LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಚೋಳೇನಹಳ್ಳಿ ಕೆರೆ ಸಮಗ್ರ ಅಭಿವೃದ್ಧಿ: ಸಚಿವ ಕೆ.ಎನ್.ರಾಜಣ್ಣ

ಮಧುಗಿರಿ: ತಾಲ್ಲೂಕಿನ ಕಸಬಾ ಹೋಬಳಿಯ ಚೋಳೇನಹಳ್ಳಿ ಕೆರೆಯನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ಪ್ರಸ್ತುತ ಕೆರೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ದೋಣಿ ವಿಹಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಈ ಕೆರೆಯಲ್ಲಿ ನೀರು ಕಡಿಮೆಯಾದಾಗ ಕೆರೆ ಹೂಳನ್ನು ಎತ್ತಿಸಲಾಗುವುದು ಎಂದರು. ಈ ಕೆರೆ ನೋಡಲು ಸುಂದರವಾಗಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಈ ಕೆರೆಯಲ್ಲಿ ಶಾಶ್ವತವಾಗಿ ದೋಣಿ ವಿಹಾರದ ವ್ಯವಸ್ಥೆಯನ್ನು ಮಾಡಿಸಲಾಗುವುದು ಎಂದು ತಿಳಿಸಿದರು.

ಚೋಳೇನಹಳ್ಳಿ ಕೆರೆ ತುಂಬಿದ ಪ್ರತಿ ವರ್ಷದಲ್ಲಿ ದಂಡಿನ ಮಾರಮ್ಮ ದೇವಿಯ ತೆಪ್ಪೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಗುವುದು. ಅದಕ್ಕಾಗಿ ಕೆರೆಯೊಳಗೆ ಶಾಶ್ವತವಾಗಿ ವೇದಿಕೆಗಳನ್ನು ನಿರ್ಮಿಸಲಾಗುವುದು ಎಂದರು.ಫೆ.10 ರ ನಂತರ ನಗರ ವ್ಯಾಪ್ತಿಯ 30 ಲಕ್ಷ ಆಸ್ತಿಗೆ ಬಿ - ಖಾತಾ ನೀಡಲು ಈಗಾಗಲೇ ಸರ್ಕಾರ ತೀರ್ಮಾನ ಮಾಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಬಿ - ಖಾತಾ ಪಡೆದರಿಗೂ ಸಾಲ - ಸೌಲಭ್ಯಗಳನ್ನು ನೀಡಬೇಕೆಂದು ತಿಳಿಸಿದರು.

ಮಧುಗಿರಿ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕೆಂದು ಈಗಾಗಲೇ ಮುಖ್ಯ ಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಸೂಕ್ತ ಸಮಯದಲ್ಲಿ ಮಧುಗಿರಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುತ್ತಾರೆ ಎಂದು ತಿಳಿಸಿದರು.ಏಕಾಶಿಲಾ ಬೆಟ್ಟಕ್ಕೆ ರೋಫ್ ವೇ ಯೋಜನೆಯ ಕಾಮಗಾರಿಗೆ ಶೀಘ್ರವಾಗಿ ಚಾಲನೆ ನೀಡಲಾಗುವುದು ಹಾಗೂ ಒಂದೇ ವರ್ಷದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಲೋಕಾರ್ಪಣೆಗೊಳಿಸಲಾಗುವುದು ಎಂದರು.ಉಪವಿಭಾಗಾಧಿಕಾರಿ ಗೊಟೋರು ಶಿವಪ್ಪ , ತಹಶೀಲ್ದಾರ್ ಶಿರಿನ್ ತಾಜ್, ತಾ.ಪಂ.ಇಒ ಲಕ್ಷ್ಮಣ್ , ಮಧುಗಿರಿ ವಿದ್ಯಾಸಂಸ್ಥೆ ಅಧ್ಯಕ್ಷ ಎಂ.ವಿ.ಶ್ರೀನಿವಾಸ್, ರಾಜ್ಯ ಸಹಕಾರ ಮಹಾ ಮಂಡಳ ನಿರ್ದೇಶಕ ಎನ್.ಗಂಗಣ್ಣ , ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ, ಸದಸ್ಯರಾದ ಎಂ.ಶ್ರೀಧರ್, ಅಲೀಮ್, ಮಂಜುನಾಥ್ ಆಚಾರ್, ಸುರೇಶ್ ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು