LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Davanagere

ಗ್ರಾಹಕರಿಗೆ ಸ್ಪಂದಿಸಿದಲ್ಲಿ ಮಾತ್ರ ಸಹಕಾರ ಸಂಘಗಳ ಅಭಿವೃದ್ಧಿ: ಶೋಭಾ ಉಮೇಶ್‍ಕುಮಾರ್

ದಾವಣಗೆರೆ: ಸಹಕಾರ ಸಂಘಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಗ್ರಾಹಕರೊಂದಿಗೆ ಉತ್ತಮವಾಗಿ ವ್ಯವಹಾರಿಸಿದಲ್ಲಿ ಮಾತ್ರ ಸಹಕಾರಿ ಸಂಘಗಳು ಪ್ರಗತಿ ಕಾಣಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕಿನ ನಿರ್ದೇಶಕರಾದ ಶೋಭಾ ಉಮೇಶ್‍ಕುಮಾರ್ ತಿಳಿಸಿದರು.

ಅವರು ದಾವಣಗೆರೆ ಜಿಲ್ಲೆಯ ಪತ್ತಿನ ಸಹಕಾರ ಸಂಘಗಳು, ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕುಗಳು ಹಾಗೂ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕರುಗಳಿಗೆ ಏರ್ಪಡಿಸಲಾದ ಒಂದು ದಿನದ ರಾಜ್ಯ ಮಟ್ಟದ ವಿಶೇಷ ಕಾರ್ಯದಕ್ಷತೆ ತರಬೇತಿ ಶಿಬಿರ ಉದ್ಘಾಟಿಸಿ ಮಾತಾನಾಡಿದರು. ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಎಷ್ಟೇ  ತರಬೇತಿ ಪಡೆದರೂ ಸಾಲದು, ಸಹಕಾರ ಕ್ಷೇತ್ರದಲ್ಲಿ ನಿತ್ಯ ಆಗುತ್ತಿರುವ ಬದಲಾವಣೆಗಳನ್ನು ತಿಳಿದುಕೊಳ್ಳಲು ಪ್ರತಿಯೊಬ್ಬ ಸಿಬ್ಬಂದಿ ಸದಾ ಉತ್ಸುಕರಾಗಬೇಕು, ಅಂಥಹ ಮೂಲ ತತ್ವಗಳನ್ನು ಈ ರೀತಿಯ ತರಬೇತಿಗಳು ಕಲಿಸಿಕೊಡುತ್ತವೆ.

ಸಹಕಾರ ಕ್ಷೇತ್ರದಿಂದ ದೇಶದ ಪ್ರಗತಿ ಸಾಧ್ಯ, ಸಹಕಾರ ಕ್ಷೇತ್ರವನ್ನು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ತರಬೇತಿ ಕಾರ್ಯಗಾರದ ಪ್ರಯೋಜನ ಪಡೆದುಕೊಂಡು ಸಂಘಗಳ ಪ್ರಗತಿಗೆ ಶ್ರಮಿಸಬೇಕೆಂದು ಕರೆ ನೀಡಿದರು.ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾದ ಸಿರಿಗೆರೆ ರಾಜಣ್ಣ ಮಾತಾನಾಡಿ ಜಿಲ್ಲೆಯಲ್ಲಿರುವ ಬಹುತೇಕ ಪತ್ತಿನ ಸಹಕಾರ ಸಂಘಗಳು ಆರ್ಥಿಕವಾಗಿ ಸಬಲಗೊಂಡಿರುತ್ತವೆ ಎಂದರು.

ಸಹಕಾರ ಸಂಘಗಳ ಉಪನಿಬಂಧಕರಾದ ಟಿ. ಮಧುಶ್ರೀನಿವಾಸ ಮಾತನಾಡಿ ಜಿಲ್ಲೆಯಲ್ಲಿ ಪತ್ತಿನ ಸಹಕಾರ ಸಂಘಗಳು ಈಗಾಗಲೇ ಗಣಕೀಕರಣಗೊಂಡಿರುತ್ತವೆ. ಆದರೆ ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳಂತಹ ಮೋಸದ ಘಟನೆಗಳು ಹೆಚ್ಚಾಗುತ್ತಿವೆ. ಇವುಗಳನ್ನು ತಡೆಯುವುದು ಎಲ್ಲಾ ಸಹಕಾರ ಸಂಘಗಳ ಸಿಬ್ಬಂದಿಗಳ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ತಮ್ಮ ಸಂಘದ ಸಾಫ್ಟ್ ವೇರ್ ಎಷ್ಟು ಸುರಕ್ಷಿತ ಎಂಬುದನ್ನು ತಿಳಿದುಕೊಳ್ಳುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸೆಕ್ಯುರಿಟಿ ಆಡಿಟ್‍ನ್ನು ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕರಾದ ಆರ್.ಜಿ ಶ್ರೀನಿವಾಸಮೂರ್ತಿ, ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷರಾದ ಬೇತೂರು ಟಿ. ರಾಜಣ್ಣ, ನಿರ್ದೇಶಕರಾದ ಡಿ.ಎಂ ಮುರಿಗೇಂದ್ರಯ್ಯ, ಒಕ್ಕೂಟದ ಸಿಬ್ಬಂದಿಗಳಾದ ಕೆ.ಎಂ ಜಗದೀಶ್, ವಿ. ರಂಗನಾಥ, ಆರ್. ಸ್ವಾಮಿ ಮತ್ತಿತರರು ತರಬೇತಿ ಕಾರ್ಯಗಾರದಲ್ಲಿ ಹಾಜರಿದ್ದರು. ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾಹಾಲಪ್ಪ ಕೋಡಿಹಳ್ಳಿ, ಒಕ್ಕೂಟದ ಜಿಲ್ಲಾ ಸಹಕಾರ ಶಿಕ್ಷಕರಾದ ಕೆ.ಹೆಚ್ ಸಂತೋಷ್‍ಕುಮಾರ್ ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು