LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಚನ್ನಪಟ್ಟಣ ಉಪಚುನಾವಣೆ: ಇಂದು ಮಹತ್ವದ ಸಭೆ

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರ ಮಹತ್ವದ ಸಮಾಲೋಚನೆ ಸಭೆ ನಡೆಯಲಿದೆ.ಇಂದು ಸಂಜೆ 6 ಗಂಟೆಗೆ ನಗರದ ಖಾಸಗಿ ಹೋಟೆಲ್‍ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪರಸ್ಪರ ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ.

ಈ ಸಭೆಯಲ್ಲಿ ಬಿಜೆಪಿಯ ಆರ್.ಅಶೋಕ್, ಅಶ್ವಥನಾರಾಯಣ್, ಜೆಡಿಎಸ್‍ನ ಸಿ.ಎಸ್.ಪುಟ್ಟರಾಜು ಸೇರಿದಂತೆ ಹಲವು ಜೆಡಿಎಸ್ ನಾಯಕರು ಪಾಲ್ಗೊಳ್ಳಲಿದ್ದಾರೆ.
ನಿನ್ನೆ ಯೋಗೀಶ್ವರ್ ಮತ್ತು ಜೆಡಿಎಸ್ ನಾಯಕರ ನಡೆದ ಸಂಧಾನ ಸಭೆ ಫಲಪ್ರದವಾಗಿಲ್ಲ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆಯುವ ಸಭೆಯಲ್ಲಿ ಎನ್‍ಡಿಎ ಅಭ್ಯರ್ಥಿ ಅಂತಿಮಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇದೇ ಸಂದರ್ಭದಲ್ಲಿ ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರ ಅಭ್ಯರ್ಥಿ ಆಯ್ಕೆ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗಿದೆ.ಚನ್ನಪಟ್ಟಣಕ್ಕೆ ಸಂಬಂಧಪಟ್ಟಂತೆ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕ್ಷೇತ್ರದ ಜಿಲ್ಲಾ ಪರಿಷತ್ ಮತ್ತು ನಗರಸಭೆ ಪ್ರಮುಖರೊಂದಿಗೂ ಬೆಂಗಳೂರು ಸಲಹಾ ಸಭೆ ಕರೆದಿದ್ದಾರೆ.

ಇಂದು ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಾಲೇಜೊಂದರಲ್ಲಿ ಪಕ್ಷದ ಪ್ರಮುಖರ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ಸಂಬಂಧ ನಾನು ಅವರ ತಿಳುವಳಿಕೆ ಮತ್ತು ಸಲಹೆಗಳನ್ನು ಪಡೆಯಬೇಕಾಗುತ್ತದೆ. ಇಂದಿನ ಸಭೆಯಲ್ಲಿ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರಲು ವರಿಷ್ಠರಿಗೆ ವರದಿ ಶಿಫಾರಸ್ಸು ಮಾಡುವುದಾಗಿ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು