LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರಿಂದ ಕನ್ನಡ ಜ್ಯೋತಿ ರಥಯಾತ್ರೆಗೆ ಚಾಲನೆ

ಚಿಕ್ಕಬಳ್ಳಾಪುರ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ರಥಯಾತ್ರೆಯು ರಾಜ್ಯದ ಮೂಲೆ ಮೂಲೆಗಳಲ್ಲಿ ಸಂಚರಿಸಿ ಕನ್ನಡ ನಾಡು, ನುಡಿ, ಸಂಸ್ಕೃತಿಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಅಭಿಮಾನವನ್ನು ಹಮ್ಮಿಕೊಂಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಕನ್ನಡ ರಥ ಯಾತ್ರೆಯು ಅದ್ದೂರಿ ಹಾಗೂ ಅರ್ಥ ಪೂರ್ಣ ಕಾರ್ಯಕ್ರಮವಾಗಿ, ಅಭಿಮಾನ ಪೂರ್ವಕವಾಗಿ ಸಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು.

ಬುಧವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ “ಕನ್ನಡ ಜ್ಯೋತಿ ರಥ ಯಾತ್ರೆಯ ಸ್ವಾಗತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕನ್ನಡ ನಾಡು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇಲ್ಲಿನ ಅನೇಕ ಕವಿಗಳು, ವಿಚಾರವಂತರು, ದೇಶಿಯ ಸಾಹಿತ್ಯ ಹಾಗೂ ಕನ್ನಡ ಸಾಹಿತ್ಯ ಲೋಕಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ ಎಂದರು.

ರಥಯಾತ್ರೆಯು ಅದ್ದೂರಿ ಗೌರವ ಸಮರ್ಪಣೆಯೊಂದಿಗೆ ಮೆರವಣಿಗೆಯು ಒಕ್ಕಲಿಗರ ಕಲ್ಯಾಣ ಮಂಟಪದಿಂದ ಆರಂಭವಾಗಿ ಬಿ.ಬಿ ರಸ್ತೆ, ಶಿಡ್ಲಘಟ್ಟ ವೃತ್ತ, ಎಂ.ಜಿ ರಸ್ತೆಯ ಮೂಲಕ ಡಿ.ವೈ.ಎಸ್.ಪಿ ಕಚೇರಿ, ಅಂಬೇಡ್ಕರ್ ಭವನ, ಉಪವಿಭಾಗಾಧಿಕಾರಿಗಳ ಕಚೇರಿಯ ಮುಂಭಾಗವರೆಗೂ ಸಾಗಿತು. ಮಹಿಳೆಯರು ಪೂರ್ಣಕುಂಭ ಕಳಶದೊಂದಿಗೆ ಸ್ವಾಗತಿಸಿದರು.

ಜಾನಪದ ಕಲಾತಂಡಗಳ ಮೆರವಣಿಗೆಗೆ ಮತ್ತಷ್ಟು ಮೆರಗು ನೀಡಿತು. ನಗರದ ಬೀದಿಗಳಲ್ಲಿ ಸಾರ್ವಜನಿಕರು ಕನ್ನಡರಥಕ್ಕೆ ಪುಷ್ಪನಮನ ಸಲ್ಲಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ನಗರಸಭೆ ಅಧ್ಯಕ್ಷರಾದ ಎ.ಗಜೇಂದ್ರ, ಉಪಾಧ್ಯಕ್ಷರಾದ ನಾಗರಾಜ್.ಜಿ, ತಹಸಿಲ್ದಾರ್ ಎಂ.ಅನಿಲ್, ತಾಪಂಕಾರ್ಯನಿರ್ವಾಣಾಧಿಕಾರಿ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶೇಷಾದ್ರಿ, ಮೇಲೂರು ಅಮರ್, ಡಾ.ಮಂಜುಳ, ಪ್ರೇಮಲೀಲ, ಅನಮ್ಮ,ವಿವಿಧ ಕನ್ನಡ ಪರ ಸಂಘ ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು, ಸದಸ್ಯರು, ಕನ್ನಡ ಪ್ರೇಮಿಗಳು, ಸ್ಥಳೀಯ ಜನಪ್ರತಿನಿಧಿಗಳು, ಶಾಲಾ ಮಕ್ಕಳು, ಸಾರ್ವಜನಿಕರು ರಥ ಯಾತ್ರೆಯಲ್ಲಿ ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು