ್ರಿಂಟರ್‍ಗಳನ್ನು ಒದಗಿಸಬೇಕು. ಮೊಬೈಲ್ ಆ?ಯಪ್ ಮೂಲಕ ಕೆಲಸ ಮಾಡಿ ಎನ್ನುತ್ತಾರೆ. ಆದರೆ, ಮೊಬೈಲ್ ಫೋನ್ ನೀಡುತ್ತಿಲ್ಲ, ಸ್ವಂತ ಮೊಬೈಲ್ ಫೋನ್‍ಗಳ ಮೂಲಕ ಇಲಾಖೆಯ ಕೆಲಸ ಮಾಡಲಾಗುತ್ತಿದೆ. 5 ವರ್ಷದಿಂದ ಬಡ್ತಿ ನೀಡುತ್ತಿಲ್ಲ ಎಂದು ದೂರಿದರು. ನೌಕರರ ಸಂಘದ ತಾ. ಅಧ್ಯಕ್ಷರಾದ ಕೃಷ್ಣಮೂರ್ತಿ ಮಾತನಾಡಿ ಕಳೆದ ನಾಲ್ಕು ತಿಂಗಳ ಹಿಂದೆ ಅನೇಕ ಬೇಡಿಕೆ ಈಡೇರಿಸುವಂತೆ ಧರಣಿ ನಡೆಸಲಾಗಿತ್ತು.

ಬೇಡಿಕೆ ಈಡೇರಿಸದ ಕಾರಣ ಈಗ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ರಾಜ್ಯ ಸಂಘದ ನಿರ್ಣಯದಂತೆ ಮುಂದಿನ ಒಂದು ತಿಂಗಳ ಕಾಲ ಸಾಮೂಹಿಕ ರಜೆಯನ್ನು ಹಾಕಲು ತೀರ್ಮಾನಿಸಿದ್ದು ಸಂಜೆ ವರೆಗೂ ಸಂಘದ ನಿರ್ಣಯದ ಪತ್ರಕ್ಕೆ ಕಾಯುತ್ತಿದ್ದೇವೆ ಎಂದರು.ಈ ಮೌನ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಉಲ್ಲಾಸ್, ಕಾರ್ಯದರ್ಶಿ ನದೀಮ್ ಹುಸೇನ್, ಖಜಾಂಚಿ ನಿತಿನ್ ಗೌಡ, ನಿರ್ದೇಶಕರಾದ ಮಹದೇವಪ್ಪ, ಭಗವಂತರಾಯ್, ದೇವಪ್ಪ ಪೂಜಾರಿ, ಸಂತೋಷ್, ವಿಜಯಲಕ್ಷ್ಮಿ, ವಿನಯ್ ಅನಿತಾ ರಾಣಿ, ದಾಕ್ಷಾಯಿಣಿ, ಪೂಜಾ  ಸೇರಿದಂತೆ ಗ್ರಾಮ ಆಡಳಿತ ಅಧಿಕಾರಿಗಳು ಭಾಗಿಯಾಗಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು