LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಚಿತ್ರೀಕರಣ ಮುಗಿಸಿದ ಹೊಸತರ

"ಹೊಸತರ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. "ಹೊಸತರ" ನನ್ನ ನಿರ್ದೇಶನದ ಮೊದಲ ಚಿತ್ರ. ಆರ್ ಜಿ ವಿ ಎಂಬ ಪ್ರಮುಖಪಾತ್ರದ ಸುತ್ತ ಈ ಚಿತ್ರದ ಕಥೆ ನಡೆಯುತ್ತದೆ. ಸಸ್ಪೆನ್ಸ್, ಥ್ರಿಲ್ಲರ್, ಕಾಮಿಡಿ ಮುಂತಾದ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಚಿತ್ರದಲ್ಲಿದೆ. ಜೈವಿಜಯ್ ಪ್ರೊಡಕ್ಷನ್ ಲಾಂಛನದಲ್ಲಿ ಗುಲ್ಬರ್ಗ ಮೂಲದ ಶ್ರೀವಿಜಯ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕಥೆ ಹಾಗೂ ಚಿತ್ರಕಥೆ ಸ್ವಲ್ಪ ವಿಭಿನ್ನವಾಗಿರುವುದರಿಂದ ಚಿತ್ರಕ್ಕೆ "ಹೊಸತರ" ಎಂದು ಹೆಸರಿಡಲಾಗಿದೆ.

ರಾಜೀವ್ ಗನೇಸನ್ ಛಾಯಾಗ್ರಹಣ, ರಾಜು ಎಮ್ಮಿಗಾನೂರು ಸಂಗೀತ ನಿರ್ದೇಶನ, ಆಂಥೋನಿ ಪಯಾನೋ(ಕೆನಡಾ) ಹಿನ್ನೆಲೆ ಸಂಗೀತ ಹಾಗೂ ಬಾಬು ಶಿವಪುರ ಅವರ ಸಂಕಲನವಿರುವ ಈ ಚಿತ್ರಕ್ಕೆ ಅಮೇರಿಕಾದ ಜೆ ಹೆಚ್ ಜೆ ಸ್ಟುಡಿಯೋ ವಿ ಎಫ್ ಎಕ್ಸ್ ಮಾಡಲಿದೆ. ಉತ್ತಮ ಗುಣಮಟ್ಟದಲ್ಲಿ ಚಿತ್ರ ಮೂಡಿ ಬರಲಿದೆ. "ಸಾರಿ" ಚಿತ್ರದ ನಿರ್ದೇಶಕ ಬ್ರಹ್ಮ, ಖುಷಿ ಕೊಠಾರಿ, ನವ್ಯಾ, ರಣವೀರ್, ನಾಗರಾಜ ಗುಬ್ಬಚ್ಚಿ, ಸೆವೆನ್ ರಾಜ್, ಸ್ವರ್ಣಚಂದ್ರ ಮುಂತಾದವರು ತಾರಾಬಳಗದಲ್ಲಿದ್ದಾರೆ. ನಾನು ಕೂಡ ಮುಖ್ಯಪಾತ್ರದಲ್ಲಿ ನಟಿಸಿದ್ದೇನೆ. ಡಿಸೆಂಬರ್ ವೇಳೆಗೆ "ಹೊಸತರ" ನಿಮ್ಮ ಮುಂದೆ ಬರಲಿದೆ ಎಂದು ನಿರ್ದೇಶಕ ಅಫ್ಜಲ್ ತಿಳಿಸಿದರು.

ಸಿನಿಮಾ ಆಸೆಗಾಗಿ ಹಳ್ಳಿಯಿಂದ ಸಿಟಿಗೆ ಬಂದ ಮುಗ್ದ ಹುಡುಗನ ಪಾತ್ರ ನನ್ನದು. ಆರ್ ಜಿವಿ ನನ್ನ ಪಾತ್ರದ ಹೆಸರು ಎಂದರು ನಟ ಬ್ರಹ್ಮ.ನಾನು ಈ ಚಿತ್ರದಲ್ಲಿ ಸಾಫ್ಟ್‍ವೇರ್ ಉದ್ಯೋಗಿ. ನೇತ್ರ ನನ್ನ ಪಾತ್ರದ ಹೆಸರು ಎಂದರು ನಾಯಕಿ ಖುಷಿ ಕೊಠಾರಿ.ಚಿತ್ರದಲ್ಲಿ ಅಭಿನಯಿಸಿರುವ ನಾಗರಾಜ ಗುಬ್ಬಚ್ಚಿ, ರಣವೀರ್ ಹಾಗೂ ಛಾಯಾಗ್ರಾಹಕ ರಾಜೀವ್ ಗಣೇಸನ್ "ಹೊಸತರ" ಚಿತ್ರದ ಬಗ್ಗೆ ಮಾತನಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು