LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಜನಪ್ರಿಯ ಗಾಯಕಿ ಕೆ.ಎಸ್.ಚಿತ್ರ ಅವರ ಕಂಠಸಿರಿಯಲ್ಲಿ `1990 s' ಚಿತ್ರದ ಇಂಪಾದ ಗೀತೆ

ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ ಅ ಒ ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ನಾಯಕ, ನಾಯಕಿಯಾಗಿ ನಟಿಸಿರುವ "1990s" ಚಿತ್ರಕ್ಕಾಗಿ ಮೋಹಿನಿ ಹಾಗೂ ಮಂಜು ಅವರು ಬರೆದಿರುವ "ಮಳೆ ಹನಿಯೆ" ಎಂಬ ಹಾಡು ಇತ್ತೀಚಿಗೆ ಬಿಡಯಾಗಿದೆ.

ಹಿರಿಯ ಕಲಾ ನಿರ್ದೇಶಕ ಕನಕರಾಜ್ ಈ ಹಾಡನ್ನು ಅನಾವರಣ ಮಾಡಿದರು. ಭಾರತದ ಜನಪ್ರಿಯ ಗಾಯಕಿ ಕೆ.ಎಸ್ ಚಿತ್ರ ಅವರ ಗಾಯನದಲ್ಲಿ ಮೂಡಿಬಂದಿರುವ ಈ ಸುಮಧುರ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮಹಾರಾಜ ಅವರು ಈ ಮನಮೋಹಕ ಹಾಡಿಗೆ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
"1990"s ಚಿತ್ರ ಮೊದಲೆ ಹೇಳಿದಂತೆ 90 ರ ಕಾಲಘಟ್ಟದ ಪ್ರೇಮ ಕಥಾನಕ. ಈ ಚಿತ್ರದಲ್ಲಿ ಮಹಾರಾಜ ಅವರು ಸಂಗೀತ ನೀಡಿರುವ ಎಲ್ಲಾ ಹಾಡುಗಳು ಅದ್ಭುತವಾಗಿದೆ.

ಇಂದು ಬಿಡುಗಡೆಯಾಗಿರುವ " ಮಳೆ ಹನಿಯೆ" ಹಾಡನ್ನು ಚಿತ್ರ ಅವರ ಧ್ವನಿಯಲ್ಲಿ ಕೇಳುವುದೆ ಸೊಗಸು. ಹಾಡು ಬಿಡುಗಡೆಯಾಗಿರುವುದರಿಂದ ಸಂಗೀತ ನಿರ್ದೇಶಕರೆ ಹೆಚ್ಚು ಮಾತನಾಡಲಿ ಎಂದರು ನಿರ್ದೇಶಕ ಸಿ.ಎಂ.ನಂದಕುಮಾರ್.ಮನಸ್ಸು ಮಲ್ಲಿಗೆ ಕ್ರಿಯೇಷನ್ಸ್ ಸಂಸ್ಥೆಯ ಮೂಲಕ ನಿರ್ಮಾಣ ಮಾಡಿರುವ ನವಿರಾದ ಪ್ರೇಮಕಥೆ "1990"s ಚಿತ್ರದಿಂದ ಮಲ್ಲಿಗೆಯಂತಹ ಹಾಡೊಂದು ಬಿಡುಗಡೆಯಾಗಿದೆ. ನಮ್ಮ ಚಿತ್ರವನ್ನು ನೋಡಿ.  ಪ್ರೋತ್ಸಾಹ ನೀಡಿ. ನಾನು ಈ ಚಿತ್ರದ ನಿರ್ಮಾಪಕರಲ್ಲೊಬ್ಬ ಹಾಗೂ ನಾಯಕಿಯ ತಂದೆಯ ಪಾತ್ರಧಾರಿಯೂ ಹೌದು. ಎಂದರು ಅರುಣ್ ಕುಮಾರ್.

ಇಂದು ಲಹರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ "ಮಳೆ ಹನಿಯೇ" ಹಾಡು, ಗಾಯಕಿ ಚಿತ್ರ ಅವರು ಕೇವಲ ಮೂರು ಗಂಟೆಗಳ ಕಾಲದಲ್ಲಿ ಹಾಡಿ ಮುಗಿಸಿರುವ ಹಾಡು ಎಂದು ಹಾಡಿನ ಬಗ್ಗೆ ಸಂಗೀತ ನಿರ್ದೇಶಕ ಮಹಾರಾಜ ಮಾಹಿತಿ ನೀಡಿದರು. ನಾಯಕ ಅರುಣ್, ನಾಯಕಿ ರಾಣಿ ವರದ್, ಛಾಯಾಗ್ರಾಹಕ ಹಾಲೇಶ್, ಸಾಹಸ ನಿರ್ದೇಶಕ ಅಶೋಕ್, ನೃತ್ಯ ನಿರ್ದೇಶಕ ಸಾದಿಕ್ ಸರ್ದಾರ್, ಸಂಕಲನಕಾರ ಕೃಷ್ಣ ವಿತರಕ ರಮೇಶ್ 1990" s ಬಗ್ಗೆ ಮಾತನಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು