LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಜನವರಿ 05 ರಂದು ಘಾಟಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ ಕಾರ್ಯಕ್ರಮ ಬ್ರಹ್ಮರಥೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಬೆಂ.ಗ್ರಾ: ದೊಡ್ಡಬಳ್ಳಾಪುರದ ಪ್ರಸಿದ್ಧ ಶ್ರೀ ಘಾಟಿ ಸುಬ್ರಮಣ್ಯಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ಕಾರ್ಯಕ್ರಮವು ಜನವರಿ 05 ರಂದು ಜರುಗಲಿದ್ದು, ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ನಡೆಯಲಿರುವ ಬ್ರಹ್ಮರಥೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜ.05 ರಂದು ಶ್ರೀ ಘಾಟಿ ಸುಬ್ರಮಣ್ಯ ದೇವಾಲಯದ ಬ್ರಹ್ಮರಥೋತ್ಸವ ನಡೆಯ ಲಿದೆ. ರಥೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವುದರಿಂದ ಯಾವುದೇಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದರು.

ಡಿ.20 ರಿಂದ 30 ವರೆಗೆ ದನಗಳ ಜಾತ್ರೆ: ಘಾಟಿ ದನಗಳ ಜಾತ್ರೆಗೆ ವಿವಿಧ ಭಾಗಗಳಿಂದ ಸಾಕಷ್ಟು ಜಾನುವಾರುಗಳು ಆಗಮಿಸಲಿದ್ದು ರಾಸುಗಳಿಗೆ ಕುಡಿಯುವ ನೀರು, ಮೇವು, ಲಸಿಕೆ, ದನಗಳ ಕಟ್ಟಿಹಾಕುವ ಶೆಡ್ ಗಳಿಗೆ ಸಮರ್ಪಕ ವಿದ್ಯುತ್ ಸಂಪರ್ಕ, ರೈತರಿಗೆ ಉಚಿತ ಊಟದ ವ್ಯವಸ್ಥೆ ಕಲ್ಪಿಸಿ ಎಂದು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಬ್ರಹ್ಮ ರಥೋತ್ಸವಕ್ಕೆ ಆಗಮಿಸುವ ಸಾರ್ವಜನಿಕರಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ, ಪಾರ್ಕಿಂಗ್ ಸ್ಥಳಕ್ಕೆ ತೆರಳಲು ಸೂಚನಾ ಫಲಕ ಅಳವಡಿಸುವ ಮೂಲಕ ವಾಹನ ದಟ್ಟಣೆ ಆಗದಂತೆ ಕ್ರಮ ವಹಿಸಿ ಎಂದರಲ್ಲದೆ, ಬ್ರಹ್ಮ ರಥೋತ್ಸವ ದಿನ ಹೆಚ್ಚುವರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಿ. ಸಾರ್ವಜನಿಕರು ಪಾರ್ಕಿಂಗ್ ಸ್ಥಳದಿಂದ ದೇವಾಲಯಕ್ಕೆ ತೆರಳಲು ಹಾಗೂ ಮರಳಲು ಉಚಿತ ವಾಹನ ವ್ಯವಸ್ಥೆ ಮಾಡಿ ಎಂದರು.

ಸಾರ್ವಜನಿಕರಿಗೆ ಉಚಿತ ಊಟದ ವ್ಯವಸ್ಥೆ, ಕುಡಿಯುವ ನೀರನ್ನು ವ್ಯವಸ್ಥಿತವಾಗಿ ಪೂರೈಸಿ ಹಾಗೂ ಹೆಚ್ಚುವರಿಯಾಗಿ ತಾತ್ಕಾಲಿಕ ಶೌಚಾಲಯಗಳನ್ನು ಒದಗಿಸಿ ಎಂದು ಘಾಟಿ ದೇವಾಲಯದ ಅಧಿಕಾರಿಗಳಿಗೆ ಸೂಚಿಸಿದರು.ಪ್ಲಾಸ್ಟಿಕ್ ಬಳಕೆ ನಿಷೇಧಜಾತ್ರಾ ಮಹೋತ್ಸವದಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ದೇವಾಲಯ ಆವರಣದಲ್ಲಿರುವ ಅಂಗಡಿ ಮಳಿಗೆಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿ ಸಾರ್ವಜನಿಕರು ಕೂಡ ಪ್ಲಾಸ್ಟಿಕ್ ಬಳಸದಂತೆ ಜಿಲ್ಲಾಧಿಕಾರಿಯವರು ಮನವಿ ಮಾಡಿದರು.

ದೇವಾಲಯದ ಸುತ್ತಮುತ್ತಲೂ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕಾಗಿ ನಗರಸಭೆಯಿಂದ ಪೌರಕಾರ್ಮಿಕರನ್ನು ನೇಮಿಸುವಂತೆ ಪೌರಾಯುಕ್ತರಿಗೆ ಸೂಚಿಸಿದರು. ತುರ್ತು ಆರೋಗ್ಯ ಚಿಕಿತ್ಸಾ ಕೇಂದ್ರ ಹಾಗೂ ಅಂಬುಲೆನ್ಸ್ ಸೇವೆ ಒದಗಿಸುವಂತೆ ಆರೊಗ್ಯಾಧಿಕಾರಿಗಳಿಗೆ ಸೂಚಿಸಿದರು. ಜಾತ್ರಾ ಮಹೋತ್ಸವದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಪೊಲಿಸ್ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಹಾಗೂ ಘಾಟಿ ಸುಬ್ರಮಣ್ಯ ದೇವಾಲಯದ ಆಡಳಿತಾಧಿಕಾರಿ ಅಮರೇಶ ಹೆಚ್, ಜಿ. ಪಂ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಡಿವೈಎಸ್ಪಿ ರವಿ, ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತ ದಿನೇಶ್, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿಭಾವಿದ್ಯಾ ರಾಥೋಡ್, ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಂ. ನಾರಾಯಣಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು