LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಚಿತ್ರದ ಮೂಲಕ ಜನರ ಮನ ಗೆದ್ದ "ಮಾವು ಬೇವು" ಈಗ ಪುಸ್ತಕರೂಪದಲ್ಲಿ

ಶ್ರೀ ಸಾಯಿಗಗನ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎಸ್ ರಾಜಶೇಖರ್ ಅವರು ನಿರ್ಮಿಸಿರುವ, ಸುಚೇಂದ್ರ ಪ್ರಸಾದ್ ನಿರ್ದೇಶಿಸಿರುವ ಹಾಗೂ ಸಂದೀಪ್, ಚೈತ್ರ, ಡ್ಯಾನಿ ಕುಟ್ಟಪ್ಪ, ಶ್ರೀನಿವಾಸಮೂರ್ತಿ ಮುಂತಾದವರು ಅಭಿನಯಿಸಿರುವ ಸಂಗೀತ ಸುಭಗದ ಕನ್ನಡ ಕಥಾಚಿತ್ರ "ಮಾವು ಬೇವು" ಬಿಡುಗಡೆಯಾಗಿ ಎಲ್ಲರ ಮನಸ್ಸಿಗೆ ಹತ್ತಿರವಾಗಿತ್ತು.

ಹಲವು ಚಲನಚಿತ್ರೋತ್ಸವಗಳಲ್ಲೂ ಪ್ರದರ್ಶನಗೊಂಡು ಪ್ರಶಸ್ತಿಯ ಜೊತೆಗೆ ಮೆಚ್ಚುಗೆಯನ್ನು ಪಡೆದಿತ್ತು. ಈಗ ಈ ಚಿತ್ರ ಆಕರ ಗ್ರಂಥವಾಗಿ ಹೊರಹೊಮ್ಮಿದೆ. ಕಾವ್ಯ ಸ್ಪಂದನ ಪಬ್ಲಿಕೇಶನ್ ನ ಭದ್ರಾವತಿ ರಾಮಾಚಾರಿ ಅವರು ಇದನ್ನು ಪ್ರಕಟಿಸಿದ್ದಾರೆ. ಇತ್ತೀಚೆಗೆ "ಮಾವು ಬೇವು" ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಖ್ಯಾತ ಸಾಹಿತಿ ಪದ್ಮಶ್ರೀ ದೊಡ್ಡರಂಗೇಗೌಡ, ನಟಿ ತಾರಾ ಅನುರಾಧಾ, ಡಾ|ವಿಜಯ ಲಕ್ಷ್ಮೀ ದೇಶಮಾನೆ, ಲಹರಿ ವೇಲು ಹಾಗೂ ನಿಡಸಾಲೆ ಪುಟ್ಟಸ್ವಾಮಯ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಈ ಆಕರ ಗ್ರಂಥವನ್ನು ಲೋಕಾರ್ಪಣೆ ಮಾಡಿದರು.

ಚಿತ್ರದಲ್ಲಿ ನಟಿಸಿರುವ ಸಂದೀಪ್, ಚೈತ್ರ, ಡ್ಯಾನಿ ಕುಟ್ಟಪ್ಪ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಿರ್ಮಾಪಕ ಎಸ್ ರಾಜಶೇಖರ್ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ನಂತರ ನಿರ್ದೇಶಕ ಸುಚೇಂದ್ರ ಪ್ರಸಾದ್ ಮಾತನಾಡಿದರು.ಸಂಗೀತ ಸುಭಗದ ಕನ್ನಡ ಕಥಾಚಿತ್ರ "ಮಾವು ಬೇವು" ನನ್ನ ರಚನೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದ ಚಿತ್ರ. ಎಸ್ ರಾಜಶೇಖರ್ ಅವರು ನಿರ್ಮಿಸಿರುವ "ಮಾವು ಬೇವು" ಚಿತ್ರವನ್ನು ಈಗ ಆಕರ ಗ್ರಂಥವಾಗಿ ಪುಸ್ತಕರೂಪದಲ್ಲಿ ಕಾವ್ಯ ಸ್ಪಂದನ ಪ್ರಕಾಶನದ ಭದ್ರಾವತಿ ರಾಮಾಚಾರಿ ಅವರು ಹೊರ ತಂದಿದ್ದಾರೆ.

ಈ ಪುಸ್ತಕಕ್ಕೆ ಖ್ಯಾತ ಸಹಿತಿಗಳಾದ ಹೆಚ್ ಎಸ್ ವೆಂಕಟೇಶ್ ಮೂರ್ತಿ, ಬಿ.ಆರ್ ಲಕ್ಷ್ಮಣ್ ರಾವ್, ನಿರ್ದೇಶಕ ಲಿಂಗದೇವರು ಮುಂತಾದವರು ಬೆನ್ನುಡಿ ಬರೆದಿದ್ದಾರೆ. ಚಿತ್ರ ಸಾಗಿ ಬಂದ ಬಗ್ಗೆ ಈ ಪುಸ್ತಕದಲ್ಲಿ ವಿವರಣೆ ಇದೆ. ಇಂದು ಆಗಮಿಸಿ ಈ ಆಕರ ಗ್ರಂಥವನ್ನು ಲೋಕಾರ್ಪಣೆ ಮಾಡಿದ ಪ್ರತಿಯೊಬ್ಬ ಗಣ್ಯರಿಗೂ ತುಂಬು ಹೃದಯದ ಧನ್ಯವಾದಗಳು ಎಂದರು ನಿರ್ದೇಶಕ ಸುಚೇಂದ್ರ ಪ್ರಸಾದ್.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು