LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಚೆಲುವರಾಯಸ್ವಾಮಿ ವಿರುದ್ಧ ಅಶೋಕ್ ವಾಗ್ದಾಳಿ

ಬೆಂಗಳೂರು: ಸ್ವಾಮಿ ಸಚಿವ ಚೆಲುವರಾಯಸ್ವಾಮಿ ಅವರೇ, ಮಾಧ್ಯಮಗಳ ಮುಂದೆ ಬಾಯಿಗೆ ಬದಂತೆ ಬಡಬಡಾಯಿಸುವುದು ಬಿಟ್ಟು ತಮ್ಮ ಖಾತೆ ನಿರ್ವಹಣೆ ಬಗ್ಗೆ ಸ್ವಲ್ಪ ಗಮನ ಕೊಡಿ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿರುಗೇಟು ನೀಡಿದ್ದಾರೆ.

ಈ ಸಂಬಂಧ ಎಕ್ಸ್ ಮಾಡಿರುವ ಅವರು, ಇಷ್ಟಕ್ಕೂ ತಮ್ಮ ಖಾತೆ ಯಾವುದು ಎಂದು ತಮಗೆ ನೆನಪಿದೆಯೇ ಚಲುವರಾಯಸ್ವಾಮಿ ಅವರೇ? ಸಿಎಂ ಸಿದ್ದರಾಮಯ್ಯ ಅವರ ಬಣದಲ್ಲಿ ಇರಬೇಕೋ ಅಥವಾ ಡಿಸಿಎಂ ಡಿಕೆ ಶಿವಕುಮಾರ್ ಅವರ ಬಣದಲ್ಲಿ ಗುರುತಿಸಿಕೊಳ್ಳಬೇಕೋ ಎಂಬ ತ್ರಿಶಂಕು ಸ್ಥಿತಿಯಲ್ಲಿರುವ ತಮಗೆ, ಸಂಪುಟ ಪುನಾರಚನೆ ಆದರೆ ಅಥವಾ ಮುಖ್ಯಮಂತ್ರಿ ಬದಲಾದರೆ ತಮ್ಮ ಕುರ್ಚಿ ಉಳಿಯುತ್ತದೆಯೋ ಇಲ್ಲವೋ ಎಂಬ ಗೊಂದಲದಲ್ಲಿ ಇರುವ ತಮಗೆ ಪಾಪ ತಮ್ಮ ಖಾತೆ, ತಮ್ಮ ಕರ್ತವ್ಯದ ಬಗ್ಗೆ ಹೇಗೆ ನೆನಪಿರಲು ಸಾಧ್ಯ ಎಂದಿದ್ದಾರೆ.
ತಾವು ಜವಾಬ್ದಾರಿ ಹೊತ್ತಿರುವ ಖಾತೆ ಎಂತಹದ್ದು, ಅದರ ಪ್ರಾಮುಖ್ಯತೆ ಏನು, ಗಂಭೀರತೆ ಏನು, ಆ ಇಲಾಖೆಯನ್ನ ಈ ಹಿಂದೆ ಎಂತೆಂತಹ ಮುತ್ಸದ್ಧಿ ನಾಯಕರು ನಿರ್ವಹಿಸಿದ್ದರು ಎಂಬ ಕನಿಷ್ಠ ಅರಿವಾದರೂ ತಮಗಿದೆಯೇ? ಇಷ್ಟಕ್ಕೂ ಕಳೆದ 20 ತಿಂಗಳಲ್ಲಿ ಕೃಷಿ ಸಚಿವರಾಗಿ ತಮ್ಮ ಸಾಧನೆಯಾದರೂ ಏನು?

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಕಳೆದ 20 ತಿಂಗಳುಗಳಲ್ಲಿ ರಾಜ್ಯದ 3,000 ರೈತರು ಆತ್ಮಹತ್ಯೆಗೆ ಶರಣಾಗಿದ್ದರೂ ತಮಗೆ ಕಳಕಳಿ ಇಲ್ಲ ಎಂದ ಅವರು, ?ಬರ, ನೆರೆ ಬಂದಾಗ ಸಮಯಕ್ಕೆ ಸರಿಯಾಗಿ ರೈತರಿಗೆ ಪರಿಹಾರ ಕೊಡಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲ. ಸಕಾಲಕ್ಕೆ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲು ನಿಮ್ಮ ಕೈಲಾಗಲಿಲ್ಲ. ನಾನು ಮಧ್ಯಪ್ರವೇಶ ಮಾಡಿ 24 ಗಂಟೆಯೊಳಗೆ ಖರೀದಿ ಕೇಂದ್ರ ತೆರೆಯದಿದ್ದರೆ ಬೀಗ ಜಡಿಯಬೇಕಾಗಿತ್ತದೆ ಎಂದು ಎಚ್ಚರಿಕೆ ಕೊಟ್ಟ ಮೇಲೆ ಎಚ್ಚೆತ್ತುಕೊಂಡಿದ್ದೀರಿ. ಇದು ನಿಮ್ಮ ಸರ್ಕಾರ ಯೋಗ್ಯತೆ ಎಂದು ತಿವಿದಿದ್ದಾರೆ.

ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ಕಬ್ಬು ಪೂರೈಸಿದ 14 ದಿನಗಳಲ್ಲಿ ಬಿಲ್ ಮೊತ್ತ ಪಾವತಿಸಬೇಕು ಎಂಬ ಕಾಯ್ದೆ ಇದ್ದರೂ ಸಹ, ನಿಯಮವನ್ನ ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ಇಲ್ಲ. ತೊಗರಿ ಖರೀದಿ ಕೇಂದ್ರಆರಂಭಿಸಲು ವಿಳಂಬವಾದ ಕಾರಣ ಉತ್ತರ ಕರ್ನಾಟಕದ ರೈತರು ಸಿಕ್ಕಷ್ಟು ಬೆಲೆಗೆ ತೊಗರಿ ಮಾರಿ ನಷ್ಟ ಅನುಭವಿಸುತ್ತಿದ್ದರೂ ತಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇಲ್ಲ. ಇದು ನಿಮ್ಮ ಕಾರ್ಯವೈಖರಿ. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ದಿನಬೆಳಗಾದರೆ ರೈತರು ಆತಹತ್ಯಗೆ ಶರಣಾಗುತ್ತಿದ್ದರೂ, ಅವರ ಸಮಸ್ಯೆ ಬಗೆಹರಿಸುವುದು ಇರಲಿ,

ಕನಿಷ್ಠ ಪಕ್ಷ ತಮ್ಮ ತವರು ಜಿಲ್ಲೆಯ ಸಂತ್ರಸ್ತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವ ಸೌಜನ್ಯವೂ ತಮಗಿಲ್ಲ. ಮೊನ್ನೆ ನಾನು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾದ ಶ್ರೀಮತಿ ಪ್ರೇಮ ಹಾಗು ಅವರ ಮಗ ಶ್ರೀ ರಂಜಿತ್ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಸಹಾಯಧನ ನೀಡಿದ ಮೇಲೆ ಪಾಪ ತಮಗೆ ಜ್ಞಾನೋದಯವಾಗಿದೆ ಎಂದು ತಿಳಿಸಿದ್ದಾರೆ.

ಈಗಿರುವ ಕಾನೂನಿನ ಚೌಕಟ್ಟಿನಲ್ಲಿಯೇ ಮೈಕ್ರೋ ಫೈನಾನ್ಸ್ ಕಂಪನಿಗಳ ಸಮಸ್ಯೆಗೆ ಕಡಿವಾಣ ಹಾಕಬಹುದು ಎಂದು ರಾಜ್ಯಪಾಲರು ಅಭಿಪ್ರಾಯ ಪಟ್ಟಿದ್ದಾರೆ. ಇದರಲ್ಲಿ ತಪ್ಪೇನಿದೆ? ರಾಜ್ಯಪಾಲರ ಅಭಿಪ್ರಾಯದ ಬಗ್ಗೆ ತಮ್ಮ ಸರ್ಕಾರಕ್ಕೆ ತಕರಾರಿದ್ದರೆ ಅವರಿಗೆ ಪತ್ರ ಬರೆದು, ಅವರನ್ನ ಭೇಟಿಯಾಗಿ ಮನವರಿಕೆ ಮಾಡಿಕೊಡಿ. ಅದು ಬಿಟ್ಟು ಸಾಂವಿಧಾನಿಕ ಹುದ್ದೆಯಲ್ಲಿರುವವರ ಮೇಲೆ ರಾಜಕೀಯ ಟೀಕೆ ಮಾಡುವುದು, ಬಿಜೆಪಿ ವಕ್ತಾರರು ಎಂದು ಆಪಾದನೆ ಮಾಡುವುದು ಎಷ್ಟು ಸರಿ? ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರಗಳಿದ್ದಾಗ ಯಾವ್ಯಾವ ರಾಜ್ಯದ ರಾಜ್ಯಪಾಲರು ಹೇಗೆ ನಡೆದುಕೊಂಡಿದ್ದಾರೆ ಎಂಬ ಇತಿಹಾಸ ಇಡೀ ದೇಶದ ಜನತೆಗೆ ಚೆನ್ನಾಗಿ ಗೊತ್ತಿದೆ. ಈ ರೀತಿ ಅನಾವಶ್ಯಕ ಹೇಳಿಕೆಗಳನ್ನು ಕೊಟ್ಟು ಟೈಂಪಾಸ್ ಮಾಡುವ ಬದಲು ತಮ್ಮ ಇಲಾಖೆಯ ಕೆಲಸ ನಿರ್ವಹಣೆ ಮಾಡುವ ಕಡೆ ಗಮನ ಕೊಡಿ. ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ತಮ್ಮ ಕರ್ತವ್ಯ ಪಾಲಿಸಿ ಮತದಾರರ ಋಣ ತೀರಿಸಿ ಎಂದು ಸಲಹೆ ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು