LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಛತ್ತೀಸ್‌ಗಢ: ಎಸ್‌ಯುವಿ ಕಾರು, ಟ್ರಕ್ ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ ಆರು ಮಂದಿ ಸಾವು

ಬಲೋದ್: ಛತ್ತೀಸ್‌ಗಢದ ಬಲೋದ್ ಜಿಲ್ಲೆಯಲ್ಲಿ ಟ್ರಕ್‌ ಮತ್ತು ಎಸ್‌ಯುವಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಭಾನುವಾರ ತಡರಾತ್ರಿ ದೌಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಜಿಲ್ಲೆಯ ಗುಂಡರ್‌ದೇಹಿ ಪ್ರದೇಶದಲ್ಲಿ ಸಂಬಂಧಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು ಎಂದು ಅವರು ಹೇಳಿದ್ದಾರೆ.

"ಕಾರು ಮತ್ತು ಟ್ರಕ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಎಸ್‌ಯುವಿಯಲ್ಲಿದ್ದ 13 ಪ್ರಯಾಣಿಕರಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಇಲ್ಲಿನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರನ್ನು ದುರ್ಪತ್ ಪ್ರಜಾಪತಿ(30), ನಾಲ್ವರು ಮಹಿಳೆಯರು - ಸುಮಿತ್ರಾ ಬಾಯಿ ಕುಂಭಕರ್(50), ಮನಿಶಾ ಕುಂಭಕರ್(35), ಸಗುನ್ ಬಾಯಿ ಕುಂಭಕರ್(50) ಮತ್ತು ಇಮ್ಲಾ ಬಾಯಿ(55) ಮತ್ತು ಅಪ್ರಾಪ್ತ ಬಾಲಕ ಜಿಗ್ನೇಶ್ ಕುಂಭಕರ್(7) ಎಂದು ಗುರುತಿಸಲಾಗಿದೆ.

ಐವರು ಮಹಿಳೆಯರು ಮತ್ತು ಮಗು ಸೇರಿದಂತೆ ಏಳು ಗಾಯಗೊಂಡ ವ್ಯಕ್ತಿಗಳನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ರಾಜನಂದಗಾಂವ್ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು