LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಜನವರಿ ಮಾಹೆಯಿಂದ ಸೆಪ್ಟೆಂಬರ್ ಮಾಹೆಯವರೆಗೆ ಜಿಲ್ಲೆಯಲ್ಲಿ 45 ದೌರ್ಜನ್ಯ ಪ್ರಕರಣಗಳು ದಾಖಲು ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ಶೀಘ್ರ ಕ್ರಮವಹಿಸಿ: ಡಾ.ಎನ್.ಶಿವಶಂಕರ್

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2024ನೇ ಕ್ಯಾಲೆಂಡರ್ ವರ್ಷದ 3ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಯಾವುದೇ ರೀತಿಯ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ಶೀಘ್ರವಾಗಿ ಪ್ರಕರಣ ದಾಖಲಿಸಿ ಅದರ ವಿರುದ್ಧ ಕ್ರಮ ಕೈಗೊಂಡು, ಮುನ್ನೆಚ್ಚರಿಕಾ ಕ್ರಮವಾಗಿ ಇಂತಹ ಘಟನೆಗಳು ಸಂಭವಿಸದಂತೆ ಅಧಿಕಾರಿಗಳು ಎಚ್ಚರ ವಹಿಸಲು ಸೂಚನೆ ನೀಡಿದರು.

ಎಲ್ಲಾ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಕುಂದುಕೊರತೆ ಸಭೆಯನ್ನು ಪ್ರತಿ 3 ತಿಂಗಳಿಗೊಮ್ಮೆ ವರ್ಷದಲ್ಲಿ ಒಟ್ಟು 4 ಸಭೆಗಳನ್ನು ನಡೆಸಬೇಕಾಗಿದ್ದು, 2024ನೇ ಕ್ಯಾಲೆಂಡರ್ವರ್ಷಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಸಭೆಗಳನ್ನು ಶೀಘ್ರವಾಗಿ ನಡೆಸಿ ಎಂದು ಹೇಳಿದರು.ಉಪವಿಭಾಗದ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ವರ್ಷದಲ್ಲಿ ಒಟ್ಟು ನಾಲ್ಕು ಸಭೆಗಳನ್ನು ನಡೆಸಬೇಕಾಗಿರುತ್ತದೆ, ಈಗಾಗಲೇ ದೊಡ್ಡಬಳ್ಳಾಪುರ ವಿಭಾಗದಲ್ಲಿ ಒಂದು ಸಭೆ ನಡೆಸಲಾಗಿದ್ದು, ಇನ್ನು ಬಾಕಿ ಇರುವ 3 ಸಭೆಗಳು ನಡೆಸಲು ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆಯಲ್ಲಿ ಪ್ರಕರಣಗಳು ದಾಖಲಾದ ಕೂಡಲೇ ಪ್ರಥಮ ವರ್ತಮಾನ ವರದಿ ಆಧಾರದ ಮೇಲೆ ಪರಿಹಾರ ಧರವನ್ನು ಮಂಜೂರು ಮಾಡಬೇಕಾಗಿರುವುದರಿಂದ ಪ್ರಥಮ ವರ್ತಮಾನ ವರದಿ ಹಾಗೂ ಇತರ ದಾಖಲಾತಿಗಳನ್ನು ಜಿಲ್ಲಾ ತಾಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಕಳುಹಿಸಲು ತಿಳಿಸಿದರು.

ದೌರ್ಜನ್ಯ ಪ್ರಕರಣಗಳ ದಾಖಲು, ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿದ ಅವರು 2024ರ ಜುಲೈ. 1 ರಿಂದ 2024ರ ಸೆಪ್ಟೆಂಬರ್. 22 ವರೆಗೆ ಒಟ್ಟು 78 ಜನ ಸಂತ್ರಸ್ತರಿಗೆ ಒಟ್ಟು ರೂ. 51,02,500/- ಗಳ ಪರಿಹಾರ ಧನವನ್ನು ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣಗಳಲ್ಲಿ ತನಿಖೆಯನ್ನು ಪೂರ್ಣಗೊಳಿಸುವ ಚಾರ್ಜ್ ಶೀಟ್ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಳ್ಳೆಯ ಪ್ರಗತಿ ಇದೆ ಎಂದು ಹೇಳಿದರು.ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ಹಾಗೂ ಗಲಭೆ/ಗುಂಪು ಗಲಭೆಗಳು ಹೆಚ್ಚಾಗಿ ಕಂಡುಬಂದ ಹಳ್ಳಿಗಳನ್ನು ಗುರುತಿಸಿ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಶಾಂತಿಸಭೆ ನಡೆಸಲು ನಿರ್ದೇಶನ ನೀಡಿದರು.

ಪೊಲೀಸ್ ಠಾಣೆಗಳಲ್ಲಿ ನಡೆಯುವ ಕುಂದು ಕೊರತೆ ಸಭೆಗಳಿಗೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರನ್ನು ಆಹ್ವಾನಿಸಿದ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳ ಬಳಿ ಪಡೆದುಕೊಂಡರು.ಜನವರಿ ಮಾಹೆಯಿಂದ ಸೆಪ್ಟೆಂಬರ್ ಮಾಹೆಯ ವರೆಗೆ ಜಿಲ್ಲೆಯಲ್ಲಿ ದಾಖಲಾದ ದೌರ್ಜನ್ಯ ಪ್ರಕರಣಗಳ ಸಂಖ್ಯೆ 45 ಆಗಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ನೆಲಮಂಗಲ ತಾಲ್ಲೂಕು ತಹಶೀಲ್ದಾರ್ ಅಮೃತ್ ಆತ್ರೇಶ, ಡಿವೈಎಸ್ಪಿ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪ್ರೇಮಾ ಟಿ.ಎಲ್.ಎಸ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು