LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಚಿನ್ಮಯಿ ಕೃಷ್ಣದಾಸ್ ಬಂಧನ ಖಂಡಿಸಿ ಪ್ರತಿಭಟನೆ: ಭಾರತದ ಹೈಕಮಿಷನರ್‌ಗೆ ಬಾಂಗ್ಲಾದೇಶ ಸಮನ್ಸ್‌

ಢಾಕಾ: ತ್ರಿಪುರಾ ರಾಜಧಾನಿ ಅಗರ್ತಲಾದ ತನ್ನ ಅಸಿಸ್ಟೆಂಟ್ ಹೈ ಕಮಿಷನ್‌ ಕಚೇರಿ ಮೇಲಿನ ದಾಳಿಗೆ ಸೋಮವಾರ ತೀವ್ರ ಪ್ರತಿಭಟನೆ ದಾಖಲಿಸಿದ್ದ ಬಾಂಗ್ಲಾದೇಶ ಮಂಗಳವಾರ ಈ ಸಂಬಂಧ ಭಾರತದ ಹೈಕಮಿಷನರ್ ಪ್ರಣಯ್ ವರ್ಮಾ ಅವರಿಗೆ ಸಮನ್ಸ್‌ ನೀಡಿದೆ.

"ನಾವು ನಮ್ಮ ಕಳವಳವನ್ನು ವ್ಯಕ್ತಪಡಿಸಲು ಅವರಿಗೆ(ವರ್ಮಾ) ವಿದೇಶಾಂಗ ಸಚಿವಾಲಯಕ್ಕೆ ಬರುವಂತೆ ತಿಳಿಸಲಾಗಿತ್ತು" ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು ಸಂಕ್ಷಿಪ್ತವಾಗಿ ತಿಳಿಸಿದ್ದಾರೆ.

ಅಗರ್ತಲಾ ಘಟನೆಯ ನಂತರ ಭಾರತೀಯ ರಾಯಭಾರಿಯನ್ನು ವಿದೇಶಾಂಗ ಕಚೇರಿಗೆ ಬರುವಂತೆ ತಿಳಿಸಲಾಗಿತ್ತು ಎಂದು ವಿದೇಶಾಂಗ ವ್ಯವಹಾರಗಳ ಸಲಹೆಗಾರ ಮೊಹಮ್ಮದ್ ತೌಹಿದ್ ಹೊಸೈನ್ ಈ ಹಿಂದೆ ಹೇಳಿದ್ದರು.

ಮತ್ತೊಂದೆಡೆ, ಭಾರತ, ಬಾಂಗ್ಲಾದೇಶದೊಂದಿಗೆ "ಸ್ಥಿರವಾದ, ರಚನಾತ್ಮಕ ಸಂಬಂಧ" ಹೊಂದಲು ಬಯಸುತ್ತದೆ. ಯಾವುದೇ ಒಂದು ಸಮಸ್ಯೆಯು ದ್ವಿಪಕ್ಷೀಯ ಸಂಬಂಧಗಳಿಗೆ ಅಡ್ಡಿಯಾಗಬಾರದು ಎಂದು ವರ್ಮಾ ತಿಳಿಸಿದ್ದಾರೆ.

"ನಾವು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದೊಂದಿಗೆ ಮಾತುಕತೆ ನಡೆಸಲು ಸಿದ್ಧರಿದ್ದೇವೆ" ಎಂದು ಅವರು ಹಂಗಾಮಿ ವಿದೇಶಾಂಗ ಕಾರ್ಯದರ್ಶಿ ರಿಯಾಜ್ ಹಮೀದುಲ್ಲಾ ಅವರೊಂದಿಗಿನ ಸಭೆಯಿಂದ ಹೊರಬಂದ ನಂತರ ಸುದ್ದಿಗಾರರಿಗೆ ತಿಳಿಸಿದರು.

ಬಾಂಗ್ಲಾದೇಶ ಗಡಿಯಲ್ಲಿರುವ ಈಶಾನ್ಯ ರಾಜ್ಯ ತ್ರಿಪುರದ ರಾಜಧಾನಿ ಅಗರ್ತಲಾದಲ್ಲಿ ಹಿಂದೂ ಮುಖಂಡ ಚಿನ್ಮೋಯ್ ಕೃಷ್ಣದಾಸ್ ಅವರ ಬಂಧನವನ್ನು ಖಂಡಿಸಿ ತೀವ್ರ ಪ್ರತಿಭಟನೆ ನಡೆಸಿತ್ತು. ಈ ವೇಳೆ ಜನರ ಗುಂಪೊಂದು ಅಸಿಸ್ಟೆಂಟ್ ಹೈ ಕಮಿಷನ್‌ ಕಚೇರಿ ಆವರಣಕ್ಕೆ ನುಗ್ಗಿ ಗೇಟ್, ಧ್ವಜಸ್ತಂಭ ಹಾಳು ಮಾಡಿತ್ತು. ಈ ಘಟನೆಗೆ ಭಾರತ ಸೋಮವಾರ "ತೀವ್ರ ವಿಷಾದ" ವ್ಯಕ್ತಪಡಿಸಿತ್ತು.

ಪ್ರತಿಭಟನಾಕಾರರು ಬಾಂಗ್ಲಾದೇಶದ ಸಹಾಯಕ ಹೈಕಮಿಷನ್‌ಗೆ ನುಗ್ಗಿ ವಿಧ್ವಂಸಕ ಕೃತ್ಯವೆಸಗಿದ್ದಾರೆ ಎಂದು ವರದಿಯಾದ ಗಂಟೆಗಳ ನಂತರ ವಿದೇಶಾಂಗ ವ್ಯವಹಾರಗಳ ಸಚಿವಾಲಯ(MEA) ವಿಷಾದ ವ್ಯಕ್ತಪಡಿಸಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು