LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಚಿಕ್ಕಮಗಳೂರು: ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ, ಆರೋಗ್ಯ ಇಲಾಖೆ ಅಲರ್ಟ್​ ಘೋಷಣೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು  ಜಿಲ್ಲೆಯಲ್ಲಿ ಮಂಗನ ಕಾಯಿಲೆಯ (KFD) ಭೀತಿ ಮತ್ತೆ ಆವರಿಸಿದೆ. ವರ್ಷಪೂರ್ತಿ ದಾಖಲೆ ಮಳೆ ಸುರಿಯುವ ಚಿಕ್ಕಮ ಈ ವರ್ಷ ಜನವರಿಯಲ್ಲಿ ಮಂಗನ ಕಾಯಿಲೆ ಆತಂಕ ಎದುರಾಗಿದೆ. ಹಗಲಲ್ಲಿ ರಣ ಬಿಸಿಲು, ಸಂಜೆಯಾಗುತ್ತಿದ್ದಂತೆ ಭಾರೀ ಚಳಿ ಈ ರೀತಿಯಾದ ಹವಾಮಾನ ವೈಪರಿತ್ಯಕ್ಕೆ ಜನ ಹೈರಾಣಾಗಿದ್ದಾರೆ. ಈ ಮಧ್ಯೆ ಮಂಗನ ಕಾಯಿಲೆ ಕೂಡ ಜನರಲ್ಲಿ ಭೀತಿ ಹುಟ್ಟಿಸಿದೆ. ಮಲೆನಾಡಿಗರು ಮಂಗನಕಾಯಿಲೆಯಿಂದ ಕಂಗಾಲಾಗಿದ್ದಾರೆ.

ಆರಂಭದಲ್ಲಿ ತೀವ್ರ ಸ್ವರೂಪ ಪಡೆದಿರುವ ಮಂಗನ ಕಾಯಿಲೆ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಮತ್ತಿಖಂಡ‌ ಗ್ರಾಮದ 25 ವರ್ಷದ ಯುವಕನಲ್ಲಿ ಕಾಣಿಸಿಕೊಂಡಿದೆ.‌ ತೀವ್ರ ಜ್ವರದಿಂದ‌ ಬಳಲುತ್ತಿದ್ದ ಯುವಕನ ರಕ್ತ ಪರೀಕ್ಷೆಯಲ್ಲಿ‌ ಮಂಗನ ಕಾಯಿಲೆ ಬಂದಿರುವ ದೃಢವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಯುವಕನನ್ನ ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕಳೆದ‌ ವರ್ಷ ಚಿಕ್ಕಮಗಳೂರು ಜಿಲ್ಲೆಯಲ್ಲಿ 132 ಜನರಲ್ಲಿ ಕಾಯಿಲೆ ಕಾಣಿಸಿಕೊಂಡು ನಾಲ್ವರನ್ನು ಬಲಿ ಪಡೆದಿತ್ತು. ಕಾಡಂಚಿನ ತಾಲೂಕುಗಳಾದ ಚಿಕ್ಕಮಗಳೂರು, ಕೊಪ್ಪ, ಎನ್​ಆರ್​ಪುರ, ಶೃಂಗೇರಿ ತಾಲೂಕುಗಳಲ್ಲಿ ಮಂಗನ ಕಾಯಿಲೆ ತನ್ನ ರುದ್ರರೂಪ ತಾಳುವ ಮುನ್ನ ಅರೋಗ್ಯ ಇಲಾಖೆ ಮಂಗನ ಕಾಯಿಲೆ ಅಲರ್ಟ್ ಘೋಷಣೆ ಮಾಡಿ‌ ಮಂಗನ ಕಾಯಿಲೆ‌ ಪತ್ತೆಯಾಗಿರುವ ಚಿಕ್ಕಮಗಳೂರು ಜಿಲ್ಲೆಯ ಖಾಂಡ್ಯ ಹೋಬಳಿ ಮತ್ತಿಖಂಡ‌ ಗ್ರಾಮದಲ್ಲಿ ಉಣ್ಣೆಗಳನ್ನ ಸಂಗ್ರಹ ಮಾಡಲಾಗಿದೆ. ಅರಣ್ಯದಲ್ಲಿ ಮಂಗಗಳು ಸಾವನ್ನಪ್ಪಿರುವ ಕುರಿತು ಮಾಹಿತಿ ಸಂಗ್ರಹ ಮಾಡಲಾಗಿದೆ.

ಗಾಯದ ಮೇಲೆ ಬರೆ ಎಂಬಂತೆ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಆತಂಕ ಹುಟ್ಟಿಸಿದೆ. ಕಳೆದ ವರ್ಷ ನಾಲ್ವರನ್ನು ಬಲಿ ‌ಪಡೆದು, ಇದೀಗ ಮತ್ತೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ರಣಕೇಕೆ ಆರಂಭಿಸಿರುವ ಮಂಗನ ಕಾಯಿಲೆ ಮಲೆನಾಡಿಗರ ಆತಂಕಕ್ಕೆ ಕಾರಣವಾಗಿದೆ. ಈ ಮಹಾಮಾರಿ ರೋಗ ತೀವ್ರ ಸ್ವರೂಪ ಪಡೆಯದಂತೆ ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದ್ದು, ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿ ಸುತ್ತಮುತ್ತಲಿನ ಗ್ರಾಮದಲ್ಲಿ DMPA ತೈಲ ಸೇರಿದಂತೆ ಮನೆ ಮನೆಗಳಿಗೆ ತೆರಳಿ ಜಾಗೃತಿ ಮೂಡಿಸಿದ್ದು ಅರಣ್ಯಗಳಿಗೆ ತೆರಳದಂತೆ ಎಚ್ಚರಿಕೆ ನೀಡಿದೆ.

ಒಟ್ಟಾರೆ, ಕಳೆದ ಏಳೆಂಟು ವರ್ಷಗಳಲ್ಲಿ ತೀವ್ರ ಸ್ವರೂಪದಲ್ಲಿ ಕಾಣಿಸಿಕೊಳ್ಳದ ಮಂಗನ ಕಾಯಿಲೆ 2024 ರಲ್ಲಿ ತನ್ನ ರೌದ್ರ ರೂಪ ತಾಳಿತ್ತು. ಮಲೆನಾಡಿನ ತಾಲೂಕುಗಳಲ್ಲಿ ಜೀವ ಭಯ ತರಿಸಿತ್ತು. ಈ ಮಂಗನ ಕಾಯಿಲೆ ಎಂಬ ಮಹಾಮಾರಿ ಸದ್ದಿಲ್ಲದೆ ಮತ್ತೆ ಅಟ್ಯಾಕ್ ಮಾಡುತ್ತಿದ್ದು ಕೂಡಲೇ ಎಚ್ಚೆತ್ತುಕೊಳ್ಳದಿದ್ದರೆ ಮತ್ತಷ್ಟು ಅನಾಹುತವಾಗುವುದರಲ್ಲಿ ಎರಡು ಮಾತಿಲ್ಲ. ಹೀಗಾಗಿ, ಜಿಲ್ಲಾ ಆರೋಗ್ಯ ಇಲಾಖೆ ಕೂಡ ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಆದರೆ, ಆರೋಗ್ಯ ಇಲಾಖೆ ನೀಡಿರುವ ಮಾರ್ಗದರ್ಶನವನ್ನು ಗ್ರಾಮಸ್ಥರು ಪಾಲಿಸಿ‌ ಹೇಗೆ ಸಹಕರಿಸುತ್ತಾರೆ ಅನ್ನೋದೆ ಯಕ್ಷಪ್ರಶ್ನೆಯಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು