LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೨೭೬ ಮತಗಟ್ಟೆ ಸ್ಥಾಪನೆ

ಚನ್ನಪಟ್ಟಣ: ಬಹಿರಂಗ ಪ್ರಚಾರ ಅಂತ್ಯಗೊಡ ನಂತರ ಮನೆ ಮನೆಗೆ ತೆರಳಿ ಪ್ರಚಾರ ಮಾಡಬಹುದು. ಮಾದರಿ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ೧೬ ಎಸ್‌ಎಸ್‌ಟಿ ತಂಡ ಮತ್ತು ೯ ಎಫ್‌ಎಸ್‌ಟಿ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ.ಗುರುಕಾರ್ ತಿಳಿಸಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೨೭೬ ಮತಗಟ್ಟೆಗಳನ್ನು ರಚಿಸಲಾಗಿದ್ದು, ಎಲ್ಲಾ ಮತಗಟ್ಟೆಗಳಿಗೆ ವೆಬ್ ಕಾಸ್ಟಿಂಗ್‌ಗೆ ಪ್ರಕ್ರಿಯೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ, ೧೧೯ ಮೈಕ್ರೋ ವೀಕ್ಷಕರನ್ನು ನಿಯೋಜಿಸಲಾಗಿದೆ. ಅವರು ಚುನಾವಣಾ ವೀಕ್ಷಕರ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಾರೆ ಎಂದು ಹೇಳಿದರು.
ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವ್ಯಕ್ತಿಯೊಬ್ಬರು ಗರಿಷ್ಠ ೫೦,೦೦೦ ರೂ.ಗಳ ನಗದನ್ನು ಸಾಗಿಸಬಹುದಾಗಿದೆ. ಅದಕ್ಕೂ ಹೆಚ್ಚಿನ ಮೊತ್ತ ಕೊಂಡೊಯ್ಯಬೇಕಾದರೆ ಅಗತ್ಯ ದಾಖಲಾತಿಗಳನ್ನು ಹೊಂದಿರಬೇಕು ಎಂದು ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರು ಮಾತನಾಡಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ೮ ಪ್ಯಾರಾ ಮಿಲಿಟರಿ ತಂಡ ಜಿಲ್ಲೆಗೆ ಆಗಮಿಸಿದೆ, ಅದರಲ್ಲಿ ೭ ಪ್ಯಾರಾ ಮಿಲಿಟರಿ ಪಡೆಯನ್ನು ೧೯೭ ಮತಗಟ್ಟೆಗಳ ಬಂದೋಬಸ್ತೆ÷್ಗ ನಿಯೋಜಿಸಲಾಗಿದೆ, ೧೧೯ ಕ್ರಿಟಿಕಲ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ ಒಬ್ಬರು ಪೊಲೀಸ್ ಹಾಗೂ ಒಬ್ಬರು ಗೃಹ ರಕ್ಷಕರು (ಹೋಮ್ ಗಾರ್ಡ್) ಇರುತ್ತಾರೆ. ಸಾಮಾನ್ಯ ಮತಗಟ್ಟೆಗಳಿಗೆ ಪೊಲೀಸ್ ಸಿಬ್ಬಂದಿ ಹಾಗೂ ೫೪ ಕ್ಲಸ್ಟರ್ ಮತಗಟ್ಟೆಗಳಿಗೆ ಎಎಸ್‌ಐ ರ‍್ಯಾಂಕ್ ಅಧಿಕಾರಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಇದೂವರೆಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಒಟ್ಟು ೧೪ ಪ್ರಕರಣಗಳನ್ನು ದಾಖಲಿಸಲಾಗಿದ್ದು, ೧೪ ಪ್ರಕರಣಗಳನ್ನು ಎಫ್‌ಐಆರ್ ಮಾಡಲಾಗಿದೆ. ಅವುಗಳಲ್ಲಿ ಪೊಲೀಸ್ ಇಲಾಖೆ ವ್ಯಾಪ್ತಿಗೆ ಒಳಪಡುವ ೯ ಅಬಕಾರಿ ಪ್ರಕರಣಗಳು ಸೇರಿವೆ, ೬೭೬ ಸೀರೆ/ವಸ್ತçಗಳನ್ನು ಜಫ್ತಿ ಮಾಡಲಾಗಿದೆ, ಈ ಪ್ರಕರಣಕ್ಕೆ ಸಂಬAಧಿಸಿದAತೆ ಮ್ಯಾನೇಜರ್ ಹಾಗೂ ಮತ್ತೊಬ್ಬರ ಮೇಲೆ ಎಫ್‌ಐಆರ್ ದಾಖಲಾಗಿದೆ ಎಂದರು.
ಹಣ ಇತರೆ ಆಮಿಷಗಳನ್ನೊಡುತ್ತಿದ್ದರೆ ದೂರು ದಾಖಲಿಸಲು ೧೯೫೦ಗೆ ಕರೆ ಮಾಡಬಹುದು ಅಥವಾ ಸಿ-ವಿಷಲ್ ಆಪ್ ಮೂಲಕ ದೂರು ನೀಡಬಹುದಾಗಿದೆ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ೨೦೨೩ರ ಕಲಂ ೧೬೩ರಂತೆ ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ೨೦೨೪ರ ನ.೧೨ರ ಮಂಗಳವಾರ ಸಂಜೆ ೬ ಗಂಟೆಯAAದ ನ.೧೪ರ ಗುರುವಾರ ಬೆಳಿಗ್ಗೆ ೬ ಗಂಟೆಯ ವರೆಗೆ ವಿವಿಧ ಷರತ್ತುಗಳನ್ನು ವಿಧಿಸಿ, ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ
ಚುನಾವಣಾ ಮತದಾನಕ್ಕೆ ಪಿಆರ್‌ಒ, ಎಪಿಆರ್‌ಓ ಹಾಗೂ ಪಿಒಎಸ್ ಸೇರಿದಂತೆ ೧,೨೫೨ ಮತಗಟ್ಟೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇವರಿಗೆ ಅಕ್ಟೋಬರ್ ೨೬ ಹಾಗೂ ನವೆಂಬರ್ ೫ ರಂದು ತರಬೇತಿಯನ್ನು ಸಹ ನೀಡಲಾಗಿದೆ ಹಾಗೂ ೧೧೯ ಮೈಕ್ರೋ ವೀಕ್ಷಕರಿಗೆ ನವೆಂಬರ್ ೫ ಹಾಗೂ ೮ ರಂದು ತರಬೇತಿ ನೀಡಲಾಗಿದೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು